Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಮೀಯ್ಯತುಲ್ ಫಲಾಹ್‌ನಿಂದ ದೇವರಾಜ ಅರಸು...

ಜಮೀಯ್ಯತುಲ್ ಫಲಾಹ್‌ನಿಂದ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಬಿ.ಎ. ಮೊಹಿದಿನ್‌ರಿಗೆ ಅಭಿನಂದನಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ10 Sept 2016 9:12 PM IST
share
ಜಮೀಯ್ಯತುಲ್ ಫಲಾಹ್‌ನಿಂದ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಬಿ.ಎ. ಮೊಹಿದಿನ್‌ರಿಗೆ ಅಭಿನಂದನಾ ಸಮಾರಂಭ

ಮಂಗಳೂರು, ಸೆ. 10: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡು ಮುಸ್ಲಿಂ ಸಮುದಾಯದ ಅಭಿವೃದ್ದಿಗೆ ಶಿಕ್ಷಣ ಅಗತ್ಯವೆಂಬುದನ್ನು ಅರಿತುಕೊಂಡು ಅದನ್ನು ಕಾರ್ಯರೂಪಕ್ಕೆ ತಂದ ಮಹಾನ್ ವ್ಯಕ್ತಿ ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ.ಮೊಹಿದಿನ್ ಅವರು ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದ್ದಾರೆ.

ಅವರು, ಇಂದು ನಗರದ ಕಂಕನಾಡಿಯ ಜಮಿಯ್ಯತುಲ್ ಫಲಾಹ್ ಸಮುದಾಯ ಭವನದಲ್ಲಿ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಜನ್ಮಶತಮಾನೋತ್ಸವ ಅಂಗವಾಗಿ ರಾಜ್ಯ ಸರಕಾರದಿಂದ ಪ್ರತಿಷ್ಠಿತ ದೇವರಾಜು ಅರಸು ಪ್ರಶಸ್ತಿ ಪಡೆದ ಹಿರಿಯ ರಾಜಕೀಯ ಮುತ್ಸದ್ದಿ ಬಿ.ಎ. ಮೊಹಿದೀನ್ ಅವರಿಗೆ ದ.ಕ, ಉಡುಪಿ ಜಿಲ್ಲಾ ಜಮೀಯ್ಯತುಲ್ ಫಲಾಹ್ ವತಿಯಿಂದ ಇಂದು ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ನೇರ ನಡೆ ನುಡಿಯ ವ್ಯಕ್ತಿತ್ವವಿರುವ ಬಿ.ಎ. ಮೊಹಿದಿನ್ ಅವರು ಯಾವುದೇ ವಿಚಾರದಲ್ಲಿಯೂ ರಾಜಿ ಮಾಡಿಕೊಳ್ಳುತ್ತಿರಲಿಲ್ಲ. ಅವರ ಚಿಂತನೆಗಳ ಫಲವಾಗಿ ಇಂದು ಸರಕಾರದಿಂದ ಸಮುದಾಯಕ್ಕೆ ಸಂಬಂಧಿಸಿದಂತೆ ವಿವಿಧ ಯೋಜನೆಗಳು ಜಾರಿಗೊಂಡಿದೆ ಎಂದರು.

ದೇವರಾಜ ಅರಸು ಅವರ ಚಿಂತನೆಗಳನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡು, ರಾಜ್ಯಾದ್ಯಂತ ಆ ಚಿಂತನೆಗಳ ಜಾರಿಯಲ್ಲಿ ಬಿ.ಎ. ಮೊಹಿದಿನ್ ಅವರ ಶ್ರಮ ಶ್ಲಾಘನೀಯ. ಸಮಾಜದ ಹಿಂದುಳಿದವರ ಅಭಿವೃದ್ದಿಯ ನೆಲೆಯಲ್ಲಿ ಅವರ ಕಾರ್ಯ ಉಲ್ಲೇಖನೀಯ. ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯದ ನಿರಂತರ ಅಭಿವೃದ್ದಿಗಾಗಿ ಬಿ.ಎ.ಮೊಹಿದಿನ್ ಹಗಲಿರುಳು ದುಡಿದಿದ್ದಾರೆ ಎಂದು ಅವರು ಹೇಳಿದರು.

