ಕಾವೇರಿ ಕಿಚ್ಚಿಗೆ ಓರ್ವ ಬಲಿ

ಬೆಂಗಳೂರು, ಸೆ.12: ಹೊಯ್ಸಳ ವಾಹನಕ್ಕೆ ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ್ದ ಫೈರಿಂಗ್ ನಲ್ಲಿ ಗಾಯಗೊಂಡಿದ್ದ ಇಬ್ಬರು ಯುವಕರ ಪೈಕಿ ಓರ್ವ ಯುವಕ ಮೃತಪಟ್ಟಿದ್ದಾನೆ.
ಪೊಲೀಸ್ ಇಲಾಖೆಗೆ ಸೇರಿದ ಹೊಯ್ಸಳ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಿ ಹೆಗ್ಗನಹಳ್ಳಿ ಸಮೀಪದ ಮೋಹನ್ ಥಿಯೇಟರ್ ಸಮೀಪ ಕ್ಷಿಪ್ರ ಕಾರ್ಯಾಚರಣೆ ಪಡೆಯ ಪೊಲೀಸರು ಗುಂಡಿನ ದಾಳಿ ನಡೆಸಿದ್ದರು. ಘಟನೆಯ ಪರಿಣಾಮ ಇಬ್ಬರು ಗಾಯಗೊಂಡಿದ್ದರು.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಓರ್ವ ಯುವಕ ಮೃತಪಟ್ಟಿದ್ದಾನೆ ಎಂದು ಐಜಿಪಿ ಓಂಪ್ರಕಾಶ್ ಮಾಹಿತಿ ನೀಡಿದ್ದಾರೆ.
Next Story





