ಉಡುಪಿ: ಹಿರಿಯ ನಾಗರಿಕರಿಗೆ ಕ್ರೀಡೆ -ಸಾಂಸ್ಕೃತಿಕ ಸ್ಪರ್ಧೆ

ಉಡುಪಿ, ಸೆ.10: ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಹಿರಿಯ ನಾಗರಿಕರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಶನಿವಾರ ಅಜ್ಜರಕಾಡು ಭಾರತೀಯ ರೆಡ್‌ಕ್ರಾಸ್ ಭವನದಲ್ಲಿ ಏರ್ಪಡಿಸಲಾಗಿತ್ತು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ರಾಜ್ಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ದೈಹಿಕ ಕ್ರೀಡಾ ನಿರ್ದೇಶಕ ರವಿಪ್ರಸಾದ್‌ಗೆ ಕ್ರೀಡಾಪರಿಕರಗಳನ್ನು ಹಸ್ತಾಂತರಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಮುಖ್ಯ ಅತಿಥಿ ಗಳಾಗಿ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಮಧುಸೂದನ್ ನಾಯಕ್, ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಎ.ಪಿ.ಕೊಡಂಚ, ಹಿರಿಯ ನಾಗರಿಕರ ಪ್ರತಿ ನಿಧಿ ಜಯಮ್ಮ ಉಪಸ್ಥಿತರಿದ್ದರು. ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ನಿರಂಜನ್ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಒಟ್ಟು 12 ಸ್ಪರ್ಧೆಗಳು ನಡೆಯಲಿದ್ದು, ಇದರಲ್ಲಿ ಪ್ರಥಮ ಸ್ಥಾನ ಗಳಿಸಿದವರು ಸೆ.15 ಮತ್ತು 16ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರಗುವ ರಾಜ್ಯಮಟ್ಟದ ಸ್ಪರ್ಧೆ ಯಲ್ಲಿ ಭಾಗವಹಿಸುವ ಅವಕಾಶ ಪಡೆಯಲಿದ್ದಾರೆ.





