Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಮಿಳುನಾಡು ಬಂದ್‌ಗೆ ಕರೆ ಹಿನ್ನೆಲೆ:...

ತಮಿಳುನಾಡು ಬಂದ್‌ಗೆ ಕರೆ ಹಿನ್ನೆಲೆ: ರಾಜ್ಯದಲ್ಲಿ ಬಿಗಿಬಂದೋಬಸ್ತ್; ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ15 Sept 2016 7:48 PM IST
share
ತಮಿಳುನಾಡು ಬಂದ್‌ಗೆ ಕರೆ ಹಿನ್ನೆಲೆ: ರಾಜ್ಯದಲ್ಲಿ ಬಿಗಿಬಂದೋಬಸ್ತ್; ಡಾ.ಜಿ.ಪರಮೇಶ್ವರ್

ಬೆಂಗಳೂರು, ಸೆ.15: ಕೆಲವು ಸಂಘಟನೆಗಳು ಶುಕ್ರವಾರ(ಸೆ.16) ತಮಿಳುನಾಡು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೆ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಮಿಳುನಾಡು ಬಂದ್ ಸಂದರ್ಭದಲ್ಲಿ ಅಲ್ಲಿನ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೆ ಆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ಮುಖ್ಯಕಾರ್ಯದರ್ಶಿ ಜೊತೆ ಮಾತುಕತೆ ನಡೆಸಲಾಗಿದೆ ಎಂದರು.

 ತಮಿಳುನಾಡಿನಲ್ಲಿ ಯಾವುದಾದರೂ ಅಹಿತಕರ ಘಟನೆಗಳು ಸಂಭವಿಸಿದರೆ, ಅದಕ್ಕೆ ನಮ್ಮ ರಾಜ್ಯದಲ್ಲೂ ಪ್ರತಿಕಾರ ಮೂಡುವ ಮುನ್ಸೂಚನೆಗಳು ಇರುವ ಹಿನ್ನೆಲೆಯಲ್ಲಿ ಕಾವೇರಿ ಕಣಿವೆ ಭಾಗದಲ್ಲಿರುವ ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಅವರು ಹೇಳಿದರು.

ಚಾಮರಾಜನಗರದಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ 7 ರಸ್ತೆಗಳಿದ್ದು, ಈ ಭಾಗದಲ್ಲಿ ಭದ್ರತೆಗಾಗಿ 6 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೊಸೂರು ಸೇರಿದಂತೆ ತಮಿಳುನಾಡಿನ ಇನ್ನಿತರ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ 6 ರಸ್ತೆಗಳಿವೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು.

ಈ ಭಾಗದಲ್ಲಿ ಭದ್ರತೆಗಾಗಿ ತಲಾ ಒಂದು ಆರ್‌ಎಎಫ್, ಬಿಎಸ್‌ಎಫ್, 5 ಕೆಎಸ್‌ಆರ್‌ಪಿ, 8 ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಮೈಸೂರಿನಲ್ಲಿ 6 ಕೆಎಸ್‌ಆರ್‌ಪಿ ತುಕಡಿಗಳೊಂದಿಗೆ ಸ್ಥಳೀಯ ಸಿಎಆರ್ ಸಿಬ್ಬಂದಿಯನ್ನು ಭದ್ರತೆಗೆ ನೇಮಿಸಲಾಗಿದೆ ಎಂದು ಅವರು ಹೇಳಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ 8 ಕೆಎಸ್‌ಆರ್‌ಪಿ, ಬೆಂಗಳೂರು ನಗರದಲ್ಲಿ 11 ಸಿಎಪಿಎಫ್, 3 ಬಿಎಸ್‌ಎಫ್, 6 ಆರ್‌ಎಎಫ್ ಸೇರಿದಂತೆ 21 ತುಕಡಿಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, 6 ಸಾವಿರ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನೇಮಕ ಮಾಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನ 106 ಪೊಲೀಸ್‌ಠಾಣೆಗಳ ಪೈಕಿ 33 ಪೊಲೀಸ್‌ಠಾಣೆಗಳನ್ನು(ಪಶ್ಚಿಮ ವಿಭಾಗದ 26 ಹಾಗೂ ಪೂರ್ವ ವಿಭಾಗದ 7) ಸೂಕ್ಷ್ಮ ಎಂದು ಗುರುತಿಸಲಾಗಿದೆ. ಈ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣವಾದ ಕ್ರಮಗಳನ್ನು ಕೈಗೊಳ್ಳಲಾಗುವುದು. ಸೆ.5ರಿಂದಲೂ ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಿದ್ದನ್ನು ವಿರೋಧಿಸಿ ಬೆಂಗಳೂರು ಸೇರಿದಂತೆ ವಿವಿದೆಡೆ ನಡೆದಂತಹ ಘಟನೆಗಳಿಗೆ ಸಂಬಂಧಿಸಿದಂತೆ 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಹಲವರು ಅಮಾಯಕರು ಎಂದು ಕೇಳಿಬರುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

‘ರೈಲು ತಡೆ’ 210 ಮಂದಿ ಬಂಧನ

ರೈಲುಗಳ ಸಂಚಾರವನ್ನು ತಡೆಯಲು ಯತ್ನಿಸಿದ ಕೆಲ ಸಂಘಟನೆಗಳ 210 ಮಂದಿಯನ್ನು ಪೊಲೀಸರು ಬಂಧಿಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಬೆಂಗಳೂರಿನಲ್ಲಿ 54, ಹಾಸನದಲ್ಲಿ 40, ಮೈಸೂರು, ದಾವಣಗೆರೆ, ಶಿವಮೊಗ್ಗ, ಕಲಬುರ್ಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಯಾವುದೆ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ.

-ಡಾ.ಜಿ.ಪರಮೇಶ್ವರ್, ಗೃಹ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X