Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತುರ್ತು ಸಂದರ್ಭದಲ್ಲೂ ಕೈಚೀಲಗಳನ್ನು...

ತುರ್ತು ಸಂದರ್ಭದಲ್ಲೂ ಕೈಚೀಲಗಳನ್ನು ಹುಡುಕಿ ಭಾರತೀಯ ಪ್ರಯಾಣಿಕರು ಕೆಳಗಿಳಿದರು

ಎಮಿರೇಟ್ಸ್ ವಿಮಾನ ತುರ್ತು ಭೂಸ್ಪರ್ಶ ಘಟನೆಯ ವರದಿ

ವಾರ್ತಾಭಾರತಿವಾರ್ತಾಭಾರತಿ16 Sept 2016 7:58 PM IST
share
ತುರ್ತು ಸಂದರ್ಭದಲ್ಲೂ ಕೈಚೀಲಗಳನ್ನು ಹುಡುಕಿ ಭಾರತೀಯ ಪ್ರಯಾಣಿಕರು ಕೆಳಗಿಳಿದರು

ದುಬೈ, ಸೆ. 16: ದುಬೈಯಲ್ಲಿ ಕಳೆದ ತಿಂಗಳು ಅಪ್ಪಳಿಸುವ ರೀತಿಯಲ್ಲಿ ಭೂಸ್ಪರ್ಶ ಮಾಡಿದ್ದ ಎಮಿರೇಟ್ಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಯಾಣಿಕರ ವರ್ತನೆ ಭಾರೀ ಟೀಕೆಗೆ ಗುರಿಯಾಗಿದೆ.

ಘಟನೆಯ ಬಗ್ಗೆ ತನಿಖೆ ನಡೆಸಿರುವ ಯುಎಇಯ ವಾಯುಯಾನ ಅಧಿಕಾರಿಗಳು, ಸಾವು-ಬದುಕಿನ ಸಂದರ್ಭದಲ್ಲೂ ಭಾರತೀಯರು ತುರ್ತಾಗಿ ವಿಮಾನದಿಂದ ಇಳಿಯುವ ಬದಲು ತಮ್ಮ ಲಗೇಜ್‌ಗಳನ್ನು ಹುಡುಕುತ್ತಿದ್ದರು ಎಂಬ ಅಂಶದ ಬಗ್ಗೆ ಗಮನ ಸೆಳೆದಿದ್ದಾರೆ.

ಇಕೆ-521 ವಿಮಾನ ಆಗಸ್ಟ್ 3ರಂದು ತಿರುವನಂತಪುರಂನಿಂದ ದುಬೈಗೆ 282 ಪ್ರಯಾಣಿಕರನ್ನು ಹೊತ್ತುಕೊಂಡು ಹಾರುತ್ತಿತ್ತು. ಆ ಪೈಕಿ 226 ಮಂದಿ ಭಾರತೀಯರು.

ದುಬೈ ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಕೆಲವೇ ನಿಮಿಷಗಳಲ್ಲಿ ವಿಮಾನ ಬೆಂಕಿಗಾಹುತಿಯಾಗಿತ್ತು.

ಪವಾಡಸದೃಶ ರೀತಿಯಲ್ಲಿ, ವಿಮಾನದಲ್ಲಿ ಬೆಂಕಿ ಹೊತ್ತಿಕೊಳ್ಳುವ ಮೊದಲೇ ಪ್ರಯಾಣಿಕರನ್ನು ತೆರವುಗೊಳಿಸಲಾಗಿತ್ತು. ಈ ಮಹತ್ವದ ಕ್ಷಣಗಳಲ್ಲಿನ ಪ್ರಯಾಣಿಕರ ನಡವಳಿಕೆ ಬಗ್ಗೆ ಘಟನೆಯ ತನಿಖೆ ನಡೆಸಿರುವ ಯುಎಇ ನಾಗರಿಕ ವಾಯುಯಾನ ಪ್ರಾಧಿಕಾರ ಮಹತ್ವದ ಟಿಪ್ಪಣಿಯೊಂದನ್ನು ತಯಾರಿಸಿದೆ.

