ಸೆ.21ಕ್ಕೆ ಬಿಬಿಎಂಪಿ ಮೇಯರ್ ಚುನಾವಣೆ?

ಬೆಂಗಳೂರು, ಸೆ.4: ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ಸೆ.21ರಂದು ನಡೆಯುವ ಸಾಧ್ಯತೆಗಳಿವೆ. ಈ ಸಂಬಂಧ ಮುಂದಿನ ವಾರ ಚನಾವಣಾ ವೇಳಾಪಟ್ಟಿ ಪ್ರಕಟಗೊಳ್ಳಲಿದೆ.
ಮೇಯರ್ ಮಂಜುನಾಥ ರೆಡ್ಡಿಯ ಅಧಿಕಾ ರಾವಧಿ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ನೂತನ ಮೇಯರ್ ಹಾಗೂ ಉಪ ಮೇಯರ್‌ಸ್ಥಾನಗಳಿಗೆ ಸೆ.19ಕ್ಕೆ ಚುನಾವಣೆ ನಡೆಯಬೇ ಕಿತ್ತು. ಆದರೆ, ಇಲ್ಲಿಯವರೆಗೂ ಮೇಯರ್ ಚುನಾವಣೆಗೆ ಸಂಬಂಧ ಮತದಾರರ ಪಟ್ಟಿಯನ್ನು ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಿಲ್ಲ. ಹೀಗಾಗಿ ಚುನಾವಣೆಯ ದಿನಾಂಕವನ್ನು ಮುಂದೂಡ ಲಾಗುತ್ತಿದೆ.
ಮತದಾರರ ಪಟ್ಟಿ ಕೈ ಸೇರಿದ ಬಳಿಕ ಪ್ರಾದೇಶಿಕ ಆಯುಕ್ತರು ಪರಿಶೀಲನೆ ನಡೆಸುತ್ತಾರೆ. ಆ ನಂತರವೆ ಚುನಾವಣೆಯ ಪ್ರಕ್ರಿಯೆ ಆರಂಭಿಸಬೇಕು. ಹೀಗಾಗಿ ಮತದಾರರ ಪಟ್ಟಿ ಸಿಗದೆ ಯಾವುದೆ ಪ್ರಕ್ರಿಯೆ ಕೈಗೊಳ್ಳು ವಂತಿಲ್ಲ. ಮುಂದಿನವಾರ ಮತದಾರರ ಪಟ್ಟಿಯನ್ನು ಸಲ್ಲಿಸುವ ಸಾಧ್ಯತೆಯಿದೆ.
ಈ ಮಧ್ಯೆ ಬಿಬಿಎಂಪಿಯಲ್ಲಿ ಅಧಿಕಾರದ ಸೂತ್ರ ಹಿಡಿಯಲು ವಿವಿಧ ಪಕ್ಷಗಳ ಶಾಸಕರು ಕೂಡ ನಗರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಗೊಳಿಸುವ ತಂತ್ರಗಾರಿಕೆಯಲ್ಲಿ ತೊಡಗಿಸಿ ಕೊಂಡಿರುವುದರಿಂದ ಬಿಬಿಎಂಪಿ ಮತದಾರರ ಪಟ್ಟಿಯನ್ನು ಪ್ರಾದೇಶಿಕ ಆಯುಕ್ತರಿಗೆ ಇನ್ನು ಸಲ್ಲಿಸಿಲ್ಲ ಎನ್ನಲಾಗಿದೆ.
ಈ ನಡುವೆ ಪ್ರಾದೇಶಿಕ ಆಯುಕ್ತೆ ಎಂ.ವಿ. ಜಯಂತಿ ಚುನಾವಣೆಗೆ ಸಂಬಂಧಪಟ್ಟಂತೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ದರು. ಚುನಾವಣೆಗೆ ಸಂಬಂಧಿಸಿ ದಂತೆ ಅಗತ್ಯ ತರಬೇತಿ ಕಾರ್ಯಾಗಾರಗಳನ್ನು ನಡೆಸಿದ್ದಾರೆ. ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.
ಕೇವಲ 14 ಸ್ಥಾನಗಳನ್ನು ಹೊಂದಿರುವ ಜೆಡಿಎಸ್ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ನಿರ್ಣಾಯಕ ಪಕ್ಷವಾಗಿದೆ. ಇದೇ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಜೆಡಿಎಸ್‌ಗೆ ಮೇಯರ್ ಸ್ಥಾನವನ್ನು ಬಿಟ್ಟುಕೊಡುವ ಪಕ್ಷವನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಇದಕ್ಕೆ ಕಾಂಗ್ರೆಸ್, ಬಿಜೆಪಿಯಲ್ಲಿ ಬಿರುಸಿನ ಚರ್ಚೆಗಳು ನಡೆಯುತ್ತಿವೆ.





