Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನವಸತಿ ಇರುವಲ್ಲಿ ತ್ಯಾಜ್ಯ ವಾಹನ...

ಜನವಸತಿ ಇರುವಲ್ಲಿ ತ್ಯಾಜ್ಯ ವಾಹನ ಪಾರ್ಕಿಂಗ್: ಆ್ಯಂಟನಿ ವೇಸ್ಟ್ ವಿರುದ್ಧ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 Sept 2016 12:01 AM IST
share
ಜನವಸತಿ ಇರುವಲ್ಲಿ ತ್ಯಾಜ್ಯ ವಾಹನ ಪಾರ್ಕಿಂಗ್:  ಆ್ಯಂಟನಿ ವೇಸ್ಟ್ ವಿರುದ್ಧ ಪ್ರತಿಭಟನೆ

ಮಂಗಳೂರು, ಸೆ.4: ಮನಪಾದ ತ್ಯಾಜ್ಯ ನಿರ್ವಹಣೆ ಗುತ್ತಿಗೆ ಕಂಪೆನಿಯಾಗಿರುವ ಆ್ಯಂಟನಿ ವೇಸ್ಟ್ ಹ್ಯಾಂಡ್ಲಿಂಗ್ ಸೆಲ್ ಪ್ರೈ. ಲಿ.ನ ವಾಹನಗಳು ಜನವಸತಿ ಪರಿಸರದಲ್ಲಿ ಪಾರ್ಕಿಂಗ್ ಮಾಡುತ್ತಿರುವುದನ್ನು ವಿರೋಧಿಸಿ ಬಂಗ್ರಕೂಳೂರು ದೊಡ್ಡಮನೆ ಗ್ರಾಮಸ್ಥರು ಇಂದು ಪ್ರತಿಭಟನೆ ನಡೆಸಿದರು.
ಆ್ಯಂಟನಿ ವೇಸ್ಟ್ ಕಂಪೆನಿಯ ಘನತ್ಯಾಜ್ಯ ಸಂಗ್ರಹ ಮತ್ತು ಸಾಗಾಟದ ವಾಹನಗಳು ಜನವಸತಿ ಪ್ರದೇಶವಾದ ದೊಡ್ಡಮನೆ ವ್ಯಾಪ್ತಿಯ 1.05 ಎಕರೆ ಪ್ರದೇಶದಲ್ಲಿ ಪಾರ್ಕಿಂಗ್ ಮಾಡುತ್ತಿವೆ. ಅಲ್ಲದೆ ಈ ವಾಹನಗಳನ್ನು ಇಲ್ಲೇ ಸ್ವಚ್ಛಗೊಳಿಸುವುದರಿಂದ ಪರಿಸರ ಮಲಿನವಾಗುತ್ತಿದೆ. ಇದು ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
 ಇಂದು ಮುಂಜಾನೆ ಘನತ್ಯಾಜ್ಯ ಸಂಗ್ರಹ ಮತ್ತು ಸಾಗಾಟ ವಾಹನಗಳು ಬರು ತ್ತಿರುವಂತೆ ಗ್ರಾಮ ಸ್ಥರು ಅದನ್ನು ತಡೆದು ನಿಲ್ಲಿಸಿದರು. ಈ ಸಂದರ್ಭ ಆ್ಯಂಟನಿ ವೇಸ್ಟ್‌ನ ವಾಹನ ನಿರ್ವಹಣಾ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆ ಯಿತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಾವೂರು ಠಾಣಾ ನಿರೀಕ್ಷಕ ನಟರಾಜ್ ಪ್ರತಿಭಟನಾಕಾರರ ಮನ ವೊಲಿಸಿ ವಾಹನಗಳ ಸಾಗಾಟಕ್ಕೆ ಅವಕಾಶ ಕಲ್ಪಿಸಿದರು.
ಈ ಹಿಂದೆ 130 ಘನತ್ಯಾಜ್ಯ ವಾಹನ ಗಳು ಇದ್ದು, ಇದೀಗ ಇದಕ್ಕೆ ಮತ್ತೆ 37 ವಾಹನಗಳು ಸೇರ್ಪಡೆಯಾಗಿವೆ. ಈ ವಾಹನಗಳ ಸ್ವಚ್ಛತೆ ಸಾರ್ವಜನಿಕ ಓಡಾಟ ಪ್ರದೇಶದಲ್ಲಿಯೇ ನಡೆಯುತ್ತಿದೆ. ಈ ವಾಹನದಲ್ಲಿ ದುಡಿಯುತ್ತಿರುವ ಹೊರ ಜಿಲ್ಲೆಯ ಕಾರ್ಮಿಕರು ಕಳ್ಳತನ, ಗಾಂಜಾ ವ್ಯವಹಾರಗಳಂತಹ ಸಮಾಜಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇವೆಲ್ಲ ಇಲ್ಲಿನ ನಿವಾಸಿಗಳಿಗೆ ಸಮಸ್ಯೆ ತಂದೊಡ್ಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಸಮಸ್ಯೆ ಶೀಘ್ರ ಈಡೇರಿಸದಿದ್ದರೆ ಪಾಲಿಕೆ ಹಾಗೂ ವಿಧಾನಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X