Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಘಟನೆಗಳು ಊರಿನ ಅಭಿವೃದ್ಧಿಗೆ...

ಸಂಘಟನೆಗಳು ಊರಿನ ಅಭಿವೃದ್ಧಿಗೆ ಪೂರಕವಾಗಿರಲಿ: ರಘುನಾಥ ರೈ

ವಾರ್ತಾಭಾರತಿವಾರ್ತಾಭಾರತಿ8 Sept 2016 5:13 PM IST
share
ಸಂಘಟನೆಗಳು ಊರಿನ ಅಭಿವೃದ್ಧಿಗೆ ಪೂರಕವಾಗಿರಲಿ: ರಘುನಾಥ ರೈ

ಉಪ್ಪಿನಂಗಡಿ, ಸೆ.8: ಸಂಘ ಸಂಸ್ಥೆಗಳು ಸೌಹಾರ್ದಯುತ ಸಮಾಜ ನಿರ್ಮಾಣದೊಂದಿಗೆ ಊರಿನ ಅಭಿವೃದ್ಧಿಗೂ ಕಾರಣವಾಗಬೇಕು. ಆಗ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ. ಜೇಸಿಐಯಂತಹ ಸಂಸ್ಥೆಗಳು ಈ ವಿಚಾರದಲ್ಲಿ ಮುಂಚೂಣಿಯಲ್ಲಿರುವುದು ಹೆಮ್ಮೆಯ ವಿಚಾರ ಎಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಲಿಮಾರ್ ರಘುನಾಥ ರೈ ಹೇಳಿದರು.

ಉಪ್ಪಿನಂಗಡಿ ಜೇಸಿಐ ಸಪ್ತಾಹ 2016ರ ಸಪ್ತನಿಧಿ ಕಾರ್ಯಕ್ರಮವನ್ನು ಉಪ್ಪಿನಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಇಲ್ಲಿನ ಜೇಸಿಐ ಉಪ್ಪಿನಂಗಡಿ-ಹಿರೇಬಂಡಾಡಿ ಮಧ್ಯೆ ಪ್ರಯಾಣಿಕರ ತಂಗುದಾಣವೊಂದನ್ನು ನಿರ್ಮಿಸಿದ್ದು ಸೇರಿದಂತೆ ಹತ್ತು ಹಲವು ಸಮಾಜಮುಖಿ ಕಾರ್ಯಗಳನ್ನು ನಡೆಸಿದೆ. ಸಂಘಟನೆಗಳು ಇಂತಹ ಸಮಾಜಕ್ಕೆ ಇಂತಹ ಕೊಡುಗೆ ನೀಡಲು ಮುಂದಾದಾಗ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ ಎಂದರು.

ಉಪ್ಪಿನಂಗಡಿ ರೋಟರಿ ಕ್ಲಬ್ ಪೂರ್ವಾಧ್ಯಕ್ಷ ಅಜೀಜ್ ಬಸ್ತಿಕಾರ್ ಮಾತನಾಡಿ, ಜೇಸಿಐ ಸಂಸ್ಥೆ ತರಬೇತಿ ನೀಡುವ ಕಾರ್ಖಾನೆಯಾಗಿದ್ದು, ಬಹಳಷ್ಟು ಅತ್ಯಗತ್ಯ ವಿಷಯಗಳಿಗೆ ತರಬೇತಿ ನೀಡಿ ಯುವಕರಲ್ಲಿ ನಾಯಕತ್ವ ಗುಣವನ್ನು ರೂಪಿಸುವಲ್ಲಿ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಕೋಮು ಸಾಮರಸ್ಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಧಾರ್ಮಿಕ ಮುಖಂಡರಿಗೂ ತರಬೇತಿ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು, ಆ ಮೂಲಕ ಹಬ್ಬ ಆಚರಿಸುವ ಮುನ್ನ ಸಮಾಜಕ್ಕೆ ತಪ್ಪು ಸಂದೇಶ ನೀಡುವ ರೀತಿಯಲ್ಲಿ ನಡೆಯುವ ಪೊಲೀಸ್-ಶಾಂತಿ ಸಭೆಗೆ ಅವಕಾಶ ಕಲ್ಪಿಸಬಾರದು ಎಂದರು.

ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯ ದಿವಾಕರ ಆಚಾರ್ಯ ಮಾತನಾಡಿ, ಜೇಸಿಐ ಸಂಸ್ಥೆ ಸೇವಾ ಮನೋಭಾವದಿಂದ ದುಡಿಯುವ ಸಂಸ್ಥೆಯಾಗಿದ್ದು, ಸರಕಾರ ಮಾಡಬೇಕಾದ ಕೆಲಸಗಳನ್ನು ಇಂತಹ ಸಂಸ್ಥೆಗಳು ಮಾಡುವ ಮೂಲಕ ಜನಪರ ಕಾಳಜಿಯನ್ನು ತೋರುತ್ತಿರುವುದು ಶ್ಲಾಘನೀಯ ಎಂದರು.

ಜೇಸಿಐ ನಿಕಟಪೂರ್ವ ವಲಯಾಧ್ಯಕ್ಷ ಕೃಷ್ಣಮೋಹನ್ ಮಾತನಾಡಿ, ಸಮಾಜದ ಒಳಿತಿಗಾಗಿ ಕೆಲಸ ಮಾಡುವ ಯುವಕರನ್ನು ಸನ್ನದ್ಧಗೊಳಿಸುವ ಕೆಲಸವನ್ನು ಜೇಸಿಐ ಮಾಡುತ್ತಿದ್ದು, ಯುವಕರು ಜೇಸಿಐಯನ್ನು ಸೇರಿಕೊಂಡು ತನ್ನಲ್ಲಿನ ನಾಯಕತ್ವವನ್ನು ಹೊರ ತರಬೇಕು, ಆ ಮೂಲಕ ಸಾಮಾಜಿಕವಾಗಿ ತನ್ನನ್ನು ತೊಡಗಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ‘ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ’ ಎಂಬ ವಿಷಯವಾಗಿ ತರಬೇತಿ ಶಿಬಿರ ನಡೆಯಿತು. ವೇದಿಕೆಯಲ್ಲಿ ವರ್ತಕರ ಸಂಘದ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಯುನಿಕ್, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ದಿವಾಕರ ಆಚಾರ್ಯ, ಜೆಸೀಯ ವಲಯ 15ರ ವಲಯ ಉಪಾಧ್ಯಕ್ಷ ಪ್ರಶಾಂತ್ ಕುಮಾರ್ ರೈ, ನಿಕಟಪೂರ್ವ ವಲಯಾಧ್ಯಕ್ಷ ಕೃಷ್ಣಮೋಹನ್ ಪಿ.ಎಸ್., ಜೆಸಿಐ ಉಪ್ಪಿನಂಗಡಿ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಶ್ರೀನಿಧಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜೆಸಿಐ ನಿಕಟಪೂರ್ವಾಧ್ಯಕ್ಷ ಜಯಾನಂದ ಕಲ್ಲಾಪು, ಸಪ್ತಾಹ ನಿರ್ದೇಶಕ ಉಮೇಶ ಆಚಾರ್ಯ, ಜೆಎಫ್‌ಎಂ ಡಾ. ರಾಜಾರಾಂ ಕೆ.ಬಿ., ಜೆಸಿಗಳಾದ ವಸಂತ ಹೆಗ್ಡೆ, ವಿಜಯಕುಮಾರ್ ಕಲ್ಲಳಿಕೆ, ಅನೂಪ್ ಸಿಂಗ್, ಶಿವಕುಮಾರ್ ಬಾರಿತ್ತಾಯ, ನಿಖಿತಾ ಪ್ರವೀಣ್ ರೈ, ಪ್ರಶಾಂತ್, ಚಂದ್ರಶೇಖರ ಶೆಟ್ಟಿ, ಗುಣಕರ ಅಗ್ನಾಡಿ, ಲೋಕೇಶ್ ಬೆತ್ತೋಡಿ, ಗೋವಿಂದ ಪ್ರಸಾದ್ ಕಜೆ, ರವೀಂದ್ರ ದರ್ಬೆ, ನಂದನ್ ಕುಮಾರ್ ಜೈನ್, ಹರೀಶ್ ನಾಯಕ್ ನಟ್ಟಿಬೈಲು, ಅಝೀಝ್ ನಿನ್ನಿಕಲ್‌ಲ್, ನೀರಜ್ ಕುಮಾರ್, ಆನಂದ ರಾಮಕುಂಜ ಮತ್ತಿತರರು ಉಪಸ್ಥಿತರಿದ್ದರು.

ಸಪ್ತಾಹ ನಿರ್ದೇಶಕ ಶಶಿಧರ್ ಶೆಟ್ಟಿ ಸ್ವಾಗತಿಸಿದರು. ಜೇಸಿಐ ಕಾರ್ಯದರ್ಶಿ ಶಶಿಧರ್ ನೆಕ್ಕಿಲಾಡಿ ವಂದಿಸಿದರು. ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X