Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವರ್ಗಾವಣೆಯಿಂದ ಶಿಕ್ಷಕರಿಗೆ ಮಾನಸಿಕ...

ವರ್ಗಾವಣೆಯಿಂದ ಶಿಕ್ಷಕರಿಗೆ ಮಾನಸಿಕ ತೊಂದರೆ: ಬಿಎಸ್‌ವೈ

ವಾರ್ತಾಭಾರತಿವಾರ್ತಾಭಾರತಿ8 Sept 2016 9:46 PM IST
share

   ಶಿವಮೊಗ್ಗ, ಸೆ.8: ರಾಜ್ಯ ಸರಕಾರದ ಅವೈಜ್ಞಾನಿಕ ವರ್ಗಾವಣೆ ನೀತಿ, ಹುದ್ದೆಗಳ ಸ್ಥಳಾಂತರದಂತಹ ಪ್ರಕ್ರಿಯೆಗಳಿಂದಾಗಿ ಶಿಕ್ಷಕರು ಮಾನಸಿಕವಾಗಿ ಕುಗ್ಗುತ್ತಿದ್ದಾರೆ ಎಂದು ಲೋಕಸಭಾ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಗುರುವಾರ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ನಂತರ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು. ಪ್ರಸ್ತುತ ಸಂದರ್ಭದಲ್ಲಿ ಶಿಕ್ಷಕರು ಅನೇಕ ಮಾನಸಿಕ ತೊಳಲಾಟದಲ್ಲಿದ್ದಾರೆ. ತಮ್ಮ ಶಿಕ್ಷಕ ವೃತ್ತಿ ಹೊರತುಪಡಿಸಿ, ಗಣತಿ ಸರ್ವೇ, ಬಿಸಿಯೂಟದಂತಹ ಸರಕಾರದ ಅನ್ಯ ಕೆಲಸ-ಕಾರ್ಯಗಳಲ್ಲಿಯೂ ತೊಡಗಿಕೊಳ್ಳಬೇಕಾಗಿದೆ. ಇದರಿಂದಾಗಿ ಶಿಕ್ಷಕರ ಅಮೂಲ್ಯ ಸಮಯ ಹಾಳಾಗುತ್ತಿದ್ದು, ಮಕ್ಕಳ ಉಜ್ವಲ ಭವಿಷ್ಯಕ್ಕೆ ನಾವೇ ಅಡಚಣೆ ಉಂಟು ಮಾಡುತ್ತಿದ್ದೇವೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಶಿಕ್ಷಕ ತನ್ನ ನಿರಂತರವಾದ ಕಾರ್ಯಗಳಿಂದ ಮಕ್ಕಳ ದೈಹಿಕ, ಮಾನಸಿಕ ಹಾಗೂ ಸರ್ವಾಂಗೀಣ ವಿಕಾಸಕ್ಕೆ ರೂವಾರಿಯಾಗಬೇಕು. ಶಿಕ್ಷಕರು ಕಾರ್ಯನಿರ್ವಹಿಸುವ ಯಾವುದೇ ಗ್ರಾಮದ ಕಾರ್ಯಕ್ರಮಗಳಲ್ಲಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಬೇಕು. ಇದರಿಂದ ಪ್ರತೀ ಗ್ರಾಮವು ಮಾದರಿ ಗ್ರಾಮವಾಗಿ ಹೊರಹೊಮ್ಮಲಿದೆ ಎಂದು ಹೇಳಿದರು. ಶಿಕ್ಷಕ ಮಕ್ಕಳ ಕಲಿಕೆಯನ್ನು ವೃದ್ಧಿಸುವ ಮಾಂತ್ರಿಕನಾಗಬೇಕು. ತಮ್ಮ ವ್ಯಕ್ತಿತ್ವ ಮತ್ತು ವಿದ್ವತ್ತಿನಿಂದಲೇ ಶಿಕ್ಷಕರಾಗಿ, ಶ್ರೇಷ್ಠ ತತ್ವಜ್ಞಾನಿಯಾಗಿ, ಉತ್ತಮ ಆಡಳಿತಗಾರರಾಗಿ, ಉಪರಾಷ್ಟ್ರಪತಿಯಾಗಿ, ರಾಷ್ಟ್ರಪತಿಯಾಗಿ ಮಾರ್ಗದರ್ಶನ ನೀಡಿದವರು ಸರ್ವಪಲ್ಲಿ ರಾಧಾಕೃಷ್ಣನ್ ಅವರು. ಅವರ ನೆನಪಿನಲ್ಲಿ ಆಚರಿಸುತ್ತಿರುವ ಶಿಕ್ಷಕರ ದಿನಾಚರಣೆ ವಿಶೇಷವೆನಿಸಿದೆ ಎಂದರು.

 ಶಾಸಕ ಬಿ.ವೈ.ರಾಘವೇಂದ್ರ ಮಾತನಾಡಿ, ಶಿಕ್ಷಕರಿಗೆ ಇರುವ ಅನ್ಯ ಕೆಲಸದ ಒತ್ತಡದಿಂದ ಮುಕ್ತಗೊಳಿಸಬೇಕಾದ ಅಗತ್ಯವಿದೆ. ಶಿಕ್ಷಕರ ಮಾನಸಿಕ ಆರೋಗ್ಯ ಸರಿಯಿಲ್ಲದಿದ್ದರೆ ಸಮಾಜದ ವ್ಯವಸ್ಥೆ ಸರಿಪಡಿಸುವುದು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಪಂ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾವಿಜಯಕುಮಾರ್, ಸೂಡಾಧ್ಯಕ್ಷ ಎನ್.ರಮೇಶ್, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್.ಷಡಕ್ಷರಿ, ಡಿ.ಕೆ.ದಿವಾಕರ್, ಬಿ.ಸಿ.ಸಿದ್ದಬಸಪ್ಪ, ಮಹಾಬಲೇಶ್ವರ ಹೆಗಡೆ, ಭಾರತಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X