ನಿಮ್ಮ ಕೈಚೀಲಗಳನ್ನು ಬಿಟ್ಟು ವಿಮಾನದಿಂದ ಹೊರಗೋಡಿ ಎಂಬುದಾಗಿ ವಿಮಾನ ಸಿಬ್ಬಂದಿ ಗೋಗರೆಯುತ್ತಿದ್ದರೂ, ಪ್ರಯಾಣಿಕರು ಆರಾಮವಾಗಿ ತಮ್ಮ ಚೀಲಗಳನ್ನು ಹುಡುಕಿ ತೆಗೆದು ಹೇಗೆ ಹೊರನಡೆದರು ಎಂಬ ಬಗ್ಗೆ ವರದಿ ಬೆಳಕು ಚೆಲ್ಲಿದೆ.

ವರದಿಯು ಭಾರತೀಯರನ್ನು ಹೆಸರಿಸಿಲ್ಲವಾದರೂ, ಅದು ಯಾರ ಬಗ್ಗೆ ಮಾತನಾಡುತ್ತಿದೆ ಎನ್ನುವುದು ಸ್ಪಷ್ಟವಾಗಿದೆ. ಯಾಕೆಂದರೆ, ವಿಮಾನ ಪ್ರಯಾಣಿಕರ ಪೈಕಿ 80 ಶೇಕಡಷ್ಟು ಮಂದಿ ಭಾರತೀಯರು.

‘‘ವಿಮಾನ ರನ್‌ವೇಗೆ ಅಪ್ಪಳಿಸಿ ರನ್‌ವೇಯಿಂದ ಹೊರಗೆ ಜಾರಿದಾಗ, ಪ್ರಯಾಣಿಕರು ತಮ್ಮ ಸೀಟ್‌ಬೆಲ್ಟ್‌ಗಳನ್ನು ಬಿಚ್ಚಿ ಎದ್ದು ನಿಲ್ಲಲು ಆರಂಭಿಸಿರು. ತಮ್ಮ ಆಸನಗಳಲ್ಲಿಯೇ ಇರುವಂತೆ ಘೋಷಣೆ ಮಾಡಲಾಯಿತು. ವಿಮಾನ ನಿಲುಗಡೆಗೆ ಬಂದಾಗ, ಕೆಲವು ಪ್ರಯಾಣಿಕರು ತಮ್ಮ ವಸ್ತುಗಳನ್ನು ಹಿಡಿದುಕೊಂಡು ಚೀರುತ್ತಿದ್ದರು ಹಾಗೂ ಬಾಗಿಲು ತೆರೆಯುವಂತೆ ವಿಮಾನ ಸಿಬ್ಬಂದಿಯನ್ನು ಕೇಳುತ್ತಿದ್ದರು’’ ಎಂದು ವರದಿ ಹೇಳಿದೆ.

 ‘‘ಸಿಬ್ಬಂದಿ ವಿಮಾನದ ಸುರಕ್ಷಾ ಕ್ರಮಗಳನ್ನು ಪಾಲಿಸುತ್ತಿದ್ದರು. ಅದರ ಪ್ರಕಾರ, ಪ್ರಯಾಣಿಕರನ್ನು ವಿಮಾನದಿಂದ ತೆರವುಗೊಳಿಸುವಾಗ ಕೈಚೀಲಗಳನ್ನು ಒಯ್ಯುವಂತಿಲ್ಲ. ತಮ್ಮ ಚೀಲಗಳನ್ನು ಬಿಟ್ಟುಬಿಡುವಂತೆ ಸಿಬ್ಬಂದಿ ಸೂಚಿಸಿದರು. ಆದರೆ, ತಮ್ಮ ಕೈಚೀಲಗಳನ್ನು ಹಿಡಿದುಕೊಂಡೇ ಹೆಚ್ಚಿನ ಪ್ರಯಾಣಿಕರು ವಿಮಾನದಿಂದ ಇಳಿದರು’’ ಎಂದು ಅದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X