ಬೆಂಗಳೂರು: ಇಬ್ಬರು ಯುವಕರ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು, ಸೆ.12: ಹೊಯ್ಸಳ ವಾಹನಕ್ಕೆ ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಪೊಲೀಸರ ಗುಂಡೇಟಿನಿಂದ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿದೆ.
ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಾಜ್ಯದಲ್ಲಿ ಅಹಿತಕರ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೆ.14ರವರೆಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ನಾಳೆ ಬೆಂಗಳೂರು ವ್ಯಾಪ್ತಿಯಲ್ಲಿ ಬಕ್ರೀದ್ ಹಬ್ಬ ಆಚರಣೆ ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಮಂಡ್ಯ-ಮೈಸೂರಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದಲ್ಲಿ ಪರಿಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿದ್ದು, ಹೆಚ್ಚುವರಿ ಪಡೆಗಳನ್ನು ಕಳುಹಿಸಲು ವಿನಂತಿಸಿದ್ದಾರೆ ಎಂದು ತಿಳಿದುಬಂದಿದೆ.





