Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುಣಮಟ್ಟದ ಶಿಕ್ಷಣದ ದೃಷ್ಟಿಯಲ್ಲಿ...

ಗುಣಮಟ್ಟದ ಶಿಕ್ಷಣದ ದೃಷ್ಟಿಯಲ್ಲಿ ವರ್ಗಾವಣೆ ಅಗತ್ಯ: ಕ್ಷೇತ್ರ ಶಿಕ್ಷಣಾಧಿಕಾರಿ

ಪುತ್ತೂರು ತಾಲೂಕು ಕೆಡಿಪಿ ಸಭೆ

ವಾರ್ತಾಭಾರತಿವಾರ್ತಾಭಾರತಿ6 Sept 2016 4:58 PM IST
share
ಗುಣಮಟ್ಟದ ಶಿಕ್ಷಣದ ದೃಷ್ಟಿಯಲ್ಲಿ ವರ್ಗಾವಣೆ ಅಗತ್ಯ: ಕ್ಷೇತ್ರ ಶಿಕ್ಷಣಾಧಿಕಾರಿ

ಪುತ್ತೂರು, ಸೆ.6: ಶಿಕ್ಷಕರ ವರ್ಗಾವಣೆಯು ಶಿಕ್ಷಣದ ಗುಣಮಟ್ಟದ ದೃಷ್ಟಿಯಿಂದ ಅತೀ ಅಗತ್ಯ. ಶಿಕ್ಷಕರು ಒಂದೇ ಶಾಲೆಯಲ್ಲಿ ಇದ್ದರೆ ಅಲ್ಲಿ ಅವರಿಂದ ಗುಣಮಟ್ಟವನ್ನು ಅಪೇಕ್ಷಿಸುವುದು ಅಸಾಧ್ಯ. ಪ್ರತಿಯೊಬ್ಬ ಶಿಕ್ಷಕನೂ ಒಂದು ಶಾಲೆಯಲ್ಲಿ 4 ವರ್ಷಕ್ಕಿಂತ ಹೆಚ್ಚಿನ ಅವಧಿಯಲ್ಲಿ ಇರಬಾರದು. ಅಂತಹ ಶಿಕ್ಷಕರನ್ನು ಪಕ್ಕದ ಶಾಲೆಗೆ ವರ್ಗಾವಣೆ ಮಾಡಬೇಕು. ಇದಕ್ಕೆ ಇಲಾಖೆ ಕ್ರಮಕೈಗೊಳ್ಳುವಂತಾಗಬೇಕು ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ಶಶಿಧರ್ ಹೇಳಿದರು.

ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷೆ ಭವಾನಿ ಚಿದಾನಂದರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಇಲಾಖೆಯ ಮಾಹಿತಿ ನೀಡುತ್ತಾ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದರು.

ತಾಲೂಕಿನ ಶಾಲೆಗಳಲ್ಲಿ ಕಳೆದ ವರ್ಷಕ್ಕಿಂತ ಒಂದು ಸಾವಿರ ಮಕ್ಕಳ ದಾಖಲಾತಿ ಕಡಿಮೆಯಾಗಿದೆ. ಖಾಸಗಿ ಶಾಲೆಗಳಲ್ಲಿ ಸರಕಾರಿ ಶಾಲೆಗಳಿಗಿಂತ ಹೆಚ್ಚು ದಾಖಲಾತಿ ಇದೆ. ಸರಕಾರ ಜಾರಿಗೆ ತಂದ ಆರ್‌ಟಿಇ ನಿಮಯದನ್ವಯ ಶೇ.25 ಮಕ್ಕಳು ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೊಂದುತ್ತಿರುವುದು ಸರಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಾಗಲು ಕಾರಣವಾಗಿದೆ. ರಾಜ್ಯದಲ್ಲಿ ಪ್ರತಿ ವರ್ಷ 50 ಸಾವಿರ ಮಕ್ಕಳು ಈ ನಿಯಮದಡಿಯಲ್ಲಿ ಖಾಸಗಿ ಶಾಲೆಗಳಿಗೆ ದಾಖಲಾತಿ ಹೊಂದುತ್ತಿದ್ದಾರೆ ಎಂದರು.

