ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ: ಸಿಎಂ ಎಚ್ಚರಿಕೆ

ಬೆಂಗಳೂರು, ಸೆ.13: ಕಾವೇವಿ ವಿವಾದಕ್ಕೆ ಸಂಬಂಧಪಟ್ಟಂತೆ ರಾಜ್ಯಾದ್ಯಂತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಹೋರಾಟದ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಕಾವೇರಿ ವಿಚಾರದಲ್ಲಿ ಪರಿಸ್ಥಿತಿ ಕೈಗೆ ಬುದ್ದಿ ನೀಡಿ ಕಾನೂನನ್ನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಶಾಂತಿ ಕೆಡಿಸದೆ ಕಾನೂನು ಸುವ್ಯವಸ್ಥೆ ಕಾಪಾಡಲು ಉಭಯ ರಾಜ್ಯಗಳ ಜನತೆ ಸಹಕರಿಸಬೇಕು ಎಂದು ಅವರು ಜನತೆಗೆ ಮನವಿ ಮಾಡಿಕೊಂಡಿದ್ದಾರೆ.
Next Story





