Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಚಲೋ ಉಡುಪಿ: ಉನಾ ಮಾದರಿ ಹೋರಾಟಕ್ಕೆ ಭರದ...

ಚಲೋ ಉಡುಪಿ: ಉನಾ ಮಾದರಿ ಹೋರಾಟಕ್ಕೆ ಭರದ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ18 Sept 2016 12:14 AM IST
share
ಚಲೋ ಉಡುಪಿ: ಉನಾ ಮಾದರಿ ಹೋರಾಟಕ್ಕೆ ಭರದ ಸಿದ್ಧತೆ

ಉಡುಪಿ, ಸೆ.17: ಗೋರಕ್ಷಣೆಯ ಹೆಸರಿನಲ್ಲಿ ಅಲ್ಪಸಂಖ್ಯಾತರು ಹಾಗೂ ದಲಿತರ ಮೇಲೆ ದೇಶಾದ್ಯಂತ ನಡೆಯುತ್ತಿರುವ ಹಲ್ಲೆ, ದೌರ್ಜನ್ಯಗಳನ್ನು ವಿರೋಧಿ ಸಲು ಅ.4ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಉದ್ಘಾಟನೆ ಗೊಳ್ಳುವ ಚಲೋ ಉಡುಪಿ ಸ್ವಾಭಿಮಾನಿ ಸಂಘರ್ಷ ಜಾಥಾ ಅ.9ರಂದು ಉಡುಪಿಗೆ ಬರಲಿದೆ. ದಲಿತ, ಹಿಂದುಳಿದ ಸಮುದಾಯಗಳ ವಿವಿಧ ಸಂಘಟನೆಗಳೊಂದಿಗೆ ಪ್ರಗತಿ ಪರ ಸಂಘಟನೆಗಳ ಆಶ್ರಯದಲ್ಲಿ ನಡೆಯುವ ಈ ಜಾಥಾದಲ್ಲಿ ಸುಮಾರು 25 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ನಡೆಸಬೇಕಾದ ಕಾರ್ಯಕ್ರಮ, ಸಿದ್ಧತೆಗಳ ಕುರಿತಂತೆ ಚರ್ಚಿಸಲು ಮೊದಲ ಹಂತದ ಪೂರ್ವಭಾವಿ ಸಭೆ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಇತ್ತೀಚೆಗೆ ನಡೆಯಿತು. ಕರ್ನಾಟಕ ಕೋಮು ಸೌಹಾರ್ದ ವೇದಿಕೆ, ವಿವಿಧ ದಲಿತ ಸಂಘರ್ಷ ಸಮಿತಿಗಳು, ಸಿಐಟಿಯು, ಅಲ್ಪಸಂಖ್ಯಾತರ ವೇದಿಕೆ, ಮುಸ್ಲಿಮ್ ಒಕ್ಕೂಟ, ಕೆಥೊಲಿಕ್ ಸಭಾ, ಎಸ್‌ಐಒ, ಬೌದ್ಧ ಮಹಾಸಭಾ ಮತ್ತಿ ತರ ಸಂಘಟನೆಗಳ ಮುಖ್ಯಸ್ಥರು ಇದರಲ್ಲಿ ಭಾಗವಹಿಸಿದ್ದಾರೆ. ಅ.9ರಂದು ಉಡುಪಿ ಬೋರ್ಡ್ ಹೈಸ್ಕೂಲ್‌ನಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸುವುದು. ಬೀಡಿನಗುಡ್ಡೆಯಲ್ಲಿರುವ ಮಹಾತ್ಮ ಗಾಂಧಿ ಬಯಲು ಕ್ರೀಡಾಂಗಣದಲ್ಲಿ ಸಮಾರೋಪ ಸಭೆ ಸಂಘಟಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಇದಕ್ಕಾಗಿ ತಾತ್ಕಾಲಿಕ ಸ್ವಾಗತ ಸಮಿತಿ ರಚಿಸಲಾಗಿದ್ದು, ಅಧ್ಯಕ್ಷರಾಗಿ ಸುಂದರ ಮಾಸ್ತರ್, ಸಂಚಾಲಕರಾಗಿ ಶ್ಯಾಮರಾಜ ಬಿರ್ತಿ, ಹುಸೈನ್ ಕೋಡಿಬೆಂಗ್ರೆ ಕಾರ್ಯ ನಿರ್ವ ಹಿಸಲಿದ್ದಾರೆ. ಸೆ.25ರಂದು ಎರಡನೆ ಹಂತದ ಪೂರ್ವಭಾವಿ ಸಭೆ ನಡೆಯಲಿದೆ.
  ಮೊದಲ ಸಭೆಯಲ್ಲಿ ವಿವಿಧ ಸಂಘಟನೆಗಳ ನಾಯಕರಾದ ಬಿ.ಆರ್.ಭಾಸ್ಕರ ಪ್ರಸಾದ್, ಹರ್ಷ ಕುಮಾರ್ ಕುಗ್ವೆ, ದಿನೇಶ್ ಕುಮಾರ್ ದಿನೂ, ಕೆ.ಎಲ್.ಅಶೋಕ್, ಮುನೀರ್ ಕಾಟಿಪಳ್ಳ, ಗುಲಾಬಿ ಬಿಳಿಮಲೆ, ಜಯನ್ ಮಲ್ಪೆ, ಶ್ಯಾಮರಾಜ ಬಿರ್ತಿ, ವಿಠಲ ತೊಟ್ಟಂ, ಸುಂದರ ಕಪ್ಪೆಟ್ಟು, ಸುಂದರ ಮಾಸ್ತರ್, ಸುರೇಶ್ ಮಾಸ್ತರ್, ವರದರಾಜ ಬಿರ್ತಿ, ಪರಮೇಶ್ವರ್ ಉಪ್ಪೂರು, ಾ.ವಿಲಿಯಂ ಮಾರ್ಟಿಸ್, ಸಿರಿಲ್ ಮಥಾಯಿಸ್, ಬಾಲಕೃಷ್ಣ ಶೆಟ್ಟಿ, ಬಿ.ವಿ.ಭಟ್, ಸಲಾಹುದ್ದೀನ್, ಖತೀಬ್ ಅಬ್ದುರ್ರಶೀದ್, ಮುಹಮ್ಮ್ಮದ್ ಇದ್ರೀಸ್, ಹುಸೈನ್, ಯಾಸೀನ್ ಕೋಡಿಬೆಂಗ್ರೆ, ಜಿ.ರಾಜಶೇಖರ್, ಣಿರಾಜ್, ದಿನಕರ ಬೆಂಗ್ರೆ, ಉಮೇಶ್ ಅಂಬಲಪಾಡಿ, ಶಶಿಧರ ಹೆಮ್ಮಾಡಿ, ಸುಮಾ, ಗೀತಾ ಪಾಂಗಳ, ಶಂಭು ಮಾಸ್ತರ್ ಮತ್ತಿತರರು ಭಾಗವಹಿಸಿದ್ದರು.

