ಪಡುಮಲೆ ಸಮುದಾಯ ಭವನಕ್ಕೆ ಶಿಲಾನ್ಯಾಸ

ಪುತ್ತೂರು, ಸೆ.13: ವೀರ ಪುರುಷರಾದ ಕೋಟಿಚೆನ್ನಯರ ಹುಟ್ಟೂರಾದ ಪಡುಮಲೆಯ ಸಂಕಪಾಲ ಬೆಟ್ಟದ ಬಳಿಯಲ್ಲಿ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸಮುದಾಯ ವನಕ್ಕೆ ರಾಜ್ಯ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮಂಗಳವಾರ ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಸರಕಾರ ಕೋಟಿ ಚೆನ್ನಯರ ಹುಟ್ಟೂರಾದ ಪಡುಮಲೆಯ ಅಭಿವೃದ್ಧಿಗೆ 5 ಕೋಟಿ ರೂ. ಮಂಜೂರುಗೊಳಿಸಿದ್ದು, ಈ ಅನುದಾನದಲ್ಲಿ 2.30 ಕೋಟಿ ರೂ. ಸಮುದಾಯ ಭವನಕ್ಕೆ ಕಾದಿರಿಸಲಾಗಿದೆ. ಉಳಿದ ಭಾಗವನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಬಲಾಢ್ಯರ ವಿರುದ್ಧ ಪ್ರತಿಭಟನೆ ನಡೆಸಿ ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಹೋರಾಟ ನಡೆಸಿದ ವೀರಪುರುಷರಾದ ಕೋಟಿ ಚೆನ್ನಯರು ಸ್ವಾಭಿಮಾನ, ವೀರತ್ವ ಮತ್ತು ಕ್ತಿಯ ಸಂಕೇತವಾಗಿದ್ದು, ಅವರ ಹೆಸರನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.
ಶಾಸಕಿ ಶಕುಂತಳಾ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷೆ ಭವಾನಿ ಚಿದಾನಂದ, ಸದಸ್ಯರಾದ ರಾಧಾಕೃಷ್ಣ ಬೋರ್ಕರ್, ಉಷಾ ಅಂಚನ್, ಬಡಗನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಗೌಡ ಕನ್ನಾಯ, ಪುತ್ತೂರು ನಗರ ಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು, ಮೆಸ್ಕಾಂ ನಿರ್ದೇಶಕಿ ಮಲ್ಲಿಕಾ ಪಕಳ, ಪುತ್ತೂರು ತಹಶೀಲ್ದಾರ್ ಪುಟ್ಟ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.







