Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಂದು ಜೀವ ಉಳಿಸಲು ತಮ್ಮ ಜೀವ ಪಣಕ್ಕಿಟ್ಟು...

ಒಂದು ಜೀವ ಉಳಿಸಲು ತಮ್ಮ ಜೀವ ಪಣಕ್ಕಿಟ್ಟು ಕಾಲ್ನಡಿಗೆಯಲ್ಲಿ ತಮಿಳುನಾಡು ಪ್ರವೇಶಿಸಿದ ಕರ್ನಾಟಕದ ವೈದ್ಯರು !

‘‘ಎರಡು ದೇಶಗಳ ನಡುವಿನ ಗಡಿ ದಾಟಿದ ಅನುಭವವಾಯಿತು’’

ವಾರ್ತಾಭಾರತಿವಾರ್ತಾಭಾರತಿ17 Sept 2016 2:17 PM IST
share
ಒಂದು ಜೀವ ಉಳಿಸಲು ತಮ್ಮ ಜೀವ ಪಣಕ್ಕಿಟ್ಟು ಕಾಲ್ನಡಿಗೆಯಲ್ಲಿ ತಮಿಳುನಾಡು ಪ್ರವೇಶಿಸಿದ ಕರ್ನಾಟಕದ ವೈದ್ಯರು !

ಬೆಂಗಳೂರು, ಸೆ.17: ಬುಧವಾರ ರಾತ್ರಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಾವಲಿದ್ದ ಪೊಲೀಸ್ ಸಿಬ್ಬಂದಿಗೊಂದು ಆಶ್ಚರ್ಯ ಕಾದಿತ್ತು. ಅದಾಗಲೇ ಒಂದು ಗಂಟೆಯಾಗಿತ್ತು. ನಾಲ್ಕು ವೈದ್ಯರ ತಂಡವೊಂದು ಆ್ಯಂಬುಲೆನ್ಸ್ ಒಂದರಿಂದ ಕೆಳಗಿಳಿದು ಗಾಲಿ ಕುರ್ಚಿಯಲ್ಲಿದ್ದ ರೋಗಿಯೊಬ್ಬರೊಂದಿಗೆ ತಮ್ಮ ಜೀವವನ್ನೇ ಪಣಕ್ಕಿಟ್ಟು ಕಾಲ್ನಡಿಗೆಯಲ್ಲಿ ತಮಿಳುನಾಡಿನತ್ತ ನಡೆದಿದ್ದರು.
ಬೆಂಗಳೂರಿನಲ್ಲಿರುವ ಮಣಿಪಾಲ್ ಹಾಸ್ಪಿಟಲ್ ಇಲ್ಲಿನ ಲಿವರ್ ಟ್ರಾನ್ಸ್ ಪ್ಲಾಂಟ್ ತಂಡನಾಗ್ಪುರದ 55 ವರ್ಷದ ಡಯಾಬಿಟೀಸ್ ರೋಗಿಯೊಬ್ಬರ ಜೀವವುಳಿಸಲು ನಿರ್ಧರಿಸಿದಾಗಕಾವೇರಿ ಹಿಂಸಾಚಾರದ ಹಿನ್ನೆಲೆಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿತ್ತು. ಈ ರೋಗಿ ಅಂಗ ಕಸಿಗಾಗಿ ಕಳೆದ ಎರಡೂವರೆ ವರ್ಷಗಳಿಂದ ಕಾದಿದ್ದರು. ಇಲ್ಲಿ ಇನ್ನೊಂದು ಕುತೂಹಲಕಾರಿ ಅಂಶವೆಂದರೆ ಎರಡೂ ರಾಜ್ಯಗಳ ನಡುವೆ ಕಾವೇರಿ ವಿಚಾರದಲ್ಲಿ ಉದ್ವಿಗ್ನ ವಾತಾವರಣವಿದ್ದ ಹೊರತಾಗಿಯೂ ತಮಿಳುನಾಡಿನ ಕುಟುಂಬವೊಂದು ಅಂಗದಾನ ಮಾಡಲು ನಿರ್ಧರಿಸಿತ್ತು.

