Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭುಗಿಲೆದ್ದ ಕಾವೇರಿ ಚಳವಳಿ; ಮಂಡ್ಯ ಬಂದ್

ಭುಗಿಲೆದ್ದ ಕಾವೇರಿ ಚಳವಳಿ; ಮಂಡ್ಯ ಬಂದ್

ಕಾವೇರಿ ವಿವಾದ; ಸುಪ್ರೀಂಕೋರ್ಟ್ ತೀರ್ಪುಗೆ ತೀವ್ರ ವಿರೋಧ

ವಾರ್ತಾಭಾರತಿವಾರ್ತಾಭಾರತಿ6 Sept 2016 11:57 PM IST
share
ಭುಗಿಲೆದ್ದ ಕಾವೇರಿ ಚಳವಳಿ; ಮಂಡ್ಯ ಬಂದ್

ಮಂಡ್ಯ, ಸೆ.6: ತಮಿಳುನಾಡಿಗೆ ಪ್ರತಿನಿತ್ಯ 15 ಸಾವಿರ ಕ್ಯೂಸೆಕ್ಸ್‌ನಂತೆ ಹತ್ತು ದಿನ ನೀರು ಬಿಡುಗಡೆಗೆ ಸುಪ್ರೀಂಕೋರ್ಟ್ ಆದೇಶಿಸಿರುವುದರ ವಿರುದ್ಧ ಜಿಲ್ಲೆಯಲ್ಲಿ ಕಾವೇರಿ ಚಳವಳಿ ಭುಗಿಲೆದ್ದಿದ್ದು, ಮಂಗಳವಾರ ಜಿಲ್ಲಾದ್ಯಂತ ಪ್ರತಿಭಟನೆ ನಡೆಯಿತು.
ಆದೇಶವನ್ನು ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕರೆಕೊಟ್ಟಿದ್ದ ಜಿಲ್ಲಾ ಬಂದ್ ಯಶಸ್ವಿಯಾಗಿದ್ದು, ರೈತಸಂಘ ಸೇರಿದಂತೆ ನಾನಾ ಸಂಘಟನೆಗಳು ಹಾಗೂ ಸಾರ್ವಜನಿಕರು ವ್ಯಾಪಕ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕೇಂದ್ರ ಮಂಡ್ಯ ನಗರ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ಪಾಂಡವಪುರ, ನಾಗಮಂಗಲ, ಕೃ.ರಾ.ಪೇಟೆ ತಾಲೂಕು ಕೇಂದ್ರಗಳಲ್ಲಿ ಔಷಧ ಅಂಗಡಿ, ಆಸ್ಪತ್ರೆ, ಕ್ಲಿನಿಕ್ ಹೊರತುಪಡಿಸಿ ಇತರ ಎಲ್ಲ ಅಂಗಡಿಗಳು ಬಂದ್ ಆಗಿದ್ದವು.
 ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಕೆಲವೆಡೆ ತೆರೆದಿದ್ದ ಕಚೇರಿ ಹಾಗೂ ಬ್ಯಾಂಕ್‌ಗಳನ್ನು ಪ್ರತಿಭಟನಾಕಾರರು ಮುಚ್ಚಿಸಿದರು. ನಗರದ ಲೋಕೋಪಯೋಗಿ ಕಚೇರಿಗೆ ಮುತ್ತಿಗೆಹಾಕಿದ ಪ್ರತಿಭಟನಾಕಾರರು ನಾಮಫಲಕ ಹಾಗೂ ಆವರಣದ ಹೂ-ಗಿಡಗಳ ಕುಂಡಗಳನ್ನು ಧ್ವಂಸ ಮಾಡಿದರು.
ವಿವಿಧ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಜಯಲಲಿತಾ ಪ್ರತಿಕೃತಿ ದಹನ ಮಾಡುವುದರ ಜತೆಗೆ, ನಗರದಲ್ಲಿ ಅಳವಡಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಅಂಬರೀಶ್, ಮಾಜಿ ಸಂಸದೆ ರಮ್ಯಾ, ಮತ್ತಿತರ ರಾಜಕೀಯ ಮುಖಂಡರ ಕಟೌಟ್ ಮತ್ತು ಬ್ಯಾನರ್‌ಗಳನ್ನು ಸುಟ್ಟುಹಾಕಿದರು.
 ಲಘು ಲಾಠಿ ಪ್ರಹಾರ: ಸಂಜಯ್ ವೃತ್ತಕ್ಕೆ ಆಗಮಿಸಿದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್) ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದರು. ಈ ಮಾರ್ಗದಲ್ಲಿ ಬಂದ ಲಾರಿಯೊಂದರ ಮೇಲೆ ಕಲ್ಲುತೂರಾಟ ನಡೆಸಲಾಯಿತು.

