ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಐವರ ವಿರುದ್ದ ಪ್ರಕರಣ ದಾಖಲು
ಪುತ್ತೂರು,ಸೆ.4: ವಿಚಾರಣೆ ನಡೆಸುವ ಸಂದರ್ಭದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಪುತ್ತೂರು ತಾಲೂಕಿನ ಒಳಮೊಗರು ಗ್ರಾಮದ ಕುಂಬ್ರ ಎಂಬಲ್ಲಿನ ಐವರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಪುಂಜ ಸಮೀಪದ ರೆಸಾರ್ಟ್ ಒಂದರಲ್ಲಿ ಜೋಡಿಯೊಂದು ಪಾರ್ಟಿ ನಡೆಸುತ್ತಿತ್ತು ಆ ವೇಳೆ ಅಲ್ಲಿಗೆ ತೆರಳಿದ್ದ ಕುಂಬ್ರ ನಿವಾಸಿಗಳಾದ ಸಲಾಂ, ಮುಕ್ತಾರ್ , ಆಸಿಫ್ ಮತ್ತು ರಫೀಕ್ ಹಾಗೂ ಆಶಿಕ್ ಎಂಬವರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಜೋಡಿಯನ್ನು ಠಾಣೆಗೆ ಕರೆದುಕೊಂಡು ಬಂದಿದ್ದು, ಆ ಸಂದರ್ಭದಲ್ಲಿ 5 ಮಂದಿ ಯುವಕರನ್ನು ಕರೆತಂದಿದ್ದರು. ವಿಚಾರಣೆ ವೇಳೆ ಐದು ಮಂದಿ ಯುವಕರು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Next Story





