Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಲಬುರ್ಗಿ ಹಂತಕರ ಬಂಧನಕ್ಕೆ ಸಿಬಿಐ...

ಕಲಬುರ್ಗಿ ಹಂತಕರ ಬಂಧನಕ್ಕೆ ಸಿಬಿಐ ನೆರವು: ಡಾ.ಜಿ.ಪರಮೇಶ್ವರ್

ಸಾಹಿತಿಗಳು, ಪ್ರಗತಿಪರ ಚಿಂತಕರೊಂದಿಗೆ ಸಭೆ

ವಾರ್ತಾಭಾರತಿವಾರ್ತಾಭಾರತಿ6 Sept 2016 7:11 PM IST
share
ಕಲಬುರ್ಗಿ ಹಂತಕರ ಬಂಧನಕ್ಕೆ ಸಿಬಿಐ ನೆರವು: ಡಾ.ಜಿ.ಪರಮೇಶ್ವರ್

ಬೆಂಗಳೂರು, ಸೆ.6: ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿಯವರ ಹತ್ಯೆಯ ಹಿಂದೆ ಯೋಜಿತವಾದ ಸಂಚಿದೆ. ರಾಜ್ಯ ಸರಕಾರವು ಹಂತಕರನ್ನು ಬಂಧಿಸಲು ಸಿಬಿಐ ನೆರವು ಪಡೆದುಕೊಳ್ಳುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮಂಗಳವಾರ ವಿಕಾಸಸೌಧದಲ್ಲಿ ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರಪಾಟೀಲ್ ನೇತೃತ್ವದಲ್ಲಿ ಸಾಹಿತಿಗಳು ಹಾಗೂ ಪ್ರಗತಿಪರ ಚಿಂತಕರೊಂದಿಗೆ ನಡೆದ ಚರ್ಚೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸೈದ್ಧಾಂತಿಕ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಅನ್ನೋದು ಇದುವರೆಗಿನ ತನಿಖೆಯಿಂದ ಗೊತ್ತಾಗಿದೆ. ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್, ಗೋವಾ ರಾಜ್ಯದ ಗೋವಿಂದ ಪನ್ಸಾರೆ ಹಾಗೂ ಕಲಬುರ್ಗಿ ಅವರ ಹತ್ಯೆಯ ನಡುವೆ ಸಾಮ್ಯತೆಗಳಿರುವುದನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ಮಹಾರಾಷ್ಟ್ರ ಪೊಲೀಸರು ಬಂಧಿಸಿರುವ ತಾವಡೆಯನ್ನು ನಮ್ಮ ರಾಜ್ಯದ ಸಿಐಡಿ ವಶಕ್ಕೆ ಪಡೆಯುತ್ತಿದೆ ಎಂದು ಅವರು ಹೇಳಿದರು.
ಗೋವಿಂದ ಪನ್ಸಾರೆ ಅವರ ಹತ್ಯೆಗೆ ಎರಡು ರಿವಾಲ್ವರ್‌ಗಳನ್ನು ಬಳಕೆ ಮಾಡಲಾಗಿದೆ. ಈ ಪೈಕಿ ಒಂದು ರಿವಾಲ್ವರ್ ಕಲಬುರ್ಗಿ ಹತ್ಯೆಗೂ ಬಳಕೆ ಮಾಡಿರುವ ಸಾಧ್ಯತೆಗಳಿವೆ. ಈಗಾಗಲೆ ಕಲಬುರ್ಗಿ ಹತ್ಯೆಗೆ ಬಳಸಲಾಗಿದ್ದ ಗುಂಡಿನ ಮಾದರಿಯನ್ನು ಉನ್ನತಮಟ್ಟದ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.
ಕಲಬುರ್ಗಿ ಹತ್ಯೆಯಾಗಿ ಒಂದು ವರ್ಷವಾಗಿದೆ. ಹಂತಕರನ್ನು ಬಂಧಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಧಾರವಾಡದಲ್ಲಿ ಇತ್ತೀಚೆಗೆ ಸಾಹಿತಿಗಳು ಹಾಗೂ ಪ್ರಗತಿಪರ ಚಿಂತಕರು ಬೃಹತ್ ಪ್ರತಿಭಟನೆಯನ್ನು ನಡೆಸಿದ್ದರು ಎಂದು ಅವರು ಹೇಳಿದರು.
