ಪ್ರಧಾನಿ ಭೇಟಿಗೆ ಕನ್ನಡ ಚಿತ್ರರಂಗ ಚಿಂತನೆ: ಶಿವರಾಜ್‌ಕುಮಾರ್

ಬೆಂಗಳೂರು, ಸೆ. 13: ಕಾವೇರಿ ವಿವಾದವನ್ನು ಬಗೆಹರಿಸುವಂತೆ ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಲು ಕನ್ನಡ ಚಿತ್ರರಂಗ ಚಿಂತನೆ ನಡೆಸಿದೆ ಎಂದು ಹಿರಿಯ ನಟ ಶಿವರಾಜ್‌ಕುಮಾರ್ ತಿಳಿಸಿದ್ದಾರೆ.
ಮಂಗಳವಾರ ದೃಶ್ಯಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಕಾವೇರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಲಾಗುವುದು. ಈ ಕುರಿತು ಸಿನೆಮಾ ಕಲಾವಿದರು, ತಂತ್ರಜ್ಞರು ಪ್ರಧಾನಿಯವರನ್ನು ಭೇಟಿ ಮಾಡುವ ಕುರಿತು ನಾಳೆ ವಾಣಿಜ್ಯ ಮಂಡಳಿಯಲ್ಲಿ ಸಭೆ ಸೇರಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Next Story





