ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನೀರು ಹರಿಸಲು ಸರ್ವಪಕ್ಷ ಸಭೆ ನಿರ್ಧಾರ

ಬೆಂಗಳೂರು, ಸೆ.6: ಸುಪ್ರೀಂ ಕೋರ್ಟ್ ನೀಡಿರುವ ಆದೇಶದಂತೆ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ವಿಧಾನ ಸೌಧದಲ್ಲಿ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಕೈಗೊಂಡ ನಿರ್ಧಾರವನ್ನು ಸುದ್ದಿಗಾರರಿಗೆ ತಿಳಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರಕಾರಕ್ಕೆ ಸುಪ್ರೀಂ ಕೋರ್ಟ್‌ನ ಆದೇಶ ಪಾಲನೆ ಅನಿವಾರ್ಯ ಎಂದು ಸ್ಪಷ್ಟಪಡಿಸಿದರು.
ಸಂಕಷ್ಟದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಲಾಗುತ್ತದೆ. ತಮಿಳುನಾಡಿಗೆ ನೀರು ನೀಡಿದಂತೆ ರಾಜ್ಯದ ರೈತರಿಗೂ ನೀರು ಪೂರೈಕೆ ಪ್ರಯತ್ನ ಮಾಡಲಾಗುವುದು ಎಂದರು.
ಸುಪ್ರೀಂ ಕೋರ್ಟ್ ಗೆ ರಾಜ್ಯದ ಜಲಾಶಯಗಳ ಪರಿಸ್ಥಿತಿ ಮನವರಿಕೆ ಮಾಡಿಕೊಡಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ಬಗ್ಗೆ ಕರ್ನಾಟಕದ ಕಾನೂನು ಹೋರಾಟ ಮುಂದುವರೆಯಲಿದೆ ಆದೇಶದ ಮರು ಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ರೈತರು ತಾಳ್ಮೆ ವಹಿಸುವಂತೆ ಮನವಿ ಮಾಡಿದರು.
Next Story