ಅ.4ರಂದು ಜಾಥಾ ಉದ್ಘಾಟನೆ
ಅ.4ರಂದು ಪೂರ್ವಾಹ್ನ 11ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಿರಿಯ ಸಾಹಿತಿ ದೇವನೂರ ಮಹಾದೇವ ಜಾಥಾ ವನ್ನು ಉದ್ಘಾಟಿಸಲಿದ್ದಾರೆ. ಸಂಜೆ 5ಕ್ಕೆ ನೆಲಮಂಗಲದಲ್ಲಿ ಬಹಿ ರಂಗ ಸಭೆ ಹಾಗೂ ನಾಟಕ ಪ್ರದರ್ಶನ ನಡೆಯಲಿದೆ.
‘ಆಹಾರ ನಮ್ಮ ಆಯ್ಕೆ- ಭೂಮಿ ನಮ್ಮ ಹಕ್ಕು’ ಘೋಷಣೆಯೊಂದಿಗೆ ಈ ಅಭಿಯಾನ ನಡೆಯಲಿದೆ. ಗೋರಕ್ಷಣೆ ಹೆಸರಲ್ಲಿ ಅಮಾ ನವೀಯ ಕೃತ್ಯಗಳ ಖಂಡನೆಗಾಗಿ, ಭೂಮಿ, ಆಹಾರದ ಹಕ್ಕುಗಳಿಗಾಗಿ ಉನಾ ಮಾದರಿ ಯಲ್ಲಿ ಈ ಚಳವಳಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X