ಅವರು ಕೇವಲ ಒಂದು ಧರ್ಮಕ್ಕೆ ಸೀಮಿತವಾಗುವ ನಾಯಕರಲ್ಲ. ಅವರು ಸರ್ವ ಸಮಾಜದ ಕುರಿತು ಪ್ರೀತಿ ಹಾಗೂ ಒಡನಾಟ ಬೆಳೆಸಿಕೊಂಡವರು. ಸಮಾಜದಲ್ಲಿ ಸಮಾನತೆ ತರುವ ಉದ್ದೇಶದಿಂದ ಅವರು ನಿರಂತರ ಹೋರಾಟ ನಡೆಸಿದ್ದಾರೆ ಎಂದವರು ಹೇಳಿದರು.

ಇದೇ ವೇಳೆ ಐಎಲ್‌ಎಮ್ ಪ್ರಶಸ್ತಿ ಪುರಸ್ಕೃತ ಮನ್ಸೂರ್ ಅಹ್ಮದ್(ಆಜಾದ್) ಅವರನ್ನು ಸಮ್ಮಾನಿಸಲಾಯಿತು. ಜಮೀಯ್ಯತುಲ್ ಮಂಗಳೂರು ನಗರ ಘಟಕದ ವತಿಯಿಂದ 53 ವಿದ್ಯಾರ್ಥಿಗಳಿಗೆ ಒಟ್ಟು ಸುಮಾರು 3 ಲಕ್ಷ ರೂ.ಗಳ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬಿ.ಎ. ಮೊಹಿದಿನ್ ಅವರು, ಮುಂದೆ ದೇಶವನ್ನು ಕಟ್ಟಬೇಕಾದ ಯುವಜನರು ದೇಶದಲ್ಲಿ ಐಕ್ಯತೆ ಕಾಪಾಡುತ್ತಾ ಒಂದಾಗಿ ಬಾಳಬೇಕು ಎಂದು ಹೇಳಿದರು. ಅರಸು ಅವರು ಅಧಿಕಾರದಲ್ಲಿ ಉಳಿದಿದ್ದರೆ ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಸಮುದಾಯ ಇನ್ನಷ್ಟು ಅಭಿವೃದ್ದಿಯಾಗುತ್ತಿತ್ತು. ಆದರೆ ದುರದೃಷ್ಟವಶಾತ್ ಅದನ್ನು ಮಾಡಲು ಸಾಧ್ಯವಾಗಿಲ್ಲ ಎಂದು ವಿಷಾದಿಸಿದರು.

ಯೆನೆಪೊಯ ವಿಶ್ವವಿದ್ಯಾನಿಲಯದ ಕುಲಪತಿ ಹಾಜಿ ವೈ.ಅಬ್ದುಲ್ಲಾ ಕುಂಞ, ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ.ಎಸ್.ಮುಹಮ್ಮದ್ ಮಸೂದ್ ಮುಖ್ಯ ಅತಿಥಿಯಾಗಿದ್ದರು. ದ.ಕ ಉಡುಪಿ ಜಿಲ್ಲಾ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ. ಅಧ್ಯಕ್ಷತೆ ವಹಿಸಿದ್ದರು. ಬಿ.ಎ.ಮುಹಮ್ಮದ್ ಅಲಿ ಸಮ್ಮಾನಿತರ ಪರವಾಗಿ ಮಾತನಾಡಿದರು.

ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ಬ್ಯಾರಿಸ್ ವೆಲ್ಫೇರ್ ಫೋರಂ ಅಬುಧಾಬಿಯ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ, ಜಮೀಯತುಲ್ ಫಲಾಹ್  ನಗರ ಘಟಕ ಅಧ್ಯಕ್ಷ ಅಬ್ದುಲ್ ಅಝೀಝ್, ಜಮೀಯತುಲ್ ಫಲಾಹ್ ಕಾರ್ಯದರ್ಶಿ ಸೈಯದ್ ಝುಬೈರ್ ಶಾ, ಕೋಶಾಧಿಕಾರಿ ಝಮೀರ್ ಅಂಬರ್ ಸಿ.ಎ., ಜೊತೆ ಕಾರ್ಯದರ್ಶಿ ಎಂ.ಎಚ್. ಇಕ್ಬಾಲ್ ಮುಂತಾದವರು ಉಪಸ್ಥಿತರಿದ್ದರು.

ಹನೀ ಮಾಸ್ಟರ್ ಸಮ್ಮಾನ ಪತ್ರ ವಾಚಿಸಿದರು. ರಶೀದ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X