ಪ್ರತಿಭಟನಾನಿರತರ ಗುಂಪೊಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಅಳವಡಿಸಿದ್ದ ಪಕ್ಷದ ಮುಖಂಡರ ಬ್ಯಾನರ್‌ಗಳನ್ನು ಹರಿದುಹಾಕಿದ ಕುರಿತು ಕಾಂಗ್ರೆಸ್ ಮುಖಂಡ ಟಿ.ಎಸ್.ಸತ್ಯಾನಂದ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
 ರೈಲುತಡೆಗೆ ಯತ್ನ: ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಮು ನೇತೃತ್ವದಲ್ಲಿ ರೈಲು ನಿಲ್ದಾಣಕ್ಕೆ ಮುತ್ತಿಗೆಹಾಕಲು ಯತ್ನಿಸಿದ ಕಾರ್ಯಕರ್ತರನ್ನು ರೈಲ್ವೆ ಪೊಲೀಸರು ತಡೆದು ವಿಫಲಗೊಳಿಸಿದರು.
ರೈತಸಂಘ, ಜಯ ಕರ್ನಾಟಕ, ದಸಂಸ, ಕರವೇ, ಕನ್ನಡ ಸೇನೆ, ಕದಂಬ ಸೈನ್ಯ, ಕಾವೇರಿ ಕರ್ನಾಟಕ ವೇದಿಕೆ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ಜನಪರ ವೇದಿಕೆ, ಕರ್ನಾಟಕ ಶ್ರಮಿಕ ಶಕ್ತಿ, ಕರ್ನಾಟಕ ಜನಶಕ್ತಿ ಮತ್ತು ರೈತ ಹೋರಾಟ ಸಮಿತಿ, ಜ.ದಳ, ಬಿಜೆಪಿ, ಕ್ರಾಂತಿ ಯುವ ಶಕ್ತಿ, ಡಿ.ದೇವರಾಜ ಅರಸು ಹಿಂದುಳಿದ ವೇದಿಕೆ, ಅನ್ನದಾತ ರೈತ ಹಿತರಕ್ಷಣಾ ಸಮಿತಿ, ಜೈನ, ಮುಸ್ಲಿಂ ಸಂಘಟನೆಗಳು, ವಕೀಲರ ಸಂಘ, ಪೇಟೆಬೀದಿ ವರ್ತಕರು ಮತ್ತಿತರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

‘ನೀರು ಬಿಟ್ಟರೆ ಉಗ್ರ ಚಳವಳಿ’
ಬೆಂಗಳೂರು ಮೈಸೂರು ಹೆದ್ದಾರಿಯ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಧರಣಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ, ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದರೆ ಉಗ್ರ ಚಳವಳಿ ಎದುರಿಸಬೇಕಾಗುತ್ತದೆ ಎಂದು ಸರಕಾರಕ್ಕೆ ಎಚ್ಚರಿಸಿದರು.
ಯಾವುದೇ ಕಾರಣಕ್ಕೂ ಸುಪ್ರೀಂಕೋರ್ಟ್ ಆದೇಶ ಒಪ್ಪ ಬಾರದು. ಕುಡಿಯಲು ನೀರಿಲ್ಲದಿರುವಾಗ ತಮಿಳುನಾಡಿಗೆ ನೀರು ಬಿಡುವುದು ಅಸಾಧ್ಯವೆಂದು ಹೇಳಬೇಕು ಎಂದರು.
ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕು. ರಾತ್ರೋರಾತ್ರಿ ನೀರು ಬಿಡುವ ಪ್ರಯತ್ನ ಮಾಡಿದರೆ ಜನತೆ ನಿಮ್ಮನ್ನು ಬಿಡುವುದಿಲ್ಲ ಎಂದು ಎಚ್ಚರಿಸಿದರು.

