Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ತಿರುಪೆ ಸರಕಾರಕ್ಕೆ ಸೈನಿಕರಿಗೆ ಕೊಡಲು...

ತಿರುಪೆ ಸರಕಾರಕ್ಕೆ ಸೈನಿಕರಿಗೆ ಕೊಡಲು ಹಣವಿಲ್ವಂತೆ...

ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದ ಅಭಿಯಾನ

ಆನಂದ್  ಎಂ. ಬೆಂಗಳೂರುಆನಂದ್ ಎಂ. ಬೆಂಗಳೂರು5 Sept 2016 2:50 PM IST
share
ತಿರುಪೆ ಸರಕಾರಕ್ಕೆ ಸೈನಿಕರಿಗೆ ಕೊಡಲು ಹಣವಿಲ್ವಂತೆ...

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ, ಸಂಘ ಪರಿವಾರದ ಬೆಂಬಲಿಗರ ಪ್ರಾಬಲ್ಯ ಎದ್ದು ಕಾಣುವ ಅಂಶ. ಇದು ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪರಾಕಾಷ್ಠೆ ತಲುಪಿತ್ತು. ನರೇಂದ್ರ ಮೋದಿ ಅವರ ಪರ ಜನಾಭಿಪ್ರಾಯ ರೂಪಿಸುವಲ್ಲಿ ಈ ಸಾಮಾಜಿಕ ಜಾಲತಾಣಗಳ ಬೆಂಬಲಿಗರು ಬಹುದೊಡ್ಡ ಪಾತ್ರ ವಹಿಸಿದ್ದರು. ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಮೇಲೂ ಅದರ ಕಾರ್ಯ ವೈಖರಿಯನ್ನು ಸಮರ್ಥಿಸಿ, ಕಾಂಗ್ರೆಸ್ ಅನ್ನು ದೂರುವ ಪಡೆ ಫೇಸ್ ಬುಕ್, ಟ್ವಿಟ್ಟರ್ ಗಳಲ್ಲಿ ಸಕ್ರಿಯವಾಗಿದೆ. 

ಇದಕ್ಕೆ ಹೋಲಿಸಿದರೆ ಬಿಜೆಪಿ ಟೀಕಾಕಾರರ ಉಪಸ್ಥಿತಿ ಈ ಜಾಲತಾಣಗಳಲ್ಲಿ ಅತ್ಯಂತ ಕಡಿಮೆ. ಮುಖ್ಯ ವಿಪಕ್ಷ ಕಾಂಗ್ರೆಸ್ ಇನ್ನೂ ಈ ಬಗ್ಗೆ ಬಿಜೆಪಿಯಷ್ಟು ಸಕ್ರಿಯವಾಗಿಲ್ಲ. ಆದರೆ ನಿಧಾನವಾಗಿ ಕರ್ನಾಟಕದಲ್ಲಿ  ಇಂತಹದೊಂದು ಇಂಟರ್ನೆಟ್ ಜಾಗೃತಿ ತಂಡ ಕೆಲಸ ಮಾಡುತ್ತಿರುವ ಲಕ್ಷಣ ಕಾಣುತ್ತಿದೆ. 
ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ, ಬಂಡವಾಳಶಾಹಿ ಪರ ಧೋರಣೆ, ಗೋರಕ್ಷಣೆಯ ಹೆಸರಲ್ಲಿ ದಲಿತರು, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಸಂಘ ಪರಿವಾರದ ಸಿದ್ಧಾಂತ ಇತ್ಯಾದಿಗಳ ಕುರಿತು ವಿಡಂಬನೆ, ಮೊನಚು ವ್ಯಂಗ್ಯಗಳ ಘೋಷಣೆ, ಚಿತ್ರಗಳು, ಮೆಮೇಗಳು ಹಾಗು ಪೋಸ್ಟರ್ ಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹೊಸ ಅಲೆಯೊಂದನ್ನು ಸೃಷ್ಟಿಸುವ ಪ್ರಯತ್ನ ಯಶಸ್ವಿಯಾಗಿ ನಡೆಯುತ್ತಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ. ಬಿಜೆಪಿಯನ್ನು ವಿರೋಧಿಸುವ ಬುದ್ಧಿಜೀವಿಗಳಿಗೂ ಕೆಲವೊಮ್ಮೆ ಇದರ ಬಿಸಿ ತಟ್ಟಿದೆ. ಇತ್ತೀಚಿಗೆ ದಲಿತರಿಗೆ ಬಂದೂಕು ಕೊಡಬೇಕು ಎಂದು ಹೇಳಿದ ವಿಚಾರವಾದಿ ಭಗವಾನ್ ಅವರನ್ನು ಟೀಕಿಸಿ ಇಂತಹುದೇ ಒಂದು ಪೋಸ್ಟರ್ ಹರಡಿತ್ತು . 

ಈ ಸೃಜನಶೀಲ, ಆಕರ್ಷಕ ಹಾಗು ಅಷ್ಟೇ ಪರಿಣಾಮಕಾರಿಯಾಗಿ ಸಂದೇಶ ರವಾನಿಸುವ ಚಿತ್ರಗಳ ಹಿಂದೆ ಯಾರಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಬಿಜೆಪಿ, ಸಂಘ ಪರಿವಾರವನ್ನು ವಿರೋಧಿಸುವವರಿಗೆ ಇವು ಉತ್ತಮ ಆಯುಧದಂತೆ ಸಿಕ್ಕಿರುವುದು ಮಾತ್ರ ಹೌದು. 
ಜೊತೆಗೆ ಈ ವಿಷಯದಲ್ಲಿ ಇನ್ನೂ ಎಚ್ಚೆತ್ತುಕೊಳ್ಳದ ಕಾಂಗ್ರೆಸ್ ಗೂ ಇದು ಬಿಜೆಪಿಯನ್ನು ಎದುರಿಸಲು ಇನ್ನಾದರೂ ಈ ಪರಿಣಾಮಕಾರಿ ಮಾಧ್ಯಮವನ್ನು ಬಳಸಿಕೊಳ್ಳಲು ಪ್ರೇರೇಪಿಸುವ ಸಾಧ್ಯತೆ ಇದೆ. 

share
ಆನಂದ್  ಎಂ. ಬೆಂಗಳೂರು
ಆನಂದ್ ಎಂ. ಬೆಂಗಳೂರು
Next Story
X