ಮಂಗಳೂರು ಜೈಲಿನಲ್ಲಿ ನೇಣುಬಿಗಿದು ವಿಚಾರಣಾಧೀನ ಕೈದಿ ಆತ್ಮಹತ್ಯೆ

ಮಂಗಳೂರು, ಸೆ.7: ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜಿಲ್ಲಾ ಕಾರಾಗೃಹದಲ್ಲಿ ಸಂಭವಿಸಿದೆ.
ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಕೇಶವ ಗೌಡ (38) ಆತ್ಮಹತ್ಯೆ ಮಾಡಿಕೊಂಡ ಕೈದಿ.
ಕೇಶವ ಗೌಡ ಅತ್ಯಾಚಾರ ಪ್ರಕರಣವೊಂದರ ಆರೋಪಿಯಾಗಿದ್ದು, ಮಂಗಳೂರಿನ ಕಾರಾಗೃಹದಲ್ಲಿ ಕೈದಿಯಾಗಿದ್ದ. ಜೈಲಿನ ಕಿಟಕಿಯ ಸರಳಿಗೆ ತನ್ನ ಬಟ್ಟೆಯಿಂದಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
Next Story





