Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಮಿಕರಿಗೆ ಅನುಕೂಲವಾಗುವಂತೆ ಸೌಲಭ್ಯ...

ಕಾರ್ಮಿಕರಿಗೆ ಅನುಕೂಲವಾಗುವಂತೆ ಸೌಲಭ್ಯ ಒದಗಿಸಲು ಕೇಂದ್ರಕ್ಕೆ ಮನವಿ: ಸಿದ್ದೇಶ್ವರ್

ವಾರ್ತಾಭಾರತಿವಾರ್ತಾಭಾರತಿ15 Sept 2016 10:10 PM IST
share
ಕಾರ್ಮಿಕರಿಗೆ ಅನುಕೂಲವಾಗುವಂತೆ ಸೌಲಭ್ಯ ಒದಗಿಸಲು ಕೇಂದ್ರಕ್ಕೆ ಮನವಿ: ಸಿದ್ದೇಶ್ವರ್

ದಾವಣಗೆರೆ, ಸೆ.15: ಬಡಕಾರ್ಮಿಕರಿಗೆ ಅನುಕೂಲವಾಗುವಂತೆ ಇಎಸ್‌ಐ ಆಸ್ಪತ್ರೆಗೆ ಹೆಚ್ಚಿನ ಸೌಲಭ್ಯ ಒದಗಿಸಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ತಿಳಿಸಿದರು.

ನಗರದ ನಿಟುವಳ್ಳಿಯಲ್ಲಿ ಮುಕ್ತಾಯ ಹಂತದಲ್ಲಿರುವ ಕಾರ್ಮಿಕರ ರಾಜ್ಯ ವಿಮಾ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ಹಾಗೂ ಆಸ್ಪತ್ರೆ ಸೌಲಭ್ಯ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಆಸ್ಪತ್ರೆಯಲ್ಲಿ ವೈದ್ಯ ಸಿಬ್ಬಂದಿ ಕೊರತೆ ಹಾಗೂ ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಅಗತ್ಯ ಯಂತ್ರೋಪಕರಣ ಇಲ್ಲದಿರುವುದು ಗಮನಕ್ಕೆ ಬಂದಿದ್ದು, ಆಸ್ಪತ್ರೆಯಲ್ಲಿ ಅಗತ್ಯವಾಗಿ ಬೇಕಿರುವ ಸೌಲಭ್ಯಗಳ ಪಟ್ಟಿ ಮಾಡಿಕೊಟ್ಟಲ್ಲಿ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.

ಆಸ್ಪತ್ರೆಯಲ್ಲಿ ಡಯಾಲಿಸಿಸ್, ವೆಂಟಿಲೇಟರ್ ವ್ಯವಸ್ಥೆ ಇಲ್ಲ. ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡುವ ಸನ್ನಿವೇಶವಿದೆ. ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ಸೌಲಭ್ಯ ಇಲ್ಲ. ಈಗ 19 ಜನ ವೈದ್ಯರಿದ್ದು, ತಜ್ಞ ವೈದ್ಯರು ಸೇರಿದಂತೆ ಇನ್ನೂ 6 ಮಂದಿ ವೈದ್ಯ ಸಿಬ್ಬಂದಿಬೇಕಾಗಿದೆ. ಆಸ್ಪತ್ರೆಯಲ್ಲಿನ ಸ್ವಚ್ಛತೆಯೂ ತೃಪ್ತಿ ತಂದಿಲ್ಲ. ಹಂತ-ಹಂತವಾಗಿ ಇಲ್ಲಿನ ಸಮಸ್ಯೆ ಗಳನ್ನು ಬಗೆಹರಿಸಲು ಅವರು ಸೂಚಿಸಿದರು.

ಬಹುತೇಕ ಬಡ ಕಾರ್ಮಿಕರು ಆಸ್ಪತ್ರೆಗೆ ಬರುವುದರಿಂದ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು. ವೈದ್ಯರು ಸೌಜನ್ಯದಿಂದ ರೋಗಿಗಳ ಆರೈಕೆ ಮಾಡಬೇಕು. ಆಸ್ಪತ್ರೆಗೆ ಸೌಕರ್ಯ ಬೇಕಾದಲ್ಲಿ ನನ್ನ ಗಮನಕ್ಕೆ ತರಬೇಕು. ಕಾರ್ಮಿಕ ಮುಖಂಡರು ಹಾಗೂ ಮಾಧ್ಯಮದವರೂ ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ನಿಗಾ ವಹಿಸಬೇಕು ಎಂದು ಹೇಳಿದರು.

ಹಿಂದಿನ ಯುಪಿಎ ಸರಕಾರದ ಅವಧಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಕಾರ್ಮಿಕ ಸಚಿವರಾಗಿದ್ದಾಗ ದಾವಣಗೆರೆಯ ಇಎಸ್‌ಐ ಆಸ್ಪತ್ರೆ ಮೇಲ್ದರ್ಜೆಗೇರಿಸಿ ಹೊಸ ಕಟ್ಟಡ ಮಂಜೂರು ಮಾಡಲಾಗಿತ್ತು. ಹೊಸದಾಗಿ 50 ಹಾಸಿಗೆಗಳ ಕಟ್ಟಡ ನಿರ್ಮಿಸುವ ಮೂಲಕ ಒಟ್ಟು 100 ಹಾಸಿಗೆಗಳ ಆಸ್ಪತ್ರೆ ಅಭಿವೃದ್ಧಿಗೆ 24 ಕೋಟಿ ರೂ. ಅನುದಾನ ನೀಡಿತ್ತು. ಅದು ಕಡಿಮೆಯಾಗಿದ್ದರಿಂದ ಕೇಂದ್ರ ಬಿಜೆಪಿ ಸರಕಾರ ಇನ್ನೂ ಹೆಚ್ಚುವರಿಯಾಗಿ 6.5 ಕೋಟಿ ರೂ. ಬಿಡುಗಡೆ ಮಾಡಿದೆ. ಇನ್ನೆರಡು ತಿಂಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದ್ದು, ಕೇಂದ್ರ ಹಾಗೂ ರಾಜ್ಯ ಕಾರ್ಮಿಕ ಸಚಿವರನ್ನು ಕರೆಸಿ ಹೊಸ ಆಸ್ಪತ್ರೆ ಉದ್ಘಾಟಿಸಲಾಗುವುದು ಎಂದು ತಿಳಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಮುಖಂಡರಾದ ಎಚ್.ಎನ್. ಶಿವಕುಮಾರ್, ರಮೇಶ್ ನಾಯ್ಕ, ಪ್ರಭು ಕಲ್ಬುರ್ಗಿ, ಪಿ.ಎಸ್. ಜಯಣ್ಣ, ಎ.ವೈ. ಪ್ರಕಾಶ್, ಪಾಲಿಕೆ ಸದಸ್ಯ ಡಿ.ಕೆ.ಕುಮಾರ್, ಶಿವನಗೌಡ ಪಾಟೀಲ್, ಟಿಂಕರ್ ಮಂಜಣ್ಣ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಕೆ.ಎಲ್. ಪ್ರಕಾಶ್ ಮತ್ತಿತರರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X