ಓರ್ವ ಆತ್ಮಹತ್ಯೆಗೆ ಯತ್ನ
ಕಾವೇರಿ ಚಳವಳಿ ವೇಳೆ ಸಂಘಟನೆಯೊಂದರ ಕಾರ್ಯಕರ್ತ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಗರದ ಸಂಜಯ ವೃತ್ತದಲ್ಲಿ ನಡೆಯಿತು.
ನಾನಾ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತ ನವೀನ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದರು.
ಬಾಟಲ್‌ನಲ್ಲಿ ತಂದಿದ್ದ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು ಮುಂದಾದ ನವೀನ್‌ನನ್ನು ಪ್ರತಿಭಟನಕಾರರು ಹಾಗೂ ಪೊಲೀಸರು ತಡೆದು ರಕ್ಷಿಸಿದರು.

ಸಿಎಂ ನಿವಾಸ, ವಿಧಾನಸೌಧಕೆ್ಕ ಮುತಿ್ತಗೆ ಯತ್ನ
ಬೆಂಗಳೂರು, ಸೆ.6: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ವಿರೋಧಿಸಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಏಕಾಏಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಕಾವೇರಿ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಮಂಗಳವಾರ ಸಂಜೆ ಕರವೇ ನಾರಾಯಣಗೌಡ ಬಣದ ಮಹಿಳಾ ಕಾರ್ಯಕರ್ತರು ಏಕಾಏಕಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ, ಪೊಲೀಸರು ತಡೆದು ಬಂಧನ ಮಾಡಿ ತದನಂತರ ಬಿಡುಗಡೆಗೊಳಿಸಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.
   ಅದೇ ರೀತಿ, ಕರವೇ ಸೇರಿ ಇನ್ನಿತರೆ ಕನ್ನಡಪರ ಸಂಘಟನೆಗಳ ಸದಸ್ಯರು ವಿಧಾನ ಸೌಧದ ಪಶ್ಚಿಮ ದ್ವಾರದ ಕಡೆಯಿಂದ ಮುತ್ತಿಗೆ ಹಾಕಲು ಯತ್ನಿಸಿದರು. ವಿಧಾನಸೌಧದ ಸಭಾಂಗಣದಲ್ಲಿ ಕಾವೇರಿ ನದಿ ನೀರನ್ನು ಬಿಡುವ ಸಂಬಂಧ ಸರ್ವಪಕ್ಷಗಳ ಸಭೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದು, ಬಂಧಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು. ರಾಜ್ಯದಲ್ಲಿ ಕುಡಿಯಲು ನೀರಿಲ್ಲ. ಹೀಗಿರುವಾಗ, ತಮಿಳು ನಾಡಿಗೆ ನೀರು ಹೇಗೆ ಬಿಡಲು ಸಾಧ್ಯ ಎಂದು ಪ್ರಶ್ನಿಸಿ, ಜಯಲಲಿತಾ ವಿರುದ್ಧ ಘೋಷಣೆ ಕೂಗಿದರು.
 ಬಿಗಿ ಬಂದೋಬಸ್ತ್: ಕನ್ನಡ ಪರ ಸಂಘಟನೆಗಳು ಸಿಎಂ ನಿವಾಸ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ 80 ಪೊಲೀಸ್ ಸಿಬ್ಬಂದಿ, ನಾಲ್ಕು ಕೆಎಸ್‌ಪಿಆರ್ ತುಕಡಿ, ಸೇರಿದಂತೆ ಹಿರಿಯ ಅಧಿಕಾರಿಗಳನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X