Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮುದಾಯ ಭವನ ಸರ್ವರಿಗೂ ಸದುಪಯೋಗವಾಗಲಿ:...

ಸಮುದಾಯ ಭವನ ಸರ್ವರಿಗೂ ಸದುಪಯೋಗವಾಗಲಿ: ಶಾಸಕ ಬಿ.ಬಿ.ನಿಂಗಯ್ಯ

ಅಂಬೇಡ್ಕರ್ ಸಮುದಾಯ ಭವನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 Sept 2016 10:13 PM IST
share
ಸಮುದಾಯ ಭವನ ಸರ್ವರಿಗೂ ಸದುಪಯೋಗವಾಗಲಿ: ಶಾಸಕ ಬಿ.ಬಿ.ನಿಂಗಯ್ಯ

ಚಿಕ್ಕಮಗಳೂರು, ಸೆ.18: ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಗಳು ಸ್ಥಳೀಯ ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಿ ಸರ್ವಜನಾಂಗಕ್ಕೂ ಸದು ಪಯೋಗವಾದಾಗ ಯೋಜನೆ ಫಲಪ್ರದವಾಗುತ್ತದೆ ಎಂದು ಶಾಸಕ ಬಿ.ಬಿ. ನಿಂಗಯ್ಯ ತಿಳಿಸಿದ್ದಾರೆ.

ಅವರು ರವಿವಾರ ತಾಲೂಕಿನ ತೊಂಡವಳ್ಳಿ ಮತ್ತು ನಂದಿಕೆ ರೆಯಲ್ಲಿ 20ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಅಂಬೇಡ್ಕರ್ ಸಮುದಾಯ ಭವನಗಳನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮದ ಸಾರ್ವಜನಿಕ ಸ್ಥಳಗಳು ಸ್ವಚ್ಛತೆಯಿಂದ ಕೂಡಿದಾಗ ಆರೋಗ್ಯ ವೃದ್ಧ್ದಿಗೆ ಸಹಕಾರಿಯಾಗುತ್ತದೆ. ಸಮುದಾಯ ಭವನಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಒಗ್ಗೂಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಜಿಲ್ಲೆ, ರಾಜ್ಯಗಳಿಗೆ ಪರಿಚಯಿಸುವ ಮೂಲಕ ಸಹಕಾರಿಯಾಗಬೇಕು ಎಂದರು. ನನ್ನ ಕ್ಷೇತ್ರದ ಬಸ್ಕಲ್, ಆಲ್ದೂರು, ಬೂದನಿಕೆ, ಬಸಗೋಡು, ಬಾಳೆಹಳ್ಳಿ, ಕೆಳಗೂರು, ಗಾಳಿಪೇಟೆ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಸಮುದಾಯ ಭವನಗಳನ್ನು ನಿರ್ಮಾಣ ಮಾಡಿ ಅನುಕೂಲ ಮಾಡಿಕೊಡಲಾಗಿದೆ. ಈ ಭವನಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸ್ಥಳೀಯರ ಸಲಹೆ, ಸಹಕಾರ ಪಡೆದು ಒಂದು ಸಮಿತಿಯನ್ನು ರಚಿಸಲಾಗುತ್ತದೆ. ಅಗತ್ಯವಿರುವವರಿಗೆ ಸಮುದಾಯ ಭವನಗಳನ್ನು ನೀಡಬೇಕಾದರೆ ಅವರಿಂದ ಸ್ವಲ್ಪ ನಿರ್ವಹಣಾ ವೆಚ್ಚ ಪಡೆದರೆ ವರ್ಷಕ್ಕೊಮ್ಮೆ ಸುಣ್ಣ ಬಣ್ಣಬಳಿದು ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗಲು ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಮಾತನಾಡಿ, ಸಮುದಾಯ ಭವನಗಳನ್ನು ಯಾವ ಜಾತಿಗೂ ಸೀಮಿತ ಮಾಡಿ ಕೊಳ್ಳದೆ, ಎಲ್ಲರೂ ಒಂದಾಗಿ ಸಭೆ ಸಮಾರಂಭಗಳನ್ನು ಮಾಡಿ ಪ್ರೀತಿ ವಿಶ್ವಾಸದಿಂದ ಬಾಳಲು ಸಹಕಾರಿಯಾಗಬೇಕು. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ರಹಿತವಾಗಿ ಬಡವರ್ಗದ ಜನರ ಧ್ವನಿಯಾಗಿ ಸಮಾಜದ ಹಿತಕಾಯೋಣ ಎಂದರು.

ಹಿರೇಮಗಳೂರು ಕಣ್ಣನ್ ಮಾತನಾಡಿ, ರಾಜಕೀಯದ ನಾಲ್ಕಕ್ಷರಕ್ಕೆ ಅರ್ಥ ಹೇಳಿ ಹಾಸ್ಯ ಚಟಾಕಿಯಿಂದಲೇ ಮಾತನಾಡ ಾರಂಭಿಸಿ ನೆರೆದಿದ್ದ ಗ್ರಾಮಸ್ಥರನ್ನು ನಗೆಗಡಲಲ್ಲಿ ತೇಲಿಸಿದ ಅವರು, ಪ್ರಾಣೇಶ್, ನಿಂಗಯ್ಯ ಅವರು ಸರಳ ಸಜ್ಜನ ರಾಜಕಾರಣಿಗಳು ಎಂದು ಹೇಳಿದರು. ಜನಪ್ರತಿನಿಧಿಗಳು ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಮುಂದಾಗಿ ಊರಿನ ಜನರ ಹಿತಕಾಯುವಲ್ಲಿ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಸಕ ಬಿ.ಬಿ. ನಿಂಗಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಜಿಪಂ ಸದಸ್ಯ ಹಿರಿಗಯ್ಯ, ತಾಪಂ ಸದಸ್ಯ ಡಿ.ಜೆ. ಸುರೇಶ್, ನಗರಸಭೆ ಸದಸ್ಯ ಎಚ್.ಎಸ್. ಪುಟ್ಟಸ್ವಾಮಿ, ಗ್ರಾಪಂ ಅಧ್ಯಕ್ಷ ವಸ್ತಾರೆ ರವಿ, ಉಪಾಧ್ಯಕ್ಷೆ ಜ್ಯೋತಿ, ಸದಸ್ಯರಾದ ಪಾರ್ವತಮ್ಮ, ಅನ್ನಪೂರ್ಣ, ಲಲಿತಾ, ರವಿ, ಸೋಮಶೇಖರ್, ವಸ್ತಾರೆ ಹೋಬಳಿ ಕಸಾಪ ಅಧ್ಯಕ್ಷ ನಿಂಗೇಗೌಡ, ಕಣ್ಣಪ್ಪ, ಹೊಳಗೇರಳ್ಳಿ ಸುರೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X