ಪಟ್ಟೇಗಾರಪಾಳ್ಯದಲ್ಲಿ ಪ್ರತಿಭಟನೆ, ಲಾಠಿ ಚಾರ್ಜ್

ಬೆಂಗಳೂರು, ಸೆ.13: ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹದಿನಾರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕರ್ಪ್ಯೂ ಹೇರಲಾಗಿದ್ದರೂ, ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ಟೇಗಾರಪಾಳ್ಯದಲ್ಲಿ ರಸ್ತೆಯಲ್ಲಿ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದ ಜನರನ್ನು ಪೊಲೀಸರು ಲಾಠಿಚಾರ್ಜ್ ನಡೆಸಿ ಚದುರಿಸಿದ್ದಾರೆ.
ರಸ್ತೆಗೆ ಅಡ್ಡಲಾಗಿ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದ ಯುವಕರ ಮೇಲೆ ಪೊಲೀಸರು ಅಟ್ಟಾಡಿಸಿಕೊಂಡು ಹೋಗಿ ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಹೆಗ್ಗನಹಳ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಅಶ್ರವಾಯು ಪ್ರಯೋಗಿಸಿ, ಲಾಠಿ ಚಾರ್ಜ್ ನಡೆಸಿ ಚದುರಿಸಿದ್ದಾರೆ.ಮೂವತ್ತೂ ಅಧಿಕ ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
Next Story





