ಹೃದಯಾಘಾತದಿಂದ ವ್ಯಕ್ತಿ ಮೃತ್ಯು
ಉಪ್ಪಿನಂಗಡಿ, ಸೆ.6: ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.
ಹಿರೇಬಂಡಾಡಿ ಗ್ರಾಮದ ನಿಡ್ಡೆಂಕಿ ಮನೆಯ ಯೊಗೀಶ್(42) ಮೃತಪಟ್ಟವರು. ಇವರಿಗೆ ಮಂಗಳವಾರ ಮುಂಜಾನೆ ಮಲಗಿದ್ದ ಸಂದರ್ಭ ಉಬ್ಬಸ ಬಂದಂತಾಗಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕೂಡಲೇ ಮನೆಯವರು ಆಸ್ಪತ್ರೆಗೆ ದಾಖಲಿ ಸಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೈದ್ಯರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆಂದು ಮೃತರ ಅಣ್ಣ ಮೋನಪ್ಪ ಸಾಲಿಯಾನ್ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
Next Story





