Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಳೆ (ಸೆ.15) ರೈಲು ಬಂದ್

ನಾಳೆ (ಸೆ.15) ರೈಲು ಬಂದ್

ವಾರ್ತಾಭಾರತಿವಾರ್ತಾಭಾರತಿ14 Sept 2016 6:56 PM IST
share
ನಾಳೆ (ಸೆ.15) ರೈಲು ಬಂದ್


ಬೆಂಗಳೂರು, ಸೆ.14: ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂದು ಕೋರ್ಟ್ ನೀಡಿರುವ ತೀರ್ಪು ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ (ಸೆ.15) ರಾಜ್ಯಾದ್ಯಂತ ರೈಲು ಬಂದ್ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡಪರ ಚಳವಳಿಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
  ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ರಸ್ತೆಯಲ್ಲಿ ಮಲಗಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ನಂತರ ಮಾತನಾಡಿದ ವಾಟಾಳ್ ನಾಗರಾಜ್, ರಾಜ್ಯದಲ್ಲಿ ಕಾವೇರಿ ಸಮಸ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದ್ದು, ಗಲಭೆಗಳು ಹೆಚ್ಚಾಗುತ್ತಿವೆ. ಆದರೂ ರಾಜ್ಯದ ಸಂಸದರು ಪ್ರಧಾನಿ ಮಂತ್ರಿ ನರೇಂದ್ರ ಮೋದಿಗೆ ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು, ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸುವ ಕುರಿತು ಮಾತಾಡುತ್ತಿಲ್ಲ ಎಂದು ಕಿಡಿಕಾರಿದರು. ಕೇಂದ್ರ ಸರಕಾರಕ್ಕೆ ರಾಜ್ಯದ ಪ್ರಸ್ತುತ ಸ್ಥಿತಿಯನ್ನು ಮನವರಿಕೆ ಮಾಡಿಕೊಡುವುದಕ್ಕಾಗಿ ರೈಲು ಬಂದ್ ಹಮ್ಮಿಕೊಳ್ಳಲಾಗಿದ್ದು, ಬೆ. 6 ರಿಂದ ಸಂಜೆ 6 ವರೆಗೆ ಬಂದ್ ನಡೆಯುತ್ತದೆ.

ಇದರ ನಂತರವೂ ಪ್ರಧಾನಿ ಮೋದಿ ಮಧ್ಯಪ್ರವೇಶ ಮಾಡಿ, ಸಮಸ್ಯೆ ಇತ್ಯರ್ಥಪಡಿಸುವ ಬಗ್ಗೆ ಮಾತಾಡಲಿಲ್ಲ ಎಂದಾದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುತ್ತದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್‌ಶೆಟ್ಟಿ ಸೇರಿದಂತೆ ಇನ್ನಿತರೆ ಸಂಘಟನೆಗಳ ಮುಖಂಡರು ಭಾಗವಹಿಸಿ ಬಂದ್ ಬೆಂಬಲ ವ್ಯಕ್ತಪಡಿಸಿದರು.
 

ರಾಜ್ಯಾದ್ಯಂತ ರೈಲು ಬಂದ್ ಹಿನ್ನೆಲೆಯಲ್ಲಿ ಇಂದು ನಗರದ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ರೈಲು ಬಂದ್ ನಡೆಯಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದರು. 


ಬಂದ್‌ಗೆ ಅವಕಾಶವಿಲ್ಲ
 ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಮೇಘರಿಕ್, ಕನ್ನಡಪರ ಸಂಘಟನೆಗಳು ಕರೆ ನೀಡಿರುವ ರೈಲು ಬಂದ್‌ಗೆ ಅವಕಾಶ ನೀಡುವುದಿಲ್ಲ. ನಗರದಲ್ಲಿ ನಿಷೇಧಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ, ಮೆರವಣಿಗೆ, ಬಂದ್ ನಡೆಸಲು ಅವಕಾಶವಿಲ್ಲ. ಒಂದು ವೇಳೆ ಜನರು ಗುಂಪು ಕೂಡಿ ರೈಲು ತಡೆ ಮಾಡಲು ಮುಂದಾದರೆ ಎಲ್ಲರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆಯನ್ನು ರವಾನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X