Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಧಾರ್ ಜೋಡಣೆ ಮಾಡದ ಪಡಿತರ ಚೀಟಿ ರದ್ದು

ಆಧಾರ್ ಜೋಡಣೆ ಮಾಡದ ಪಡಿತರ ಚೀಟಿ ರದ್ದು

ವಾರ್ತಾಭಾರತಿವಾರ್ತಾಭಾರತಿ10 Sept 2016 11:51 PM IST
share
ಆಧಾರ್ ಜೋಡಣೆ ಮಾಡದ ಪಡಿತರ ಚೀಟಿ ರದ್ದು

♦ ಮೂರು ತಿಂಗಳ ಕೂಪನ್ ಏಕಕಾಲಕ್ಕೆ ವಿತರಣೆ ♦ ಗ್ರಾ.ಪ್ರದೇಶದಲ್ಲಿ ಕೂಪನ್ ವಿತರಣೆಗೆ ಮೊಬೈಲ್ ಯಂತ್ರ
♦ ಮಾಸಾಂತ್ಯಕ್ಕೆ ಹೊಸ ಪಡಿತರ ಚೀಟಿ ವಿತರಣೆ

ಬೆಂಗಳೂರು, ಸೆ.10: ಈ ತಿಂಗಳ ಅಂತ್ಯದೊಳಗೆ ಆಧಾರ್ ಸಂಖ್ಯೆ ಜೋಡಣೆ ಮಾಡದಿದ್ದರೆ ಅಂತಹ ಪಡಿತರ ಚೀಟಿಗಳನ್ನು ಬೋಗಸ್(ನಕಲಿ) ಎಂದು ಪರಿಗಣಿಸಿ ರದ್ದುಪಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಶನಿವಾರ ವಿಕಾಸಸೌಧದ ತನ್ನ ಕೊಠಡಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಪ್ರದೇಶದಲ್ಲಿ ಆಧಾರ್ ಸಂಖ್ಯೆ ಜೋಡಣೆಗೆ ಸೆ.30ರ ವರೆಗೆ ಅವಕಾಶವಿದ್ದು, ಕುಟುಂಬದ ಯಾವನೇ ಒಬ್ಬ ಸದಸ್ಯನ ಆಧಾರ್ ಸಂಖ್ಯೆಯನ್ನಾದರೂ ಜೋಡಣೆ ಮಾಡದಿದ್ದರೆ ಅಂತಹವರ ಹೆಸರನ್ನು ಕಾರ್ಡ್‌ನಿಂದ ಅಳಿಸಿ ಹಾಕಲಾಗುವುದು ಎಂದರು.

ಒಂದು ವೇಳೆ ಅರ್ಹ ಫಲಾನುಭವಿಯ ಹೆಸರು ಅಳಿಸಿ ಹೋಗಿದ್ದರೆ, ಕೂಪನ್ ಪಡೆಯುವ ವೇಳೆ ಸೂಕ್ತ ದಾಖಲೆ ಹಾಗೂ ಆಧಾರ್ ಸಂಖ್ಯೆ ಜೋಡಿಸಿದರೆ ಪರಿಶೀಲಿಸಿ ಆ ಹೆಸರನ್ನು ಮತ್ತೆ ಪಡಿತರ ಚೀಟಿಗೆ ಸೇರ್ಪಡೆ ಮಾಡಲಾಗುವುದು ಎಂದು ಖಾದರ್ ಇದೇ ವೇಳೆ ಸ್ಪಷ್ಟನೆ ನೀಡಿದರು.

ಒಟ್ಟಿಗೆ ಕೂಪನ್: ಅಕ್ಟೋಬರ್‌ನಿಂದ ಮೂರು ತಿಂಗಳ ಕೂಪನ್ ಏಕಕಾಲಕ್ಕೆ ವಿತರಿಸಲಾಗುವುದು. ‘ಕೂಪನ್’ ವ್ಯವಸ್ಥೆಯನ್ನು ಮುಂದಿನ ತಿಂಗಳಿಂದ ಗ್ರಾಮೀಣ ಪ್ರದೇಶಕ್ಕೆ ವಿಸ್ತರಿಸಲಾಗುತ್ತಿದ್ದು, ನಕಲಿ ಪಡಿತರ ಚೀಟಿ ಪತ್ತೆ ಹಾಗೂ ಅರ್ಹರಿಗೆ ಸೌಲಭ್ಯ ದೊರಕಿಸಿಕೊಡಬೇಕೆಂಬುದು ಕೂಪನ್ ವ್ಯವಸ್ಥೆಯ ಉದ್ದೇಶವಾಗಿದೆ ಎಂದು ಖಾದರ್ ಸಮರ್ಥಿಸಿಕೊಂಡರು.

ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಹಾಗೂ ತಾಂತ್ರಿಕ ತೊಂದರೆಗಳ ಹಿನ್ನೆಲೆಯಲ್ಲಿ ಇಲಾಖೆಯಿಂದಲೇ ಮೊಬೈಲ್ ಕೂಪನ್ ಯಂತ್ರ ವಿತರಿಸಲಾಗುತ್ತಿದೆ ಎಂದ ಅವರು, ಪಡಿತರ ಚೀಟಿಗಳ ಸಂಖ್ಯೆಯನ್ನು ಆಧರಿಸಿ ಪ್ರತಿ ತಾಲೂಕಿಗೆ 2ರಂತೆ ಜಿಲ್ಲೆಗೆ 10 ಮೊಬೈಲ್ ಯಂತ್ರ ವಿತರಣೆ ಮಾಡಲಾಗುವುದು ಎಂದರು. ಮುಂದಿನ 3 ತಿಂಗಳ ಒಳಗೆ ಪಡಿತರ ವಿತರಣಾ ವ್ಯವಸ್ಥೆಯ ಎಲ್ಲ ನ್ಯೂನತೆಗಳನ್ನು ಸರಿಪಡಿಸಿ, ಸೂಕ್ತ ವ್ಯವಸ್ಥೆ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದ ಖಾದರ್, ನಗರ ಪ್ರದೇಶದಲ್ಲಿ ಶೇ.72ರಷ್ಟು ಆಧಾರ್ ಸಂಖ್ಯೆ ಜೋಡಣೆಯಾಗಿದೆ ಎಂದು ಮಾಹಿತಿ ನೀಡಿದರು.

