ಸಿಎಂ ಸಿದ್ದರಾಮಯ್ಯ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ: ಜನಾರ್ದನ ಪೂಜಾರಿ

ಮಂಗಳೂರು, ಸೆ.16: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸಿಎಂ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ. ಯಾರ ಸಲಹೆಗಳನ್ನೂ ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಸಿಎಂ ತಮ್ಮನ್ನು ತಾವೇ ಜ್ಞಾನಿ ಎಂದುಕೊಂಡಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಆರೋಪಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸಿಎಂ ಯಾರ ಮಾತುಗಳನ್ನೂ ಕೇಳುತ್ತಿಲ್ಲ. ವ್ಯತಿರಿಕ್ತ ತೀರ್ಪಿನಿಂದಾಗಿ ಮೂರು ರಾಜ್ಯಗಳು ಹೊತ್ತಿ ಉರಿಯಬಹುದು. ಹೀಗಾಗಿ ಈ ವಿಚಾರದಲ್ಲಿ ನ್ಯಾಯಕ್ಕಾಗಿ ದೇವರ ಮೊರೆ ಹೋಗಲು ಚಿಂತನೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಸೆ.18ರಂದು ಕುದ್ರೋಳಿ ದೇವಾಲಯದಲ್ಲಿ ಉರುಳುಸೇವೆ ನಡೆಯಲಿದೆ ಎಂದು ಹೇಳಿದರು.
ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಯುವಂತೆ ಪ್ರಾರ್ಥಿಸುವ ನಿಟ್ಟಿನಲ್ಲಿ ಸೆ.18 ರಂದು ಕುದ್ರೋಳಿ ದೇವಸ್ಥಾನದಲ್ಲಿ ಉರುಳು ಸೇವೆ ನಡೆಯಲಿದೆ. ಕರ್ನಾಟಕ, ತಮಿಳ್ನಾಡು, ಕೇರಳದ ಮೂರು ರಾಜ್ಯಗಳ ಜನ ಭಾಗವಹಿಸಬೇಕು. ಮೂರೂ ರಾಜ್ಯಗಳ ಜನರ ಸೌಹಾರ್ದಕ್ಕಾಗಿ ಉರುಳು ಸೇವೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಕೂಡಾ ಉರುಳುಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪೂಜಾರಿ ಹೇಳಿದರು.





