ನಕಲಿ ಗೋ ರಕ್ಷಕರ ವಿರುದ್ಧ ಕ್ರಮಕ್ಕೆ ದಿಗ್ವಿಜಯ ಸಿಂಗ್ ಸೂಚನೆ
ಬೆಂಗಳೂರು, ಸೆ.8: ನಕಲಿ ಗೋ ರಕ್ಷಕರು ಹಾಗೂ ಅವರಿಗೆ ಬೆಂಬಲಿಸುವ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ ಸಿಂಗ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಗೋ ರಕ್ಷಕರ ದೌರ್ಜನ್ಯಗಳು ಹೆಚ್ಚುತ್ತಿವೆ. ಇದನ್ನು ತಡೆಯುವಂತೆ ಕೆಲವು ಸಂಘಟನೆಗಳು ಮನವಿ ಮಾಡಿವೆ. ಈ ಹಿನ್ನೆಲೆಯಲ್ಲಿ ಗೋರಕ್ಷಕರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಹಾಗೂ ಸಂಘಪರಿವಾರದವರು ಗೋ ರಕ್ಷಕರ ಹೆಸರಿನಲ್ಲಿ ಅಮಾಯಕರ ಮೇಲೆ ದೌರ್ಜನ್ಯಗಳನ್ನು ನಡೆಸುತ್ತಾರೆ. ಇದರಿಂದಾಗಿ ಅಮಾಯಕರ ಜೀವ ಹೋಗುತ್ತಿದೆ. ಹೀಗಾಗಿ ನಕಲಿ ಗೋ ರಕ್ಷಕರನ್ನು ತಡೆಯದಿದ್ದರೆ ರಾಜ್ಯದ ಶಾಂತಿಗೆ ಧಕ್ಕೆ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಕೂಡಲೆ ನಕಲಿ ಗೋರಕ್ಷಕ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಅವರು ಹೇಳಿದರು
Next Story