ಪ್ರಗತಿಪರ ಚಿಂತನೆಯೆ ತಪ್ಪಾ? ಅಂತಹವರಿಗೆ ರಕ್ಷಣೆ ಇಲ್ಲವೇ? ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದರೂ ಸಾಹಿತಿಗಳು ಆತಂಕದಲ್ಲಿ ಜೀವನ ಸಾಗಿಸ ಬೇಕೇ ಎಂದು ಕೆಲವರು ಸಭೆಯಲ್ಲಿ ಪ್ರಶ್ನಿಸಿದ್ದಾರೆ. ಜೀವಭಯ ಇರುವಂತಹ ಸಾಹಿತಿಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.
ಸಿಐಡಿ ಇತಿಹಾಸದಲ್ಲಿಯೆ ಇಷ್ಟೊಂದು ದೊಡ್ಡ ತಂಡ ಒಂದು ಪ್ರಕರಣದ ತನಿಖೆ ನಡೆಸಿರಲಿಲ್ಲ. ಈ ತಂಡದಲ್ಲಿ 27 ಜನ ಅಧಿಕಾರಿಗಳಿದ್ದಾರೆ. ಒಬ್ಬರು ಎಜಿಪಿ, ಎಡಿಜಿಪಿ, ಇಬ್ಬರು ಎಸ್ಪಿ, ಮೂವತ್ತು ಜನ ತಾಂತ್ರಿಕ ವರ್ಗ ಕಲಬುರ್ಗಿ ಹತ್ಯೆ ಹಿಂದಿನ ಆರೋಪಿಗಳ ಶೋಧ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.
ಕಲಬುರ್ಗಿ ಹತ್ಯೆಯಾದ ದಿನ ಧಾರವಾಡಕ್ಕೆ ಬಂದಿದ್ದ ಲಕ್ಷಾಂತರ ಕರೆಗಳ ಬಗ್ಗೆಯೂ ಸಿಐಡಿ ತನಿಖೆ ನಡೆಸುತ್ತಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಪರೀಕ್ಷೆಗೆ ಬಂದಿದ್ದ 27 ಸಾವಿರ ಪರೀಕ್ಷಾರ್ಥಿಗಳನ್ನು ತಪಾಸಣೆ ಮಾಡಲಾಗುತ್ತಿದೆ. ಸಾಹಿತಿಗಳು ತನಿಖೆ ಮುಗಿಸಲು ಸರಕಾರಕ್ಕೆ ಯಾವುದೆ ಗಡುವು ನೀಡಿಲ್ಲ ಎಂದು ಪರಮೇಶ್ವರ್ ತಿಳಿಸಿದರು.
ಸಭೆಯಲ್ಲಿ ಸಾಹಿತಿಗಳಾದ ಪ್ರೊ.ಚಂದ್ರಶೇಖರ ಪಾಟೀಲ್, ಡಾ.ಸಿದ್ದನಗೌಡ ಪಾಟೀಲ್, ಡಾ.ಗಿರಡ್ಡಿ ಗೋವಿಂದರಾಜು, ಡಾ.ವಸುಂದರಾ ಭೂಪತಿ, ವಿಜಯ ಕಲಬುರಗಿ, ಪ್ರೊ.ಬರಗೂರು ರಾಮಚಂದ್ರಪ್ಪ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ.ಗಣೇಶ ದೇವಿ, ಡಾ.ಮನುಬಳಿಗಾರ, ಪ್ರೊ.ಕೆ.ನೀಲಾ, ಅರವಿಂದ ಜತ್ತಿ, ನಾಗೇಶ್ ಅರಳಗುಪ್ಪೆ, ಡಾ.ಜಿ.ರಾಮಕೃಷ್ಣ, ವಿಶ್ವನಾಥಸ್ವಾಮಿ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಸಾಹಿತಿಗಳು, ಪ್ರಗತಿಪರ ಚಿಂತಕರು, ಹೋರಾಟಗಾರರು ಭಾಗವಹಿಸಿದ್ದರು.

ಶಾಂತಿ ಕಾಪಾಡಲು ಪರಮೇಶ್ವರ್ ಮನವಿ
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದಿಂದಾಗಿ ಮಂಡ್ಯದಲ್ಲಿ ಭುಗಿಲೆದ್ದಿರುವ ಆಕ್ರೋಶದ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ರೈತರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ನಮಗೆ ಕುಡಿಯಲು ನೀರಿಲ್ಲ. ತಮಿಳುನಾಡಿನವರು ಬೆಳೆ ಬೆಳೆಯಲು ನೀರು ಕೇಳುತ್ತಿದ್ದಾರೆ. ಈ ರೀತಿಯ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಮಂಡ್ಯದಲ್ಲಿ ರೈತರು ಶಾಂತಿಯನ್ನು ಕಾಪಾಡಬೇಕು. ಸಾರ್ವಜನಿಕರ ಆಸ್ತಿಪಾಸ್ತಿಗೆ ಯಾರು ನಷ್ಟವುಂಟು ಮಾಡಬಾರದು ಎಂದು ಅವರು ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X