ಚಿಕ್ಕಪೇಟೆಯಲ್ಲಿ ಎಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ; ಓರ್ವ ಸಜೀವದಹನ

ಬೆಂಗಳೂರು, ಸೆ.16: ಇಲ್ಲಿನ ಚಿಕ್ಕಪೇಟೆಯ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದಕ್ಕೆ ಇಂದು ಬೆಳಗ್ಗಿನ ಜಾವ ಬೆಂಕಿ ಬಿದ್ದಿದ್ದು, ಘಟನೆಯಲ್ಲಿ ಓರ್ವನ ಸಜೀವದಹನವಾಗಿದೆ.
ಶುಕ್ರವಾರ ಮುಂಜಾನೆ 4.30ರ ಸುಮಾರಿಗೆ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಮಾಯಾ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ನಾಲ್ಕು ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ. ಈ ದುರಂತದಲ್ಲಿ ಇಬ್ಬರಿಗೆ ಗಾಯವಾಗಿದೆ, 2 ಬೈಕ್‌ಗಳು ಸುಟ್ಟು ಕರಕಲಾಗಿವೆ.
ಅಗ್ನಿ ಶಾಮಕದಳದ 9 ವಾಹನಗಳು ಸತತ ಮೂರು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದೆ.
ಶಾರ್ಟ್ ಸರ್ಕ್ಯೂಟ್ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಆರಂಭದಲ್ಲಿ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಬಳಿಕ ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿತು.ಕೆಲ ಮಹಡಿಯಲ್ಲಿದ್ದ ಎರಡು ಬೈಕ್ ಮತ್ತು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಮೂಲಗಳು ತಿಳಿಸಿವೆ.
Next Story





