Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾನಭಂಗ ಯತ್ನದ ದೂರು ಸುಳ್ಳು ಸಿಸಿ...

ಮಾನಭಂಗ ಯತ್ನದ ದೂರು ಸುಳ್ಳು ಸಿಸಿ ಟಿವಿಯಿಂದ ಬಹಿರಂಗ.

ವಾರ್ತಾಭಾರತಿವಾರ್ತಾಭಾರತಿ15 Sept 2016 11:55 PM IST
share

ನೆಲ್ಯಾಡಿ, ಸೆ.15: ಇಲ್ಲಿನ ಮೊಬೈಲ್ ಶಾಪ್‌ವೊಂದರ ಮಾಲಕ ಮಾನಭಂಗಕ್ಕೆ ಯತ್ನಿಸಿದ್ದನೆಂಬ ಆರೋಪ ಸಿಸಿಟಿವಿ ದೃಶ್ಯಾವಳಿಯ ಮೂಲಕ ಸುಳ್ಳು ಎಂದು ಬಹಿರಂಗಗೊಂಡಿದೆ.
ಜು.10ರಂದು ಶಿರಾಡಿ ಮೂಲದ ಯುವತಿಯೋರ್ವಳು ನೆಲ್ಯಾಡಿಯ ಮೊಬೈಲ್ ಶಾಪ್‌ಗೆ ಕರೆನ್ಸಿ ಹಾಕಲು ತೆರಳಿದ್ದ ವೇಳೆ ಶಾಪ್‌ನಲ್ಲಿದ್ದ ಸಲೀಮ್ ಎಂಬವರು ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಲಾಗಿತ್ತು. ಯುವತಿ ನೀಡಿದ ದೂರಿಗೆ ತಕ್ಷಣ ಸ್ಪಂದಿಸಿದ ಪೊಲೀಸರು ಶಾಪ್‌ನಲ್ಲಿದ್ದ ಸಿಸಿ ಕ್ಯಾಮರಾವನ್ನು ವಶಪಡಿಸಿಕೊಂಡ ಘಟನೆ ನಡೆದಿತ್ತು. ಈ ನಡುವೆ ಹಿಂದೂ ಸಂಘಟನೆಯವರಿಂದ ಪೊಲೀಸರು ಆರೋಪಿಗಳ ಪರ ದುರ್ಬಲ ಕೇಸ್ ದಾಖಲಿಸಿದ್ದಾರೆ ಎಂದು ಆರೋಪಿಸಿ ಎಸ್ಪಿಯವರಿಗೆ ದೂರು ಸಲ್ಲಿಸಿತ್ತು.
ನೆಲ್ಯಾಡಿ ಠಾಣೆಯಲ್ಲಿ ದೂರುದಾರ ಯುವತಿ ಹಾಗೂ ಹಿಂದೂ ಸಂಘಟನೆಯ ಮುಖಂಡರ ಸಮಕ್ಷಮ ಸಿಸಿಟಿವಿಯಲ್ಲಿ ದಾಖಲಾದ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಕೈಹಿಡಿದು ಎಳೆಯುವಂತಹ ಯಾವುದೇ ಘಟನೆಗಳು ಕಂಡುಬರದೇ, ಕೇವಲ ಹಣ ಕೊಡುವ ಹಾಗೂ ತೆಗೆದುಕೊಂಡು ಹೊರಹೋಗುವ ದೃಶ್ಯಾವಳಿ ಮಾತ್ರ ಕಂಡುಬಂದಿದೆ. ಈ ಸಂದರ್ಭ ಪುತ್ತೂರು ಎಎಸ್ಪಿ ರಿಷ್ಯಂತ್ ಯುವತಿ ಹಾಗೂ ಹಿಂದೂ ಸಂಘಟನೆಯ ಮುಖಂಡರಿಗೆ ತನಿಖೆಯು ನ್ಯಾಯಯುತವಾಗಿ ನಡೆಯುತ್ತಿದೆ ಎಂದು ಮನವರಿಕೆ ಮಾಡಿದರು. ಈ ಸಂದರ್ಭದಲ್ಲಿ ಹಿಂದೂ ಸಂಘಟನೆಯ ಮುಖಂಡರಾದ ರವಿಪ್ರಸಾದ ಶೆಟ್ಟಿ, ರವಿಚಂದ್ರ ಹೊಸವಕ್ಲು, ಹಾಗೂ ಯುವತಿಯ ಹೆತ್ತವರು ಉಪಸ್ಥಿತರಿದ್ದರು. ಪುತ್ತೂರು ಎಎಸ್ಪಿ ನಿರ್ದೇಶನದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಅನಿಲ್ ಕುಲಕರ್ಣಿ, ಎಸ್ಸೈ ತಿಮ್ಮಪ್ಪ ನಾಕ್, ಹಾಗೂ ನೆಲ್ಯಾಡಿ ಹೊರಠಾಣೆಯ ಸಿಬ್ಬಂದಿ ಮಹಜರು ನಡೆಸಿದರು.
‘ಸುಳ್ಳು ಆರೋಪ ಹೊರಿಸಿ ತೇಜೋವಧೆಗೆ ಯತ್ನ’
ನೆಲ್ಯಾಡಿ ಪೇಟೆಯಲ್ಲಿ ಜವಾಬ್ದಾರಿಯುತ ವರ್ತಕನಾಗಿ ಹಲವು ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದ ನನ್ನ ಏಳಿಗೆಯನ್ನು ಸಹಿಸದ ವ್ಯಕ್ತಿಗಳು ಯುವತಿಯ ಮೂಲಕ ಸುಳ್ಳು ದೂರು ನೀಡಿ ನನ್ನ ತೇಜೋವಧೆಗೆ ಯತ್ನಿಸಿದ್ದಾರೆ. ಪೊಲೀಸ್ ಇಲಾಖೆ ಹಾಗೂ ಕಾನೂನಿಗೆ ಗೌರವ ಕೊಟ್ಟು ತನಿಖೆಗೆ ಎಲ್ಲಾ ರೀತಿಯಿಂದಲೂ ಸಹಕರಿಸಿದ್ದೇನೆ ಇದೀಗ ದೂರುದಾರರ ಹಾಗೂ ಅವರನ್ನು ಪ್ರಚೋದಿಸಿದ ವ್ಯಕ್ತಿಗಳ ಎದುರಲ್ಲೇ ಸಿಸಿ ಟಿವಿಯ ದೃಶ್ಯಾವಳಿಯನ್ನು ಪರಿಶೀಲಿಸಿದ್ದು, ಆದರೆ ಅವರು ಆರೋಪಿಸಿದಂತಹ ಯಾವುದೇ ಮಾನಭಂಗದಂತಹ ಕೃತ್ಯಗಳು ನಡೆದಿಲ್ಲ ಎನ್ನುವುದು ಸಾಬೀತಾಗಿದೆ. ಈ ಪ್ರಕರಣದಲ್ಲಿ ನನ್ನ ತೇಜೋವಧೆಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುವಂತೆ ದೂರು ನೀಡಲಾಗುವುದು ಎಂದು ನೆಲ್ಯಾಡಿ ಝೀ ಮೊಬೈಲ್ ಶಾಪ್‌ನ ಮಾಲಕ ಸಲೀಮ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X