ಸರಕಾರಿ ಶಾಲೆಗಳಿಗಿಂತ ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಜಾಸ್ತಿಯಾಗಿದ್ದು, ಎಲ್ಲಾ ಶಾಲೆಗಳಲ್ಲಿಯ ಮಕ್ಕಳ ಸಂಖ್ಯೆ ಕಳೆದ ಬಾರಿ 48,828 ಇತ್ತು. ಈ ಬಾರಿ 47,828 ಮಕ್ಕಳು ಮಾತ್ರ ದಾಖಲಾತಿ ಹೊಂದಿದ್ದಾರೆ. ಇದಕ್ಕೆ ಮಕ್ಕಳ ಜನನ ಪ್ರಮಾಣ ಕಡಿಮೆಯಾಗಿರುವುದು ಕೂಡಾ ಕಾರಣವಾಗಿದೆ ಎಂದು ಅವರು ಹೇಳಿದರು.

ಬಜತ್ತೂರು ಗ್ರಾಮದ ಮಂಜಿಪಳ್ಳ ಎಂಬಲ್ಲಿ ಪರಿಶಿಷ್ಟ ವರ್ಗದ ಕುಟುಂಬಗಳು ವಾಸ್ತವ್ಯವಿದ್ದು, ಇಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲು ಸ್ಥಳದ ಅಗತ್ಯವಿದೆ. ಈ ಭಾಗದಲ್ಲಿ ಎರಡೂವರೆ ಎಕರೆ ಡಿಸಿ ಮನ್ನಾ ಭೂಮಿ ಇದ್ದು, ಇದನ್ನು ಗುರುತಿಸುವಂತೆ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮುಕುಂದ ಗೌಡ ಬಜತ್ತೂರು ಈ ಹಿಂದೆ ಪ್ರಸ್ತಾಪಿಸಿದ್ದರು. ಈ ಬಗ್ಗೆ ತಹಶೀಲ್ದಾರ್ ಪುಟ್ಟಶೆಟ್ಟಿ ಉತ್ತರಿಸಿ ಕಂದಾಯ ಹಾಗೂ ಅರಣ್ಯ ಇಲಾಖೆಯ ಜಂಟಿ ಸರ್ವೇ ನಡೆಸಲಾಗಿದೆ. ಅರಣ್ಯ ಇಲಾಖೆಯ ಅಭಿಪ್ರಾಯ ಬಂದ ತಕ್ಷಣ ಕ್ರಮಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ವಲಯ ಅರಣ್ಯಾಧಿಕಾರಿ ಕಾರ್ಯಪ್ಪ ಅಲ್ಲಿ ನೂರಾರು ವರ್ಷಗಳಿಂದ ಗೇರು ತೋಪು ಇದೆ. ಪಕ್ಕದಲ್ಲಿ ಖಾಸಗಿ ಭೂಮಿ ಇದೆ. ಸರಕಾರಿ ಭೂಮಿ ಅತಿಕ್ರಮಣವಾಗಿದ್ದು, ಇದರಲ್ಲಿ ಅಡಿಕೆ ಹಾಗೂ ರಬ್ಬರ್ ಕೃಷಿ ಇದೆ. ಅರಣ್ಯ ಇಲಾಖೆಯ ಆಕ್ಷೇಪ ಇದೆ ಎಂದು ಹೇಳುವುದು ಬೇಡ. ಕಂದಾಯ ಇಲಾಖೆ ಸರಿಯಾಗಿ ಸರ್ವೆ ನಡೆಸಿ ಡಿಸಿ ಮನ್ನಾ ಭೂಮಿ ಎಲ್ಲಿ ಇದೆ ಎಂಬುವುದನ್ನು ಪರಿಶೀಲಿಸಲಿ. ಅರಣ್ಯ ಭೂಮಿಯಾದರೆ ನಾವದನ್ನು ನೀಡಲು ಸಾಧ್ಯವಾಗುವುದಿಲ್ಲ. ಅದಕ್ಕೆ ಇಲಾಖೆಯ ಅನುಮತಿ ಅಗತ್ಯ. ಸುಮ್ಮನೆ ನಮ್ಮ ಮೇಲೆ ಆರೋಪ ಬೇಡ ಎಂದರು.

