ಮಲ್ಪೆ, ಸೆ.6: ಇಲ್ಲಿನ ಉಸ್ಮಾನ್ ಸಾಹೇಬ್‌ರ ಪುತ್ರಿ ನಸೀಮಾ ಬಾನು(25) ರವಿವಾರ ಮನೆಯಿಂದ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಲ್ಲೇ ಇದ್ದ ನಸೀಮಾ ಬಾನು ರಾತ್ರಿಯಿಂದ ನಾಪತ್ತೆಯಾಗಿದ್ದಾರೆ. ಈಗಾಗಲೇ ಎಲ್ಲ ಕಡೆ ಹುಡುಕಾಡಿದರೂ ಆಕೆ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.