Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ:ನರ್ಸ್ ಮೇಲೆ ಆ್ಯಸಿಡ್ ಎರಚಿದ್ದ...

ಮುಂಬೈ:ನರ್ಸ್ ಮೇಲೆ ಆ್ಯಸಿಡ್ ಎರಚಿದ್ದ ವ್ಯಕ್ತಿಗೆ ಮರಣ ದಂಡನೆ

ವಾರ್ತಾಭಾರತಿವಾರ್ತಾಭಾರತಿ8 Sept 2016 8:54 PM IST
share
ಮುಂಬೈ:ನರ್ಸ್ ಮೇಲೆ ಆ್ಯಸಿಡ್ ಎರಚಿದ್ದ ವ್ಯಕ್ತಿಗೆ ಮರಣ ದಂಡನೆ

ಮುಂಬೈ,ಸೆ.8: ಇಲ್ಲಿಯ ಬಾಂದ್ರಾ ರೈಲು ನಿಲ್ದಾಣದಲ್ಲಿ ನರ್ಸ್ ಓರ್ವಳ ಮೇಲೆ ಆ್ಯಸಿಡ್ ಎರಚಿ ಆಕೆಯ ಸಾವಿಗೆ ಕಾರಣನಾಗಿದ್ದ ಅಂಕುರ್ ಪನ್ವಾರ್ ಎಂಬಾತನಿಗೆ ಸ್ಥಳೀಯ ನ್ಯಾಯಾಲಯವು ಗುರುವಾರ ಮರಣದಂಡನೆಯನ್ನು ಪ್ರಕಟಿಸಿದೆ. ಆತ ದೋಷಿಯೆಂದು ನ್ಯಾಯಾಲಯವು ಕಳೆದ ವಾರ ಘೋಷಿಸಿತ್ತು.
2013ರಲ್ಲಿ ಈ ಘಟನೆ ನಡೆದಿತ್ತು. ದಿಲ್ಲಿ ನಿವಾಸಿ ಪ್ರೀತಿ ರಥಿ(23) ಭಾರತೀಯ ನೌಕಾಪಡೆಯಲ್ಲಿ ನರ್ಸ್ ಹುದ್ದೆಗೆ ಸೇರಲು ತನ್ನ ತಂದೆ ಅಮರಸಿಂಗ್ ರಥಿ ಅವರೊಂದಿಗೆ ರೈಲಿನಲ್ಲಿ ಮುಂಬೈಗೆ ಆಗಮಿಸಿದ್ದಳು. ದಿಲ್ಲಿಯಲ್ಲಿ ಆಕೆಯ ನೆರೆಮನೆಯ ನಿವಾಸಿಯಾಗಿದ್ದ ಪನ್ವಾರ್ ಕೂಡ ಅದೇ ರೈಲಿನಲ್ಲಿದ್ದ. ಬಾಂದ್ರಾ ನಿಲ್ದಾಣದಲ್ಲಿ ರೈಲಿನಿಂದಿಳಿದು ತಂದೆಯ ಜೊತೆಗೆ ಹೆಜ್ಜೆ ಹಾಕುತ್ತಿದ್ದ ಪ್ರೀತಿಯ ಹಿಂದೆಯೇ ಇದ್ದ, ಗುರುತು ಸಿಗದಂತೆ ಮುಖಕ್ಕೆ ಕರವಸ್ತ್ರ ಕಟ್ಟಿಕೊಂಡಿದ್ದ ಪನ್ವಾರ್ ಆಕೆಯ ಭುಜವನ್ನು ತಟ್ಟಿದ್ದ. ಆಕೆ ಹಿಂದಕ್ಕೆ ತಿರುಗುತ್ತಿದ್ದಂತೆ ಆಕೆಯ ಮುಖದ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ.
ಒಂದು ತಿಂಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದ ಪ್ರೀತಿ ಕೊನೆಗೂ ಅಸು ನೀಗಿದ್ದಳು. ಮುಖದ ಮೇಲೆ ಬಿದ್ದಿದ್ದ ಆ್ಯಸಿಡ್‌ನ್ನು ಆಕೆ ಅಕಸ್ಮಾತ್ತಾಗಿ ನುಂಗಿದ್ದರಿಂದ ಗಂಟಲು ಮತ್ತು ಶ್ವಾಸಕೋಶಗಳು ಸುಟ್ಟುಹೋಗಿದ್ದವು.
ಆ್ಯಸಿಡ್ ದಾಳಿಯ ಬಳಿಕ ಬೇರೊಂದು ರೈಲು ಹತ್ತಿ ಮುಂಬೈನಿಂದ ಪರಾರಿಯಾಗಿದ್ದ ಪನ್ವಾರ್ ಒಂದು ವರ್ಷದ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದ.
ನ್ಯಾಯಾಧೀಶರು ಪನ್ವಾರ್‌ಗೆ ಮರಣದಂಡನೆ ವಿಧಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮರಸಿಂಗ್ ರಥಿ,ನನ್ನ ಮಗಳು ನರಳಿದಂತೆ ಆತನೂ ಜೀವನದ ಅಂತ್ಯದವರೆಗೂ ನರಳಬೇಕು. ಆತನಿಗೆ ಲಘು ಶಿಕ್ಷೆಯನ್ನು ವಿಧಿಸಿದ್ದಿದ್ದರೆ ಅದು ತಪ್ಪು ಸಂದೇಶವನ್ನು ನೀಡುತ್ತಿತ್ತು ಎಂದರು.
ಪನ್ವಾರ್‌ಗೆ ಪ್ರೀತಿಯ ಬಗ್ಗೆ ಅಸೂಯೆಯಿತ್ತು. ನಿರುದ್ಯೋಗಿಯಾಗಿದ್ದಕ್ಕೆ ತನ್ನನ್ನು ಸದಾ ಬೈಯ್ಯುತ್ತಿದ್ದ ಮನೆಯವರು ಪ್ರೀತಿಯನ್ನು ಹೊಗಳುತ್ತಿದ್ದರಿಂದ ಆತ ಹತಾಶನಾಗಿದ್ದ. ಹೀಗಾಗಿ ಆತ ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ಎಂದು ಪೊಲೀಸರು ತಿಳಿಸಿದರು.
ಪನ್ವಾರ್ ಪ್ರೀತಿಗೆ ಕಿರುಕುಳ ನೀಡುತ್ತಿದ್ದ,ಅಲ್ಲದೆ ತನ್ನನ್ನು ಮದುವೆಯಾಗುವಂತೆಯೂ ಪೀಡಿಸುತ್ತಿದ್ದ. ಪ್ರೀತಿ ನಿರಾಕರಿಸಿದಾಗ ಆತ ಆಕೆಗೆ ಪಾಠ ಕಲಿಸಲು ನಿರ್ಧರಿಸಿದ್ದ ಎಂದು ಸರಕಾರಿ ವಕೀಲ ಉಜ್ವಲ್ ನಿಕ್ಕಂ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X