Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಗ್ನೇಶ್ ಬಂಧನ ಖಂಡಿಸಿ ಪ್ರತಿಭಟನೆ:...

ಜಿಗ್ನೇಶ್ ಬಂಧನ ಖಂಡಿಸಿ ಪ್ರತಿಭಟನೆ: ನೂರಾರು ಕಾರ್ಯಕರ್ತರ ಬಂಧನ, ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ17 Sept 2016 11:45 PM IST
share
ಜಿಗ್ನೇಶ್ ಬಂಧನ ಖಂಡಿಸಿ ಪ್ರತಿಭಟನೆ: ನೂರಾರು ಕಾರ್ಯಕರ್ತರ ಬಂಧನ, ಬಿಡುಗಡೆ

ಬೆಂಗಳೂರು, ಸೆ.17: ಗುಜರಾತ್ ಭೇಟಿ ವೇಳೆ ದಲಿತ ಚಳವಳಿ ಮುಖಂಡ ಜಿಗ್ನೇಶ್ ಮೆವಾನಿಯನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ನಗರದ ಟೌನ್‌ಹಾಲ್ ಮುಂಭಾಗ ಪ್ರತಿಭಟನೆ ನಡೆಸಿದ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.

 ದಿಲ್ಲಿಯಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಜಂಟಿಯಾಗಿ ಸಂಘಟಿಸಿದ್ದ ದಲಿತ ಸ್ವಾಭಿಮಾನಿ ರ್ಯಾಲಿಯಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಿ, ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿತ್ತು.

 ಗುಜರಾತ್‌ಗೆ ಎರಡು ದಿನಗಳ ಭೇಟಿ ನೀಡುವ ಸಲುವಾಗಿ ಆಗಮಿಸಿದ್ದ ಮೆವಾನಿಯನ್ನು, ಮೋದಿಯ ಹುಟ್ಟುಹಬ್ಬದ ಪ್ರಯುಕ್ತ ಯಾವುದೇ ಪ್ರತಿಭಟನೆಗಳು ನಡೆಯಬಾರದು ಎಂಬ ಉದ್ದೇಶದಿಂದ ಬಂಧಿಸಿ ಅಜ್ಞಾತ ಸ್ಥಳದಲ್ಲಿರಿಸಿಕೊಂಡಿದ್ದನ್ನು ನೋಡಿದರೆ ಮೋದಿಗೆ ಮೆವಾನಿಯನ್ನು ಕಂಡರೆ ಭಯವಾಗುತ್ತದೆ ಎಂದೆನಿಸುತ್ತಿದೆ ಎಂದು ಪ್ರತಿಭಟನಾಕಾರರು ಲೇವಡಿ ಮಾಡಿದರು.

ಉನಾ ಚಳವಳಿಯ ಒತ್ತಾಯಗಳ ಈಡೇರಿಕೆಗಾಗಿ ದೇಶದಾದ್ಯಂತ ಎಲ್ಲ ದಲಿತ, ಎಡ ಮತ್ತು ಪ್ರಜಾಸತ್ತಾತ್ಮಕ ಐಕ್ಯ ಚಳವಳಿಯನ್ನು ಸಂಘಟಿಸುವ ಉದ್ದೇಶದಿಂದ ನಡೆಸಿದ್ದ ಸ್ವಾಭಿಮಾನ ರ್ಯಾಲಿಯು ಮೋದಿಯ ನಿದ್ದೆ ಕೆಡಿಸಿದೆ. ಈ ಹಿನ್ನೆಲೆಯಲ್ಲಿ ಹೋರಾಟವನ್ನು ಹತ್ತಿಕ್ಕುವ ದೃಷ್ಟಿಯಿಂದ ಅವರನ್ನು ಬಂಧಿಸಲಾಗಿದೆ.

 ಅಲ್ಲದೆ, ಮುಂದುವರಿದಿರುವ ಜಿಗ್ನೇಶ್ ಗುಜರಾತ್‌ನಲ್ಲಿ ಅ.1 ರಿಂದ ಸರಣಿ ಚಳವಳಿಗಳನ್ನು ನಡೆಸಲು ಮುಂದಾಗಿದ್ದಾರೆ. ಇದರಿಂದ ಆತಂಕಕ್ಕೆ ಒಳಗಾಗಿರುವ ಗುಜರಾತ್‌ನ ಬಿಜೆಪಿ ಸರಕಾರ ಅವರನ್ನು ಬಂಧಿಸುವ ಮೂಲಕ ಚಳ ವಳಿಯ ಮುಂಚೂಣಿಯಲ್ಲಿರುವ ಕಾರ್ಯಕರ್ತರಲ್ಲಿ ಭಯ ಹುಟ್ಟಿಸುವ ಪ್ರಯತ್ನ ಮಾಡಲು ಮುಂದಾಗಿದೆ. ಆದರೆ, ದಲಿತ ಸ್ವಾಭಿಮಾನಿ ಚಳವಳಿಗಾರರು ಇದಕ್ಕೆ ಬೆದರುವುದಿಲ್ಲ. ಅಷ್ಟೇ ಅಲ್ಲದೆ, ಏಕತೆ ಮತ್ತು ದೃಢತೆ ಯಿಂದ ಚಳವಳಿಯನ್ನು ಮುನ್ನಡೆಸುತ್ತೇವೆ ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಹುಟ್ಟುಹಬ್ಬಕ್ಕೆ ಉಡುಗೊರೆಯಾಗಿ ಅಹಮದಾಬಾದಿನಲ್ಲಿ ನಕಲಿ ಗೋ ರಕ್ಷಕರು ಮಹಮ್ಮದ್ ಅಯ್ಯೂಬ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ನಗರದ ಬನ್ನೇರುಘಟ್ಟ ಪ್ರದೇಶದಲ್ಲಿ ಮುಸ್ಲಿಂ ಕುಟುಂಬವನ್ನು ಗೋಹತ್ಯೆಯ ನೆಪದಲ್ಲಿ ಪೊಲೀಸರು ಬಂಧಿಸಿದ್ದಾರೆ.

ದೇಶದಲ್ಲಿ ದಲಿತ, ಮುಸ್ಲಿಮರ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ದಾಳಿ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ಅದಕ್ಕೆ ಪ್ರತಿರೋಧವಾಗಿ ದಲಿತ, ಮುಸ್ಲಿಂ ಐಕ್ಯ ಚಳವಳಿ ಬೆಳೆಯುತ್ತಿದ್ದು, ಅದನ್ನು ಯಶಸ್ವಿಯಾಗಿ ಮುನ್ನಡೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಹಿಳಾ ಚಳವಳಿಯ ಮುಖಂಡರಾದ ವಿಮಲಾ ಹೇಳಿದರು.

ವಿದ್ಯಾರ್ಥಿ ಮುಖಂಡರಾದ ಗುರುರಾಜ್‌ದೇಸಾಯಿ, ಹನುಮಂತ್, ಮಹಿಳಾ ನಾಯಕಿಯರಾದ ಶಾರದಾ, ವಿಮಲಾ, ಸುನಂದಮ್ಮ, ಯುವಜನ ಸಂಘಟನೆ ಮುಖಂಡರಾದ ಶಿವು ಸೇರಿದಂತೆ ನೂರಾರು ಜನರನ್ನು ಬಂಧಿಸಿ, ನಂತರ ಬಿಡುಗಡೆಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X