ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಕಾಪು, ಸೆ.6: ವೈಯಕ್ತಿಕ ಕಾರಣದಿಂದ ಮನನೊಂದ ಕಟಪಾಡಿ ಸಮೀಪದ ಚೊಕ್ಕಾಡಿ ನಿವಾಸಿ ಅಲೀಮಾಬಿ(75) ಎಂಬವರು ರವಿವಾರ ರಾತ್ರಿ ಮಲಗುವ ಕೋಣೆಯ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ: ಉಡುಪಿ ನಗರದ ಪೊಲೀಸ್ ಕ್ವಾಟ್ರಸ್‌ನಲ್ಲಿ ಪಾರ್ವತಿ ಶೆಡ್ತಿ(52) ಎಂಬವರು ಸೋಮವಾರ ಸಂಜೆ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





