ಬೆಂಗಳೂರಿನ ಮೈಸೂರು ರಸ್ತೆ-ಮಾಗಡಿ ರಸ್ತೆ ಸ್ವಯಂಪ್ರೇರಿತ ಬಂದ್

ಬೆಂಗಳೂರು, ಸೆ.12: ಕಾವೇರಿ ವಿಚಾರವಾಗಿ ಕರ್ನಾಟಕದಲ್ಲಿ ಹೋರಾಟ, ಪ್ರತಿಭಟನೆ ತೀವ್ರಗೊಂಡಿದ್ದು, ನಗರದ ಮೈಸೂರು ರಸ್ತೆ ಹಾಗೂ ಮಾಗಡಿ ರಸ್ತೆಯಲ್ಲಿ ಸ್ವಯಂ ಪ್ರೇರಿತ ವಾಗಿ ಅಂಗಡಿ-ಮುಗ್ಗಟ್ಟುಬಂದ್ ಮಾಡಲಾಗಿದೆ. ಪರಿಸರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮೈಸೂರು ರಸ್ತೆಯ ಟಿಂಬರ್‌ಯಾರ್ಡ್‌ನಲ್ಲಿ ನಿಲ್ಲಿಸಲಾಗಿದ್ದ ತಮಿಳುನಾಡು ನೋಂದಣಿಯ 5 ಲಾರಿಗಳಿಗೆ ಬೆಂಕಿ ಹಚ್ಚಲಾಗಿದೆ. ಅಡಿಯಾರ್ ಭವನ್ ಹೊಟೇಲ್ ಮೇಲೆ ದಾಳಿ ನಡೆಸಿ ಗಾಜುಗಳನ್ನು ಪುಡಿಪುಡಿ ಮಾಡಲಾಗಿದೆ. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಸಿಡಿಸಿದ್ದಾರೆ.
ಕಾವೇರಿ ವಿಚಾರವಾಗಿ ನಗರದ ಹಲವೆಡೆ ಗಲಾಟೆ ನಡೆದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು ಸೂಕ್ಷ್ಮ ಪ್ರದೇಶದಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಎಎನ್ ಮೇಘರಿಕ್ ಆದೇಶಿಸಿದ್ದಾರೆ.
Next Story





