ಕಿರುತೆರೆ ನಟ ಹರೀಶ್ ನಿಧನ

ಬೆಂಗಳೂರು, ಸೆ.6: ಕಿರುತೆರೆ ನಟ ಹರೀಶ್(26) ಅನಾರೋಗ್ಯದಿಂದ ಮಂಗಳವಾರ ಸಾವನ್ನಪ್ಪಿದ್ದಾರೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘‘ಅರಗಿಣಿ’’ ಧಾರಾವಾಹಿಯಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದ ಹರೀಶ್, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮೃತಪಟ್ಟಿದ್ದಾರೆ.
ಜಾಂಡೀಸ್‌ನಿಂದ ಬಳಲುತ್ತಿದ್ದ ಹರೀಶ್ ಅವರನ್ನು ಮೊದಲು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಆನಂತರ ಅವರ ಸ್ಥಿತಿ ಚಿಂತಾಜನಕವಾಗಿದ್ದರಿಂದ, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬುಧವಾರ ಬೆಳಗ್ಗೆ ಹರೀಶ್ ಹುಟ್ಟೂರು ಚಿತ್ರದುರ್ಗದ ಆರ್‌ಆರ್ ನಗರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.
Next Story