ಅಂಗ ಕಸಿ ಮಾಡುವ ವೈದ್ಯರ ತಂಡದ ನೇತೃತ್ವ ವಹಿಸಿದ್ದ ಕನ್ಸಲ್ಟೆಂಟ್ ಹೆಪಟಾಲಜಿಸ್ಟ್ ಹಾಗೂ ಮಣಿಪಾಲ್ ಹಾಸ್ಪಿಟಲ್ ಇಲ್ಲಿನ ಲಿವರ್ ಟ್ರಾನ್ಸ್ ಪ್ಲಾಂಟೇಶನ್ ವಿಭಾಗದ ಮುಖ್ಯಸ್ಥರೂ ಆಗಿರುವ ಡಾ.ಎ.ಒಲಿಥ್ ಸೆಲ್ವನ್ ಅವರ ಮಾತಿನಲ್ಲಿಯೇ ಈ ಗಡಿ ದಾಟುವ ಅನುಭವವನ್ನು ಕೇಳಿ. ‘‘ತಮಿಳುನಾಡಿನಿಂದ ಅಂಗ ದಾನ ಮಾಡಲುಕುಟುಂಬವೊಂದು ನಿರ್ಧರಿಸಿದಾಗ ಎರಡೂ ರಾಜ್ಯಗಳ ನಡುವಿನ ಕಾವೇರಿ ವಿಚಾರದ ಕಹಿ ಸಂಬಂಧವನ್ನು ಪರಿಗಣಿಸಿ ನಾವು ಈ ಆಫರ್ ನಿರಾಕರಿಸಬಹುದಾಗಿತ್ತು. ಆದರೆ ಹಾಗೆ ಮಾಡಿದ್ದರೆ ನಾವು ರೋಗಿಯೊಬ್ಬರ ಜೀವವನ್ನು ಉಳಿಸಲು ಸಾಧ್ಯವಾಗುತ್ತಿರಲಿಲ್ಲ. ಕರ್ನಾಟಕ-ತಮಿಳುನಾಡು ಗಡಿ ತಲುಪುತ್ತಿದ್ದಂತೆ ನಾವು ಗಾಲಿಕುರ್ಚಿಯನ್ನು ಆ್ಯಂಬುಲೆನ್ಸ್ನಿಂದ ಹೊರತಂದು ಅದರಲ್ಲಿ ರೋಗಿಯನ್ನು ಕುಳ್ಳಿರಿಸಿ ಸುಮಾರು ಒಂದು ಕಿ.ಮೀ. ದೂರ ನಡೆದು ಗಡಿ ದಾಟಿ ಮತ್ತೆ ತಮಿಳುನಾಡು ರಿಜಿಸ್ಟ್ರೇಶನ್ ಆ್ಯಂಬುಲೆನ್ಸ್ ಸಹಾಯ ಪಡೆದವು. ಆ ಅರ್ಧಗಂಟೆಗಳ ನಡಿಗೆ ಮುಗಿಯುವುದೇ ಇಲ್ಲವೇನೋ ಎಂದು ನಮಗನಿಸುತ್ತಿತ್ತು. ಎರಡು ದೇಶಗಳ ಗಡಿ ದಾಟಿದ ಅನುಭವ ನಮಗಾಗಿತ್ತು’’ ಎಂದು ಅವರು ವಿವರಿಸುತ್ತಾರೆ.
ತಂಡ ಆಸ್ಪತ್ರೆಗೆ ತಲುಪಿದಾಗ ಮುಂಜಾವು 3 ಗಂಟೆ. ಮುಂದೆ 12 ಗಂಟೆಗಳ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಯಿತು. ಅಂಗದಾನ ಪಡೆದ ರೋಗಿ ಈಗ ಗುಣಮುಖರಾಗುತ್ತಿದ್ದಾರೆ ಎಂದು ಡಾ.ಒಲಿಥ್ ಸೆಲ್ವನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X