Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ಪರ್ಧೆಯಲ್ಲಿ ಜಯಗಳಿಸುವ ಗುರಿ ಇರಲಿ: ...

ಸ್ಪರ್ಧೆಯಲ್ಲಿ ಜಯಗಳಿಸುವ ಗುರಿ ಇರಲಿ: ಜಿಲ್ಲಾಧಿಕಾರಿ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ17 Sept 2016 10:36 PM IST
share
ಸ್ಪರ್ಧೆಯಲ್ಲಿ ಜಯಗಳಿಸುವ ಗುರಿ ಇರಲಿ:  ಜಿಲ್ಲಾಧಿಕಾರಿ

ದಾವಣಗೆರೆ, ಸೆ.17: ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಕ್ರೀಡೆಯಲ್ಲಿ ಉತ್ಸಾಹ, ಹುಮ್ಮಸ್ಸನ್ನು ಮೈಗೂಡಿಸಿಕೊಂಡು ಪ್ರಶಸ್ತಿ ತರುವಂತಹ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಕ್ರೀಡಾಪಟುಗಳಿಗೆ ಕರೆ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ದಾವಣಗೆರೆ ಜಿಲ್ಲಾಮಟ್ಟದ 2 ದಿನಗಳ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಮಟ್ಟದಲ್ಲಿರುವಂತಹ ಉತ್ಸಾಹ, ಹುಮ್ಮಸ್ಸನ್ನು ಕಳೆದುಕೊಳ್ಳದೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿಯೂ ಹೊಂದಿ ಪ್ರತಿಸ್ಪರ್ಧಿಯಜೊತೆ ಬಲಶಾಲಿಯಾಗಿ ಹೋರಾಡಿ ಪ್ರಶಸ್ತಿಪಡೆದು ಜಿಲ್ಲೆಗೆ ಕೀರ್ತಿಯನ್ನು ತರುವಂತೆ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಮಟ್ಟದಲ್ಲಿಯೂ ಕ್ರೀಡಾ ಮನೋಭಾ ವದಿಂದ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಿ ಮುಂದಿನ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಯಾವ ಆಟಗಾರರ ತಂಡವನ್ನು ಆಯ್ಕೆ ಮಾಡಬೇಕೆಂಬ ಸವಾಲು ತೀರ್ಪುಗಾರರಲ್ಲಿ ಮೂಡುವಂತಹ ರೀತಿ ಸ್ಪರ್ಧೆ ಎದುರಿಸುವಂತೆ ಕಿವಿ ಮಾತು ಹೇಳಿದರು. ಸೋಲು ಗೆಲುವು ಸಹಜ. ಸೋಲು ಕಂಡಾಗ ನಿರಾಶರಾಗದೆ ಸೋಲೆ ಗೆಲುವಿನ ಮೆಟ್ಟಿಲು ಎಂಬುದನ್ನು ಅರಿತು ಸ್ಪರ್ಧೆಯಲ್ಲಿ ಜಯಗಳಿಸುವ ಗುರಿಯನ್ನು ಹೊಂದುವಂತೆ ಸಲಹೆ ನೀಡಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಉಮಾ ಎಂ.ಪಿ. ರಮೇಶ್ ಮಾತನಾಡಿ, ದೈಹಿಕ, ಮಾನಸಿಕವಾಗಿ ಸದೃಢರಾ ಗಬೇಕಾದರೆ ಕ್ರೀ

ೆ ಅತ್ಯವಶ್ಯಕ. ಶಿಕ್ಷಣಕ್ಕೆ ಒತ್ತು ನೀಡಿದಂತೆ ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಿ. ಕ್ರೀಡೆಯು ಶಿಕ್ಷಣದ ಅವಿಭಾಜ್ಯ ಅಂಗ. ಕೇವಲ ಅಂಕಗಳಿಗೆ ಸೀಮಿತರಾಗದೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೈಹಿಕ ಮತ್ತು ಮಾನಸಿಕವಾಗಿ ಸಬಲಗೊಳ್ಳುವಂತೆ ತಿಳಿಸಿದರು. ಮೇಯರ್ ಅಶ್ವಿನಿ ಪ್ರಶಾಂತ್ ಮಾತನಾಡಿ, ಕ್ರೀಡೆಗೆ ವಯಸ್ಸಿನ ಅಂತರವಿಲ್ಲ. ಕ್ರೀಡಾಪಟುಗಳು ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿ ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಹಾಗೂ ದಸರಾ ಪ್ರಶಸ್ತಿಯನ್ನು ಗಳಿಸಬೇಕು ಎಂದ ಅವರು, ಜಿಲ್ಲಾ ಕ್ರೀಡಾಂಗಣದಲ್ಲಿ ದೀಪದ ವ್ಯವಸ್ಥೆ ಸೇರಿದಂತೆ ಅಭಿವೃದ್ಧಿಗಾಗಿ ನಗರ ಪಾಲಿಕೆಯಿಂದ 10 ಲಕ್ಷ ರೂ. ಅನುದಾನವನ್ನು ನೀಡಲಾಗಿದೆ. ಕ್ರೀಡಾಂಗಣದಲ್ಲಿ ಶೌಚಾಲಯದ ಕೊರತೆ ಇದೆ ಎಂಬ ಮನವಿ ಹಿನ್ನೆಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಜಾಗವನ್ನು ಗುರುತಿಸಿಕೊಂಡು ಅಗತ್ಯ ಶೌಚಾಲಯ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

  ಇದೇ ವೇಳೆ ಕುಸ್ತಿ ಪಟು ಅರ್ಜುನ್‌ಗೆ ಅಭಿನಂದಿಸಿ ಗೌರವಿಸಲಾಯಿತು. ದಸರಾ ಕ್ರೀಡಾಕೂಟದ ಪ್ರಯುಕ್ತ ಅಥ್ಲೆಟಿಕ್ಸ್, ಖೋಖೋ, ಕಬಡ್ಡಿ, ವಾಲಿಬಾಲ್,ಥ್ರೋಬಾಲ್, ಫುಟ್‌ಬಾಲ್ ಸೇರಿದಂತೆ ಇನ್ನಿತರ ಕ್ರೀಡೆಗಳು ಜರಗಿದವು. ಈ ಕ್ರೀಡೆಗಳಿಗೆ 6 ತಾಲೂಕುಗಳಿಂದ ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಮೇಯರ್‌ರಾಜಶೇಖರ್ ಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಡಿ. ಸಿದ್ದಪ್ಪ, ಸಹಾಯಕ ನಿರ್ದೇಶಕ ಬಿ.ಶ್ರೀನಿವಾಸ, ಕುಸ್ತಿ ತರಬೇತುದಾರ ಶಿವನಾಂದ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X