ಮೂಡುಬಿದಿರೆ : ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

ಮೂಡಬಿದಿರೆ,ಸೆ.17: ಪದವಿಪೂರ್ವ ಕಾಲೇಜುಗಳ ಪುರುಷರ ಮತ್ತು ಮಹಿಳೆಯರ ವಿಭಾಗದ ದ.ಕ.ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಉದ್ಯಮಿ ಶ್ರೀಪತಿ ಭಟ್ ಮೂಡಬಿದಿರೆ ರೋಟರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಶನಿವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವವನ್ನು ಬೆಳೆಸುತ್ತದೆ ಹಾಗೂ ಮಾನಸಿಕ ಮತ್ತು ದೈಹಿಕವಾಗಿಯೂ ಸದೃಢಗೊಳಿಸುತ್ತದೆ ಎಂದು ಹೇಳಿದರು. ರೋಟರಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಕೆ.ಅಮರನಾಥ ಶೆಟ್ಟಿ ಸಮಾರಂಭದ ಅಧ್ಯಕ್ಷತೆವಹಿಸಿ ಫಲಕ ಅನಾವರಣಗೊಳಿಸಿದರು.
ಸನ್ಮಾನ : ಎಡಪದವು ವಿವೇಕಾನಂದ ಪ.ಪೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ, ಹಿರಿಯರ ಕ್ರೀಡಾ ವಿಭಾಗದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪ್ರೇಮನಾಥ್ ಶೆಟ್ಟಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ನಿರ್ದೇಶಕ ಶಶಿಧರ್ ಮಾಣಿ, ಆಡಳಿತಾಧಿಕಾರಿ ಶುಭಕರ ಅಂಚನ್, ಕಾರ್ಪೋರೇಷನ್ ಬ್ಯಾಂಕ್ ವ್ಯವಸ್ಥಾಪಕ ಸದಾನಂದ ಶೆಟ್ಟಿ, ಅತಿಥಿಗಳಾಗಿ ಭಾಗವಹಿಸಿದ್ದರು.
ರೋಟರಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ವಿನ್ಸೆಂಟ್ ಡಿ’ಕೋಸ್ತ ಸ್ವಾಗತಿಸಿದರು. ರೋಟರಿ ಶಾಲೆಯ ದೈಹಿಕ ನಿರ್ದೇಶಕ ಸುಧೀರ್ ಕುಮಾರ್ ಸನ್ಮಾನಿತರ ಪತ್ರ ವಾಚಿಸಿದರು. ಸತೀಶ್ಚಂದ್ರ ಚಿತ್ರಾಪು ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಗಜಾನನ ಮರಾಠ ವಂದಿಸಿದರು.







