ಶಿರಸಿಯಲ್ಲಿ ಬೈಕ್ ಸ್ಕಿಡ್: ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಶಿರಸಿ, ಸೆ.11:ಬೈಕ್ ಒಂದು ಸ್ಕಿಡ್ ಆದ ಪರಿಣಾಮ ಬೈಕ್‌ನಲ್ಲಿದ್ದ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಸಿ ಹುಬ್ಬಳ್ಳಿ ರಸ್ತೆಯ ಎಕ್ಕಂಬಿ ಬಳಿ ರವಿವಾರ ಸಂಭವಿಸಿದೆ.
ಮೃತರನ್ನು ಕೊಪ್ಪಳ ಜಿಲ್ಲೆಯ ಕೋಳಿವಾಡದ ಮಾಲತೇಶ ಹಾಗೂ ರಾಜಾ ಸಾಹೇಬ್ ಎಂದು ಗುರುತಿಸಲಾಗಿದೆ.
ಸವಾರರು ಹುಬ್ಬಳ್ಳಿಯಿಂದ ಶಿರಸಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೈಕ್ ಸ್ಕಿಡ್ಡಾಗಿ ಕಟ್ಟೆಗೆ ಅಪ್ಪಳಿಸಿದ್ದು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿವೇಗದಿಂದ ಬೈಕ್ ಚಲಾಯಿಸುತ್ತಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





