Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಇಂದಿನ ಯುವ ಪೀಳಿಗೆಗೆ ವಿಶ್ವೇಶ್ವರಯ್ಯ...

‘ಇಂದಿನ ಯುವ ಪೀಳಿಗೆಗೆ ವಿಶ್ವೇಶ್ವರಯ್ಯ ಆದರ್ಶಪ್ರಾಯರು’

156ನೆ ಜನ್ಮ ದಿನಾಚರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ15 Sept 2016 10:24 PM IST
share
‘ಇಂದಿನ ಯುವ ಪೀಳಿಗೆಗೆ ವಿಶ್ವೇಶ್ವರಯ್ಯ ಆದರ್ಶಪ್ರಾಯರು’

ಚಿಕ್ಕಮಗಳೂರು, ಸೆ.15: ರಾಜ್ಯದ ಪ್ರಮುಖ ಯಶಸ್ವಿ ನೀರಾವರಿ ಯೋಜನೆಗಳ ಮೂಲಕ ವಿಶ್ವದ ಗಮನ ಸೆಳೆದ ಶಿಸ್ತಿನ ಸಿಪಾಯಿ ಸರ್.ಎಂ.ವಿ ಇಂದಿನ ಯುವಪೀಳಿಗೆಯ ಆದರ್ಶಪ್ರಾಯರು ಎಂದು ಕರ್ನಾಟಕ ಇಂಜಿನಿಯರ್‌ಗಳ ಸಂಘದ ಜಿಲ್ಲಾಧ್ಯಕ್ಷ ಎಚ್.ಎಂ.ಶಿವಪ್ರಕಾಶ್ ತಿಳಿಸಿದರು.

ಸರ್.ಎಂ.ವಿಶ್ವೇಶ್ವರಯ್ಯನವರ 156ನೆ ಜನ್ಮದಿನಾಚರಣೆ ಅಂಗವಾಗಿ ಲೋಕೋಪಯೋಗಿ ಇಲಾಖೆ ಆವರಣದಲ್ಲಿರುವ ಸರ್‌ಎಂವಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ರಸ್ತೆ ನಿರ್ಮಾಣ, ಕೈಗಾರಿಕೆ, ಪ್ರವಾಸೋದ್ಯಮ, ವಿದ್ಯುತ್‌ಶಕ್ತಿ ಸೇರಿದಂತೆ ವಾಣಿಜ್ಯ ಉದ್ಯಮಗಳ ಬಗ್ಗೆ ಹೆಚ್ಚು ಗಮನಹರಿಸಿ ರಾಜ್ಯದ ಅಭಿವೃದ್ದಿಗೆ ಸುಗಮ ಹಾದಿಯ ಮೂಲಕ ದಿಟ್ಟ ನಿರ್ಧಾರಗಳನ್ನು ಕೈಗೊಂಡು ವಿಶ್ವದ ಗಮನ ಸೆಳೆದ ಮಹಾನ್ ಇಂಜಿನಿಯರ್ ಸರ್‌ಎಂವಿ ಎಂದು ಬಣ್ಣಿಸಿದರು.

  ಇಂದಿನ ಯುವ ಪೀಳಿಗೆ ಸರ್‌ಎಂವಿ ಹಾದಿಯಲ್ಲಿ ನಡೆಯಲು ಮುಂದಾಗಿ ದೇಶದ ಸಮಗ್ರ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಪಣತೊಡಬೇಕು. ರಾಷ್ಟ್ರದ ಅಭಿವೃದ್ದಿಯಲ್ಲಿ ಇಂಜಿನಿಯರ್‌ಗಳ ಪಾತ್ರ ಮಹತ್ವದಾಗಿದ್ದು ಅದನ್ನರಿತು ರಾಜ್ಯ ಇಂಜಿನಿಯರ್‌ಗಳ ಸಂಘದಿಂದ ಹಲವು ಕಾರ್ಯಗಳನ್ನು ಏರ್ಪಡಿಸಿ ಯುವಪೀಗೆಗೆ ಅಗತ್ಯವುಳ್ಳ ಮಾಹಿತಿಗಳನ್ನು ನೀಡಿ ಸಹಕರಿಸಲಾಗುತ್ತಿದೆ ಎಂದರು. ದೂರ ದೃಷ್ಟಿ ಹೊಂದಿ ನಿರ್ಮಾಣ ಮಾಡಿರುವ ತುಂಗಭದ್ರ, ಕನ್ನಂಬಾಡಿ, ಶರಾವತಿ ಜಲಾಶಯಗಳು ಸೇರಿದಂತೆ ರಾಜ್ಯದ ಜನರಿಗೆ ಅತ್ಯಗತ್ಯವಾದ ಹಲವು ಅಭಿವೃದ್ದಿ ಯೋಜನೆಗಳು ಇಂದು ಸಹ ಸರ್‌ಎಂವಿ ಹೆಸರನ್ನು ಸಾರಿ ಹೇಳುತ್ತಿದೆ ಎಂದರೆ ಅವರ ಕೊಡುಗೆಗೆ ಬೆಲೆಕಟ್ಟಲು ಸಾಧ್ಯವಿಲ್ಲ ಎಂದರು.

ನಾವು ಮಾಡುವ ಕೆಲಸದಲ್ಲಿ ಸ್ವಾರ್ಥಬಿಟ್ಟು ಸಮಾಜಮುಖಿ ಚಿಂತನೆಯಿಂದ ಜಿಲ್ಲೆಯ ಅಭಿವೃದ್ದಿಗೆ ತೊಡಗಿಸಿಕೊಂಡರೆ ಸರ್‌ಎಂವಿ ದಿನಾಚರಣೆಗೂ ಅರ್ಥಬರುತ್ತದೆ ಎಂದರು.

ಹಾಸನ ಕಾರ್ಯಪಾಲಕ ಇಂಜಿನಿಯರ್ ಕೆ.ಎನ್.ರಮೇಶ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳಾದ ರವೀಂದ್ರ, ಚಂದ್ರಮೌಳಿ, ಸಹಾಯಕ ಇಂಜಿನಿಯರ್ ಹರೀಶ್, ಗುರುರಾಜ್, ಹುಲಿಯಪ್ಪಗೌಡ, ದಾವುದ್, ರವಿ, ಸುದರ್ಶನ್, ಜಯಪ್ರಕಾಶ್, ಶರ್ಮಾ, ಸತೀಶ್ ಇತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X