ಖಾಸಗಿ ಆಸ್ಪತ್ರೆಗಳು ಮಾಹಿತಿ ನೀಡುವುದಿಲ್ಲ: ತಾಲೂಕು ವೈದ್ಯಾಧಿಕಾರಿ

ಕ್ಷಯ ರೋಗಿಗಳ ಬಗ್ಗೆ ಅಧ್ಯಕ್ಷೆ ಭವಾನಿ ಚಿದಾನಂದ ಕೇಳಿದ ಪ್ರಶ್ನೆಗೆ ತಾಲೂಕು ವೈದ್ಯಾಧಿಕಾರಿ ಡಾ.ಅಶೋಕ್ ಕುಮಾರ್ ಉತ್ತರಿಸಿ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ವಿವರಗಳು ಮಾತ್ರ ನಮ್ಮಲ್ಲಿದೆ. ಖಾಸಗಿ ಆಸ್ಪತ್ರೆಗಳು ಕ್ಷಯ ರೋಗಿಗಳಿಗೆ ಚಿಕಿತ್ಸೆ ನೀಡಿದರೆ ಆ ವಿವರ ನಮ್ಮಲ್ಲಿ ಸಿಗುವುದಿಲ್ಲ. ಖಾಸಗಿ ಆಸ್ಪತ್ರೆಗಳು ನಮಗೆ ಮಾಹಿತಿ ನೀಡುವುದಿಲ್ಲ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿಯಲ್ಲಿ ಮಹಿಳೆಯರಿಗೆ ಸ್ವ ಉದ್ಯೋಗ ಕಲ್ಪಿಸುವ ಯೋಜನೆ ಉದ್ಯೋಗಿನಿಯಲ್ಲಿ ವಾರ್ಷಿಕ 78 ಗುರಿ ನೀಡಲಾಗಿದ್ದು, ಈ ಅವಕಾಶವನ್ನು ಮಹಿಳೆಯರು ಬಳಸಿಕೊಳ್ಳುವಂತಾಗಲು ಎಲ್ಲರ ಸಹಕಾರ ಅಗತ್ಯವಾಗಿದೆ. ಪರಿಶಿಷ್ಟ ಜಾತಿಯ ಒಬ್ಬರಿಗೆ ಶೇ.50 ರಷ್ಟು ಸಬ್ಸಿಡಿ ಇದೆ. ಇತರ ವರ್ಗಕ್ಕೆ 7,500 ರೂ. ಸಬ್ಸಿಡಿ ದೊರೆಯುತ್ತದೆ. ಬ್ಯಾಂಕ್ ಮೂಲಕ 1 ಲಕ್ಷ ರೂ. ಸಾಲ ನೀಡಲಾಗುತ್ತದೆ ಎಂದು ಸಿಡಿಪಿಒ ಶಾಂತಿ ಹೆಗ್ಡೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ರಾಜೇಶ್ವರಿ, ಸ್ಥಾಯಿ ಸಮಿತಿ ಅಧ್ಯಕ್ಷ ಮುಕುಂದ ಗೌಡ ಬಜತ್ತೂರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಎಸ್., ತಹಶೀಲ್ದಾರ್ ಪುಟ್ಟಶೆಟ್ಟಿ, ಕಡಬ ತಹಶೀಲ್ದಾರ್ ನಿಂಗಯ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X