ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು
ಬಂಟ್ವಾಳ, ಸೆ.6: ಇಲ್ಲಿನ ಬಿ.ಸಿ.ರೋಡ್ ಸಮೀಪದ ಕೈಕುಂಜೆ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗೆ ಇಳಿದ ವಿದ್ಯಾರ್ಥಿಯೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತರನ್ನು ನಂತೂರು ನಿವಾಸಿ, ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿ ರಜನಿಕಾಂತ್(23) ಎಂದು ಗುರುತಿಸಲಾಗಿದೆ.
ಗಣೇಶೋತ್ಸವದ ಹಿನ್ನೆಲೆಯಲ್ಲಿ ಸೋಮವಾರ ಕಾಲೇಜಿಗೆ ರಜೆ ಇದ್ದ ಕಾರಣ ಸ್ನೇಹಿತರೊಂದಿಗೆ ಕೈಕುಂಜೆಯ ರೈಲು ಸೇತುವೆ ಕೆಳಗೆ ನದಿ ನೀರಿನಲ್ಲಿ ಸ್ನಾನಕ್ಕೆಂದು ಇಳಿದಿದ್ದರು. ಈ ಸಂದರ್ಭ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಎಸ್ಸೈ ನಂದಕುಮಾರ್ ಹಾಗೂ ಅವರ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Next Story