ಕೂಪನ್ ವ್ಯವಸ್ಥೆಯಡಿ ಪ್ರಸ್ತುತ ನಗರ ಪ್ರದೇಶದ 5,538 ನ್ಯಾಯಬೆಲೆ ಅಂಗಡಿಗಳ 31 ಲಕ್ಷ ಪಡಿತರ ಚೀಟಿದಾರರ ಪೈಕಿ 17.19ಲಕ್ಷಕ್ಕೂ ಅಧಿಕ ಮಂದಿ ಕೂಪನ್ ಪಡೆದಿದ್ದಾರೆ. ಶೇ.55ರಷ್ಟು ಜನ ಪಡಿತರ ಕೂಪನ್ ಪಡೆದಿದ್ದಾರೆಂದು ಖಾದರ್ ತಿಳಿಸಿದರು.

ಮನೆ ಬಾಗಿಲಿಗೆ ಪಡಿತರ ಚೀಟಿ: ಇನ್ನು 10 ದಿನಗಳಲ್ಲಿ ಹೊಸ ಎಪಿಎಲ್ ಕಾರ್ಡ್‌ಗೆ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದ ಖಾದರ್, ಈ ತಿಂಗಳ ಅಂತ್ಯಕ್ಕೆ ಬಿಪಿಎಲ್ ಹೊಸ ಕಾರ್ಡ್‌ಗಳ ವಿತರಣೆ ಪ್ರಕ್ರಿಯೆ ಪ್ರಾರಂಭಿಸಲಾಗುವುದು. ಅರ್ಜಿ ಸಲ್ಲಿಸಿದ ಒಂದು ವಾರದಲ್ಲಿ ವಿಲೇವಾರಿ ಮಾಡಲಾಗುವುದು ಎಂದರು.

ಗ್ರಾಮೀಣ ಪ್ರದೇಶದಲ್ಲಿ ಬಿಪಿಎಲ್ ಕಾರ್ಡ್ ವಿತರಣೆ ಹೊಣೆಯನ್ನು ಗ್ರಾ.ಪಂ. ಕಾರ್ಯದರ್ಶಿಗೆ ವಹಿಸಿದ್ದು, ಅರ್ಜಿಯನ್ನು ಪರಿಶೀಲಿಸಿ ಗ್ರಾ.ಪಂ. ಸಮಿತಿಗಳೆ ಫಲಾನು ಭವಿಗಳನ್ನು ಆಯ್ಕೆ ಮಾಡಲಿದ್ದಾರೆ ಎಂದ ಅವರು, ಸ್ಥಳೀಯ ಸಂಸ್ಥೆಗಳ ಅನುಮೋದನೆ ಬಳಿಕ ನಗರ ಪ್ರದೇಶಗಳಲ್ಲಿ ನೂತನ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದರು.

ಸಿಬ್ಬಂದಿ ಕೊರತೆ, ವಿಳಂಬ ತಪ್ಪಿಸಲು ಪಡಿತರ ಚೀಟಿ ವಿತರಣೆ ನಿಯಮಾವಳಿ ಸರಳೀಕರಿಸಿದ್ದು, ಫಲಾನುಭವಿಗಳನ್ನು ಗುರುತಿಸಲು ಗ್ರಾ.ಪಂ.ಗಳಿಗೆ ಅಧಿಕಾರ ನೀಡಲಾಗಿದೆ ಎಂದ ಅವರು, ಆಧಾರ್ ಮಾದರಿಯ ನೂತನ ಪಡಿತರ ಚೀಟಿಯನ್ನು ಸ್ಪೀಡ್‌ಫೋಸ್ಟ್ ಮೂಲಕ ರವಾನಿಸಲಾಗುವುದು ಎಂದರು. ಗೋಷ್ಠಿಯಲ್ಲಿ ಮೇಲ್ಮನೆ ಸದಸ್ಯ ರಿಝ್ವಿನ್ ಅರ್ಶದ್, ಇಲಾಖೆ ಕಾರ್ಯದರ್ಶಿ ಹರ್ಷಾಗುಪ್ತ ಉಪಸ್ಥಿತರಿದ್ದರು.

ಹೆಚ್ಚುವರಿ ಅಕ್ಕಿ ಮತ್ತು ತೊಗರಿಬೇಳೆ ವಿತರಣೆ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದು, ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯನವರೊಂದಿಗೆ ಸಮಾಲೋಚನೆ ನಡೆಸಿ ವಿತರಿಸಲಾಗುವುದು. ಪಡಿತರ ಸೀಮೆಎಣ್ಣೆಗೆ ಗ್ರಾಮೀಣ ಪ್ರದೇಶದಲ್ಲಿ ಫಲಾನುಭವಿಗಳು ತಮ್ಮ ಹೆಸರು ನೋಂದಣಿ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

- ಯು.ಟಿ.ಖಾದರ್, ಆಹಾರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X