ಕೋಡಿ: ಬ್ಯಾರೀಸ್‌ನ ಇಬ್ಬರು ಶಿಕ್ಷಕರಿಗೆ ‘ಆದರ್ಶ ಶಿಕ್ಷಕ’ ಪ್ರಶಸ್ತಿ

ಕುಂದಾಪುರ, ಸೆ.16: ಉಡುಪಿ ಜಿಲ್ಲಾಡಳಿತ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಉಡುಪಿಯ ಸಹಯೋಗದಲ್ಲಿ ಪ್ರದಾನ ಮಾಡುವ 2016ರ ಸಾಲಿನ ‘ಆದರ್ಶ ಶಿಕ್ಷಕ ಪ್ರಶಸ್ತಿ’ಯನ್ನು ಬ್ಯಾರೀಸ್ ಶಿಕ್ಷಣ ಸಂಸ್ಥೆಗಳ ಇಬ್ಬರು ಶಿಕ್ಷಕರಿಗೆ ಪ್ರದಾನ ಮಾಡಲಾಯಿತು.
ಹಾಜಿ.ಕೆ.ಮೊಹಿದಿನ್ ಬ್ಯಾರಿ ಸ್ಮಾರಕ ಅನುದಾನಿತ ಪ್ರೌಢಶಾಲೆ ಕೋಡಿಯ ಮುಖ್ಯ ಶಿಕ್ಷಕಿ ಜಯಂತಿ ಹಾಗೂ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಕೋಡಿಯ ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡ ಇವರು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಇವರಿಂದ ಪ್ರಶಸ್ತಿ ಸ್ವೀಕರಿಸಿದರು.
ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
Next Story





