ಎಕ್ಕೂರಿನಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿದರೆ ಕಠಿಣ ಕ್ರಮ: ಕಮಿಷನರ್
.jpg)
ಮಂಗಳೂರು, ಸೆ.18:ನಗರದ ಎಕ್ಕೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವ ವಾಹನ ಸವಾರ ಮೇಲೆ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಸಿದ್ದಾರೆ.
ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಕ್ಕೂರಿನಿಂದ ಪಂಪ್‌ವೆಲ್ ಕಡೆಗೆ ಬರುವವರು ವಿರುದ್ಧ ದಿಕ್ಕಿನಲ್ಲಿ ಸಂಚಾರ ಮಾಡುತ್ತಿದ್ದು ಇದರಿಂದ ಭಾರೀ ಅಪಾಯ ಉಂಟಾಗುವ ಸಾಧ್ಯತೆಯಿದೆ. ಜನರು ಈ ಬಗ್ಗೆ ಜಾಗೃತರಾಗಬೇಕು ಎಂದು ತಿಳಿಸಿದರು.
ಶನಿವಾರ ಎಕ್ಕೂರಿನಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿದ ಹತ್ತು ವಾಹನಗಳ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು.
Next Story





