Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ ಜಮೀನನಲ್ಲಿ ಅನಧಿಕೃತ ವಾಸ್ತವ್ಯ...

ಸರಕಾರಿ ಜಮೀನನಲ್ಲಿ ಅನಧಿಕೃತ ವಾಸ್ತವ್ಯ ಪ್ರಕರಣ: ಡಿಸೆಂಬರ್‌ನೊಳಗೆ ವಿಲೇಗೆ ಸಚಿವ ಕಾಗೋಡು ತಾಕೀತು

ಕ್ರಮ ಆಗದಿದ್ದಲ್ಲಿ ಅಧಿಕಾರಿಗಳ ಎತ್ತಂಗಡಿ!

ವಾರ್ತಾಭಾರತಿವಾರ್ತಾಭಾರತಿ15 Sept 2016 4:17 PM IST
share
ಸರಕಾರಿ ಜಮೀನನಲ್ಲಿ ಅನಧಿಕೃತ ವಾಸ್ತವ್ಯ ಪ್ರಕರಣ: ಡಿಸೆಂಬರ್‌ನೊಳಗೆ ವಿಲೇಗೆ ಸಚಿವ ಕಾಗೋಡು ತಾಕೀತು

ಮಂಗಳೂರು, ಸೆ.15: ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ವಾಸವಿದ್ದು, 94ಎ ಮತ್ತು 94ಬಿಗಳಡಿ ನಮೂನೆ 50 ಮತ್ತು ನಮೂನೆ 53ರಲ್ಲಿ ಅರ್ಜಿ ಸಲ್ಲಿಸಿದ ಬಾಕಿ ಇರುವ ಪ್ರಕರಣಗಳನ್ನು ಡಿಸೆಂಬರ್ ಅಂತ್ಯದೊಳಗೆ ವಿಲೇ ಮಾಡುವಂತೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಅನಾದಿ ಕಾಲದಿಂದಲೂ ಸರಕಾರಿ ಜಮೀನಲ್ಲಿ ಅನಧಿಕೃತವಾಗಿ ವಾಸ್ತವ್ಯ, ಕೃಷಿ ಅಥವಾ ಇತರ ಚಟುವಟಿಕೆಗಳನ್ನು ನಡೆಸುತ್ತಿರುವವರು 94ಎ ಮತ್ತು 94 ಬಿಯಡಿ ನೀಡಿರುವ ಅರ್ಜಿಗಳನ್ನು ಸಕ್ರಮಗೊಳಿಸಿ ವಿಲೇ ಮಾಡಲು ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಎಲ್ಲ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು. ಈ ನಿಟ್ಟಿನಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರರು ವಾರಕ್ಕೊಮ್ಮೆ ಸಭೆ ನಡೆಸಿ ಕ್ರಮಕೈಗೊಳ್ಳಬೇಕು. ಮೇಲಧಿಕಾರಿಗಳು ಪ್ರಗತಿಯ ಬಗ್ಗೆ ನಿಗಾ ವಹಿಸಬೇಕು. ಆಯಾ ತಾಲೂಕುಗಳಲ್ಲಿ ಡಿಸೆಂಬರ್‌ನೊಳಗೆ ಈ ಕಾರ್ಯವನ್ನು ಪೂರೈಸದ ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರರು ಹಾಗೂ ಕಾರ್ಯ ನಿರ್ವಹಣಾಧಿಕಾರಿಗಳನ್ನು ಎತ್ತಂಗಡಿ ಮಾಡುವುದಾಗಿ ಸಚಿವ ಕಾಗೋಡು ತಿಮ್ಮಪ್ಪ ಎಚ್ಚರಿಕೆ ನೀಡಿದರು. ಈ ವೇಳೆ ಮಾತನಾಡಿದ ದ.ಕ. ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್, ಜಿಲ್ಲೆಯಲ್ಲಿ 94ಎ ಯಡಿ ಒಟ್ಟು 2,50,805 ಎಕರೆ ಭೂಮಿಗೆ ಸಂಬಂಧಿಸಿ ಒಟ್ಟು 1,13,730 ಅರ್ಜಿಗಳು ಸ್ವೀಕೃತವಾಗಿವೆ. ಇವುಗಳಲ್ಲಿ 59,624 ಎಕರೆ ಭೂಮಿಯ 46,141 ಅರ್ಜಿಗಳು ವಿಲೇ ಆಗಿವೆ. 64,905 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದರು 94ಬಿಯಡಿ ಒಟ್ಟು 2,32,183 ಎಕರೆ ವಿಸ್ತೀರ್ಣದ ಭೂಮಿಗೆ ಸಂಬಂಧಿಸಿ 1,11,387 ಅರ್ಜಿಗಳು ಸ್ವೀಕೃತವಾಗಿದ್ದು, 37,705 ಎಕರೆ ವಿಸ್ತೀರ್ಣದ ಭೂಮಿಯಲ್ಲಿನ 28,571 ಅರ್ಜಿಗಳನ್ನು ಸಕ್ರಮಗೊಳಿಸಲಾಗಿದೆ. 56,777 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ಅವರು ಮಾಹಿತಿ ನೀಡಿದರು.

94ಸಿ, 94ಸಿಸಿಯಡಿ ಅಧಿಕಾರಿಗಳೇ ಅರ್ಜಿ ಪಡೆಯಲು ಸೂಚನೆ

 ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿಕೊಂಡು ವಾಸ್ತವ್ಯವಿರುವವರು 94ಸಿ (ಗ್ರಾಮಾಂತರ) ಹಾಗೂ 94ಸಿಸಿ(ನಗರ)ಯಡಿ ಅರ್ಜಿ ಸಲ್ಲಿಸಲು ಬಾಕಿ ಇದ್ದಲ್ಲಿ ತಹಶೀಲ್ದಾರರ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೇ ಮುಂದೆ ನಿಂತು ಅರ್ಜಿ ಪಡೆಯುವ ಕಾರ್ಯ ಮಾಡಬೇಕು. ಬಳಿಕ ಆ ಅರ್ಜಿಗಳನ್ನು ಸಕ್ರಮಗೊಳಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶಿಸಿದರು. ದ.ಕ. ಜಿಲ್ಲೆಯಲ್ಲಿ 94 ಸಿಯಡಿ ಈವರೆಗೆ 59,920 ಅರ್ಜಿಗಳು ಸ್ವೀಕೃತವಾಗಿದ್ದು, 11,418 ಅರ್ಜಿಗಳು ಮಂಜೂರಾಗಿವೆ. 14,466 ಅರ್ಜಿಗಳು ತಿರಸ್ಕೃತಗೊಂಡಿವೆ. 34,036 ಅರ್ಜಿಗಳು ವಿಲೇಗಾ ಬಾಕಿ ಇದ್ದು, 11110 ಹಕ್ಕುಪತ್ರಗಳನ್ನು ನೀಡಲಾಗಿದೆ. 94 ಸಿಸಿಯಡಿ 21841 ಅರ್ಜಿಗಳು ಸ್ವೀಕೃತಗೊಂಡಿದ್ದು, 135 ಅರ್ಜಿಗಳು ಮಂಜೂರಾಗಿವೆ. 12 ಅರ್ಜಿಗಳು ತಿರಸ್ಕೃತಗೊಂಡಿದ್ದು, 21694 ಅರ್ಜಿಗಳು ವಿಲೇ ಆಗಬೇಕಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜಾ, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕರಾದ ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ ಮೊಯ್ದೀನ್ ಬಾವಾ ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X