ಬಿ.ಸಿ.ರೋಡ್: ಕ್ಯಾಂಪಸ್ ಫ್ರಂಟ್ ‘ವಿದ್ಯಾರ್ಥಿ ವೇತನ ಮಾಹಿತಿ ಕೇಂದ್ರ’ ಉದ್ಘಾಟನೆ

ಬಂಟ್ವಾಳ, ಸೆ. 6: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ವತಿಯಿಂದ ’ವಿದ್ಯಾರ್ಥಿ ವೇತನಗಳ ಮಾಹಿತಿ ಕೇಂದ್ರ’ವನ್ನು ಬಿ.ಸಿ.ರೋಡ್ ಸಮೀಪದ ಕೈಕಂಬದ ಆದರ್ಶ್ ಕಾಲೇಜಿನ ಹತ್ತಿರದ ವಿಶಾಲ್ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ತೆರೆಯಲಾಯಿತು.
ಸ್ಕಾಲರ್‌ಶಿಪ್ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಕ್ಯಾಂಪಸ್ ಪ್ರಂಟ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಶಾಕೀರ್, ರಾಜ್ಯ ಹಾಗೂ ಕೇಂದ್ರ ಸರಕಾರ ಹಾಗೂ ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಹಲವಾರು ವಿಧದ ವಿದ್ಯಾರ್ಥಿ ವೇತನಗಳನ್ನು ನೀಡುತ್ತಿದೆ. ಆದರೆ, ಮಾಹಿತಿಯ ಕೊರತೆಯಿಂದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಗಳನ್ನು ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಈ ಕಾರಣದಿಂದ ವಿದ್ಯಾರ್ಥಿಗಳಿಗೆ ಸರಕಾರಗಳು ಹಾಗೂ ಸಂಘ ಸಂಸ್ಥೆಗಳು ಕಾಯ್ದಿರಿಸಿದ ಸಾವಿರಾರು ಕೋಟಿ ರೂ. ಹಣ ಬಳಕೆಯಾಗದೆ ವಾಪಸ್ ಆಗುತ್ತಿದೆ. ಇದನ್ನು ಮನಗಂಡು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರ ಸಮಿತಿಯ ತೀರ್ಮಾನದಂತೆ ಕರ್ನಾಟಕ ರಾಜ್ಯದ ಪ್ರತೀ ತಾಲೂಕು ಕೇಂದ್ರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿ ವೇತನ ಮಾಹಿತಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಇದರ ಸದುಪಯೋಗವನ್ನು ಬಂಟ್ವಾಳ ತಾಲೂಕಿನ ವಿದ್ಯಾರ್ಥಿಗಳು ಪಡೆಯುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕ್ಯಾಂಪಸ್ ಫ್ರಂಟ್ ಬಂಟ್ವಾಳ ತಾಲೂಕು ಅಧ್ಯಕ್ಷ ಅಶ್ವಾನ್ ತಲಪಾಡಿ ಮಾತನಾಡಿ, ರವಿವಾರ ಹೊರತುಪಡಿಸಿ ವಾರದ ಬಾಕಿ ದಿನಗಳಲ್ಲಿ ಮಧ್ಯಾಹ್ನ 2:30ರಿಂದ 6:30ರವರೆಗೆ ಕಚೇರಿ ತೆರೆದಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 7619248411ನ್ನು ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.
ತಾಲೂಕು ಪ್ರಧಾನ ಕಾರ್ಯದರ್ಶಿ ಶಂಶೀರ್ ಸಹಿತ ಮೊದಲಾದವರು ಉಪಸ್ಥಿತರಿದ್ದರು.





