ಪಾಕ್ ಮಸೀದಿಯಲ್ಲಿ ಆತ್ಮಹತ್ಯಾ ಬಾಂಬ್: 23 ಸಾವು

ಪೇಶಾವರ, ಸೆ. 16: ಪಾಕಿಸ್ತಾನದ ವಾಯುವ್ಯ ಬುಡಕಟ್ಟು ಪ್ರದೇಶದಲ್ಲಿರುವ ಮುಹ್ಮಂಡ್ ಏಜನ್ಸಿಯ ಮಸೀದಿಯೊಂದರಲ್ಲಿ ಶುಕ್ರವಾರ ಆತ್ಮಹತ್ಯಾ ಬಾಂಬರ್ ಓರ್ವ ತನ್ನನ್ನು ತಾನು ಸ್ಫೋಟಿಸಿಕೊಂಡಾಗ ಕನಿಷ್ಠ 23 ಮಂದಿ ಮೃತಪಟ್ಟಿದ್ದಾರೆ ಹಾಗೂ 29 ಮಂದಿ ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನದೊಂದಿಗೆ ಗಡಿ ಹೊಂದಿರುವ ಏಜನ್ಸಿಯ ಅಂಬರ್ ತಹಶೀಲಿನಲ್ಲಿರುವ ಮಸೀದಿಯೊಂದರಲ್ಲಿ ಶುಕ್ರವಾರದ ವಿಶೇಷ ಪ್ರಾರ್ಥನೆ ನಡೆಯುತ್ತಿದ್ದಾಗ ಹತ್ಯಾಕಾಂಡ ಸಂಭವಿಸಿದೆ.
Next Story





