ನಿರ್ಗತಿಕ ಮಾನಸಿಕ ಅಸ್ವಸ್ಥರ ರಕ್ಷಣೆಗೆ ಸಿಇಒ ಸೂಚನೆ

ಮಂಗಳೂರು, ಸೆ.6: ರಸ್ತೆ ಬದಿಗಳಲ್ಲಿ ಸಂಚರಿಸುವ ನಿರ್ಗತಿಕ ಮಾನಸಿಕ ಅಸ್ವಸ್ಥರನ್ನು ಸರಕಾರಿ ಆಸ್ಪತ್ರೆಗೆ ದಾಖಲಿ ಸಿದಲ್ಲಿ ಅವರ ಯೋಗಕ್ಷೇಮದ ಸಂಪೂರ್ಣ ಜವಾಬ್ದಾರಿ ಹಿಸಲು ಆರೋಗ್ಯ ಇಲಾ ಖೆಗೆ ಜಿಪಂ ಸಿಇಒ ಪಿ.ಐ. ಶ್ರೀವಿದ್ಯಾ ಸೂಚಿಸಿದ್ದಾರೆ.
ಜಿಪಂ ಸಭಾಂಗಣದಲ್ಲಿ ನಡೆದ ಸಾಂತ್ವನ ಕೇಂದ್ರಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಿಳೆಯರು ಸೇರಿದಂತೆ ರಸ್ತೆ ಬದಿಗಳಲ್ಲಿ ನಿರ್ಗತಿಕ ಮಾನಸಿಕ ಅಸ್ವಸ್ಥರು, ಅನಾರೋಗ್ಯಪೀಡಿತರು ಕಂಡುಬರುತ್ತಿದ್ದಾರೆ. ಸಾಂತ್ವನ ಕೇಂದ್ರಗಳ ಮೂಲಕ ಸಮೀಪದ ಪೊಲೀಸ್ ಠಾಣೆಗೆ ಇವರ ಬಗ್ಗೆ ಮಾಹಿತಿ ನೀಡಿ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಬೇಕು. ಹೆಚ್ಚಿನ ಚಿಕಿತ್ಸೆ ಅತ್ಯವಿದ್ದಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಬೇಕು.
ವೆನ್ಲಾಕ್ ಆಸ್ಪತ್ರೆಯಲ್ಲಿ ಮಾನಸಿಕ ರೋಗಿಗಳಿಗೆ ಪ್ರತ್ಯೇಕ ಚಿಕಿತ್ಸಾ ಘಟಕವಿದ್ದು, ಇದರ ಮೂಲಕ ಇಂತಹವರಿಗೆ ಚಿಕಿತ್ಸೆ ನೀಡಬೇಕು. ಅಂತಹ ರೋಗಿಗಳು ಗುಣಮುಖವಾಗುವವರೆಗೂ ಆರೋಗ್ಯ ಇಲಾಖೆಯು ಜವಾಬ್ದಾರಿ ವಹಿಸಬೇಕು ಎಂದು ಶ್ರೀವಿದ್ಯಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರದ ಸದಸ್ಯ ಕಾರ್ಯ ದರ್ಶಿ, ನ್ಯಾಯಾಧೀಶ ಮಲ್ಲಣ ಗೌಡ ಭೆಯಲ್ಲಿ ಮಾತನಾಡಿ, ಮಾನಸಿಕ ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಅವರ ಮೇಲುಸ್ತುವಾರಿಯಲ್ಲಿ ಚಿಕಿತ್ಸೆ ನೀಡಬೇಕಾಗಿದೆ ಎಂದು ಹೇಳಿದರು.
ಕೌಟುಂಬಿಕ ದೌರ್ಜನ್ಯ ನಿಯಂತ್ರಣ ಕಾಯ್ದೆ
ಇದೇ ಸಂದರ್ಭ ಕೌಟುಂಬಿಕ ದೌರ್ಜನ್ಯ ನಿಯಂತ್ರಣ ಕಾಯ್ದೆಯ ಪ್ರಗತಿ ಪರಿಶೀಲನೆ ನಡೆಸಿದ ಜಿಪಂ ಸಿಇಒ ಶ್ರೀವಿದ್ಯಾ, ಕೌಟುಂಬಿಕ ಸಮಸ್ಯೆಗಳ ಪ್ರಕರಣಗಳು ಪೊಲೀಸ್ ಠಾಣೆಗಳಿಗೆ ಬಂದಾಗ ಪ್ರಕರಣ ದಾಖಲಿಸುವ ಮುನ್ನ ಸಾಂತ್ವನ ಕೇಂದ್ರಗಳಲ್ಲಿ ಕೌನ್ಸೆಲಿಂಗ್ ನಡೆಸಬೇಕು. ಈ ಬಗ್ಗೆ ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಬೇಕು ಎಂದು ತಿಳಿಸಿದರು.
ದ.ಕ. ಜಿಲ್ಲೆಯಲ್ಲಿ 2016ರ ಜನವರಿ ಯಿಂದ ಆಗಸ್ಟ್‌ವರೆಗೆ 39 ವರದಕ್ಷಿಣೆ ಕಿರುಕುಳ ಪ್ರಕರಣಗಳು ದಾಖಲಾಗಿವೆ. ಶೈಕ್ಷಣಿಕವಾಗಿ ಮುಂದುವರಿದಿರುವ ಜಿಲ್ಲೆಯಲ್ಲಿ ಇಷ್ಟು ಪ್ರಕರಣಗಳು ನಡೆದಿರುವುದು ಕಳವಳಕಾರಿ. ಈ ನಿಟ್ಟಿನಲ್ಲಿ ವರದಕ್ಷಿಣೆ ವಿರುದ್ಧ ಜಾಗೃತಿ ಮೂಡಿಸಲು ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಪಠ್ಯೇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಅವರು ಇಲಾಖೆಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಆಶಾ ತಿಮ್ಮ ಪ್ಪಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ, ಕೇಂದ್ರ ವಲಯ ಎಸಿಪಿ ಉದಯ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಉಸ್ಮಾನ್ ಮತ್ತಿತರರು ಉಪಸ್ಥಿತರಿದ್ದರು.





