ಕನ್ನಡಿಗರಿಗೆ ರಕ್ಷಣೆ ನೀಡುವಂತೆ ತಮಿಳುನಾಡು ಸಿಎಂಗೆ ಪತ್ರ: ಪರಮೇಶ್ವರ್

ಬೆಂಗಳೂರು, ಸೆ.12: ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಸಿಎಂ ಜಯಲಲಿತಾ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಿ ತಮಿಳಿಗರಿದ್ದಾರೋ ಅವರಿಗೆ ರಕ್ಷಣೆ ಒದಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಮಿಳು ನಾಡಿನಲ್ಲಿ ಕನ್ನಡಿಗರಿಗೆ ರಕ್ಷಣೆ ನೀಡುವ ವಿಚಾರವಾಗಿ ಸಿಎಂ ಈಗಾಗಲೇ ಪತ್ರ ಬರೆದಿದ್ದಾರೆ. ಕನ್ನಡಿಗರಿಗೆ ರಕ್ಷಣೆ ನೀಡಿ ಎಂದು ಮನವಿ ಮಾಡಿದ್ದೇವೆ. ತಮಿಳುನಾಡಿನಲ್ಲಿರುವ ಕನ್ನಡಿಗರಿಗೆ ಯಾವುದೆ ರೀತಿಯ ತೊಂದರೆ ಆಗಬಾರದೆಂದು ಮನವಿ ಮಾಡಿಕೊಂಡಿದ್ದೇವೆ ಎಂದು ಹೇಳಿದರು.
ಕಾವೇರಿ ವಿಚಾರದಲ್ಲಿ ಸರಕಾರದ ಮುಂದಿನ ನಡೆ ಕುರಿತು ಚರ್ಚಿಸಲು ಸೆ.13ರಂದು ಸಿಎಂ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
Next Story





